ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆಪ್‌ ಸರ್ಕಾರದ ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಅಕ್ರಮ; ಸಿಬಿಐ ತನಿಖೆಗೆ ಆದೇಶ!

Twitter
Facebook
LinkedIn
WhatsApp
ಆಪ್‌ ಸರ್ಕಾರದ ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಅಕ್ರಮ; ಸಿಬಿಐ ತನಿಖೆಗೆ ಆದೇಶ!

ನವದೆಹಲಿ: ಅರವಿಂದ್ ಕೇಜ್ರಿವಾಲ್ (Arvind Kejriwal) ನೇತೃತ್ವದ ಆಮ್ ಆದ್ಮಿ ಪಕ್ಷದ (AAP) ಸರ್ಕಾರದ ಬಹುನಿರೀಕ್ಷಿತ ಯೋಜನೆ ಮೊಹಲ್ಲಾ ಕ್ಲಿನಿಕ್‌ಗಳಲ್ಲಿ (Mohalla Clinic) ಕಳಪೆ ಔಷಧಿಗಳ ವಿತರಣೆ, ನಕಲಿ ರೋಗಶಾಸ್ತ್ರ ಮತ್ತು ರೇಡಿಯಾಲಜಿ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ಕೇಂದ್ರ ಗೃಹ ಸಚಿವಾಲಯ ಸಿಬಿಐಗೆ (CBI) ತನಿಖೆಗೆ ಆದೇಶಿಸಿದೆ.

ಅಕ್ರಮದ ವರದಿ ಹಿನ್ನೆಲೆ ಸಿಬಿಐ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಗುರುವಾರ ಶಿಫಾರಸು ಮಾಡಿದ್ದರು. ಈ ಶಿಫಾರಸು ಆಧರಿಸಿ ಕೇಂದ್ರ ಗೃಹ ಸಚಿವಾಲಯ ಸಿಬಿಐಗೆ ಆದೇಶಿಸಿದೆ.

ಲೆಫ್ಟಿನೆಂಟ್ ಗವರ್ನರ್ ಕಚೇರಿಯ ಮೂಲಗಳ ಪ್ರಕಾರ ವೈದ್ಯರ ಅನುಪಸ್ಥಿತಿಯಲ್ಲಿ ಅನಧಿಕೃತ / ವೈದ್ಯಕೀಯೇತರ ಸಿಬ್ಬಂದಿ ರೋಗಿಗಳಿಗೆ ಪರೀಕ್ಷೆಗಳು ಮತ್ತು ಔಷಧಿಗಳನ್ನು ಶಿಫಾರಸು ಮಾಡಿದ್ದಾರೆ ಎನ್ನಲಾಗಿದೆ. ಲೆಫ್ಟಿನೆಂಟ್ ಗವರ್ನರ್‌ಗೆ ಸಲ್ಲಿಸಿದ ಆರೋಗ್ಯ ಇಲಾಖೆ ವರದಿಯಲ್ಲಿ ರೋಗಿಗಳ ನೋಂದಣಿ ಮತ್ತು ಅವರ ಮೇಲೆ ನಡೆಸಲಾದ ಪ್ರಯೋಗಾಲಯ ಪರೀಕ್ಷೆಗಳಿಗೆ ನಕಲಿ ಮೊಬೈಲ್ ಸಂಖ್ಯೆಗಳನ್ನು ಬಳಸಲಾಗಿದೆ ಎಂದು ಉಲ್ಲೇಖಿಸಲಾಗಿದೆ.

ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಗಂಭೀರ ಮೋಸ ಪತ್ತೆಯಾದ ಬಳಿಕ ಲೆಫ್ಟಿನೆಂಟ್ ಗವರ್ನರ್ ಸಿಬಿಐ ತನಿಖೆಗೆ ಆದೇಶಿಸಿದ್ದಾರೆ ಎಂದು ಮೂಲಗಳು ಹೇಳಿವೆ. ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ದೆಹಲಿ ಬಿಜೆಪಿ ನಾಯಕ ಹರೀಶ್ ಖುರಾನಾ, ನಕಲಿ ಔಷಧ ಹಗರಣದ ನಂತರ, ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ನಕಲಿ ಲ್ಯಾಬ್ ಪರೀಕ್ಷೆಯ (Lab Test) ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. ದೆಹಲಿ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಎಎಪಿ ನಾಯಕರು ಭ್ರಷ್ಟಾಚಾರದಲ್ಲಿ (Corruption) ಮುಳುಗಿದ್ದಾರೆ. ಇದು ಅತ್ಯಂತ ಖಂಡನೀಯ. ಎಎಪಿ ನಾಯಕರು ದೆಹಲಿಯ ಬಡ ನಿವಾಸಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಮುಂದುವರಿದು ದೆಹಲಿಯ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಅವರನ್ನು ವಜಾಗೊಳಿಸುವಂತೆ ನಾನು ಒತ್ತಾಯಿಸುತ್ತೇನೆ ಎಂದು ಅವರು ಹೇಳಿದರು. ಲೆಫ್ಟಿನೆಂಟ್ ಗವರ್ನರ್ ಶಿಫಾರಸು ಮಾಡಿರುವ ಸಿಬಿಐ ತನಿಖೆಯನ್ನು ಗಮನಿಸಿದ್ದೇವೆ ಎಂದು ದೆಹಲಿ ಸರ್ಕಾರದ ಮೂಲಗಳು ಸೂಚಿಸಿವೆ. ದೆಹಲಿ ಆರೋಗ್ಯ ಕಾರ್ಯದರ್ಶಿಯನ್ನು ಅಮಾನತುಗೊಳಿಸಲು ಸರ್ಕಾರ ಶಿಫಾರಸು ಮಾಡುವ ಸಾಧ್ಯತೆಯಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist