ಮಂಗಳೂರು ವಿಮಾನ ನಿಲ್ದಾಣದಲ್ಲಿ 60 ಲಕ್ಷ ಮೌಲ್ಯದ ಅಕ್ರಮ ಚಿನ್ನ ಸಾಗಾಟ..!
ಮಂಗಳೂರು ಡಿಸೆಂಬರ್ 13: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಮೂರು ಪ್ರಯಾಣಿಕರನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಅವರಿಂದ 969 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಇಂಡಿಯನ್ ಎಕ್ಸ್ ಪ್ರೆಸ್ ವಿಮಾನದಲ್ಲಿ ಬಂದ ಪ್ರಯಾಣಿಕರ ತಪಾಸಣೆ ವೇಳೆ ಈ ಅಕ್ರಮ ಸಾಗಾಟದ ಪ್ರಕರಣ ಬೆಳಕಿಗೆ ಬಂದಿದೆ.
ಮೂವರು ಪ್ರಯಾಣಿಕರು ಶೂ ಮತ್ತು ಚಾಕಲೇಟ್ ಬಾಕ್ಸ್ ಹಾಗೂ ಬೆಡ್ ಶೀಟ್ ಗಳಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದಾರೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ 60, 07,800 ಎಂದು ಅಂದಾಜಿಸಲಾಗಿದೆ.
ಬಂಟ್ವಾಳ – ಸಿಸಿಟಿವಿಯಲ್ಲಿ ಸೆರೆಯಾದ ಹೆಲ್ಮೆಟ್ ಧರಿಸಿದ ಕಳ್ಳನ ಕರಾಮತ್
ಬಂಟ್ವಾಳ ಡಿಸೆಂಬರ್ 11 : ಅಂಗಡಿಗಳಿಗೆ ನುಗ್ಗಿ ಸರಣಿ ಕಳವು ಮಾಡಿದ ಘಟನೆ ಬಿಸಿರೋಡಿನ ಕೈಕಂಬ ಎಂಬಲ್ಲಿ ಆದಿತ್ಯವಾರ ರಾತ್ರಿ ವೇಳೆನಡೆದಿದೆ. ಬಿ.ಸಿ.ರೋಡಿನ ಕೈಕಂಬದಲ್ಲಿ ಒಟ್ಟು 12 ಅಂಗಡಿಗಳಿಗೆ ಕಳ್ಳನೋರ್ವ ನುಗ್ಗಿ ಜಾಲಾಡಿ ಬಳಿಕ ಮೂರು ಅಂಗಡಿಗಳಿಗೆ ನುಗ್ಗಿದ್ದಾನೆ. ಇದರಲ್ಲಿ ಮೂರು ಅಂಗಡಿಗಳಿಂದ ಸುಮಾರು 61 ಸಾವಿರ ರೂ ಕಳವು ಮಾಡಿದ್ದಾನೆ.
ಇಲ್ಲಿನ ಡಿಶ್ ಟಿ.ವಿ .ರಿಚಾರ್ಜ್ ಅಂಗಡಿಯೊಂದರಲ್ಲಿ ಇಡಲಾಗಿದ್ದ ಸುಮಾರು 52 ಸಾವಿರ ನಗದು, ಸಾಯಿ ಲೀಲಾ ಹೋಟೆಲ್ ನ 6 ಸಾವಿರ ಹಾಗೂ ಇನ್ನೊಂದು ಅಂಗಡಿಯಿಂದ 3 ಸಾವಿರ ರೂ ನಗದು ಕಳವು ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದೆ. ಕಳ್ಳರು ಇಲ್ಲಿನ ಹೊಟೇಲ್, ಸಹಕಾರಿ ಸಂಘಗಳ ಕಚೇರಿ ಸಹಿತ ಮತ್ತಿತರ ಅಂಗಡಿಗಳಿಗೆ ನುಗ್ಗಿ ಜಾಲಾಡಿ ವಾಪಸು ಹೋಗಿದ್ದಾನೆ.
ಶನಿವಾರ ರಾತ್ರಿ ವೇಳೆ ಭಾರಿ ಮಳೆ ಇದ್ದು, ಕಳ್ಳ ಇದೇ ಸಮಯವನ್ನು ಬಂಡವಾಳವಾಗಿ ಸಿಕೊಂಡು ಕಳವು ಮಾಡಿರಬೇಕು ಎಂದು ಹೇಳಲಾಗಿದೆ. ಕಳ್ಳ ನೋರ್ವ ಬೈಕಿನಲ್ಲಿ ಬಂದು ಅಬಳಿಕ ಹೆಲ್ಮಟ್ ಧರಿಸಿ ಅಂಗಡಿಗಳಿಗೆ ನುಗ್ಗಿದ ಬಗ್ಗೆ ಇಲ್ಲಿನ ಸಿ.ಸಿ.ಟಿವಿಯಲ್ಲಿ ಸೆರೆಯಾಗಿದೆ ಎಂದು ಹೇಳಲಾಗಿದೆ. ಬಂಟ್ವಾಳ ನಗರ ಠಾಣಾ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ,ಕಳ್ಳ ನಿಗಾಗಿ ಬಲೆ ಬೀಸಿದ್ದಾರೆ.