ಚಾಮರಾಜನಗರದಲ್ಲಿ ಬೃಹತ್ ಸಾಫ್ಟ್ ಡ್ರಿಂಕ್ ಕಾರ್ಖಾನೆ, ಕೋಟಿ ಕೋಟಿ ಹೂಡಿಕೆ ಮಾಡುತ್ತಾರೆ ಮುತ್ತಯ ಮುರಳಿದರು!

ಚಾಮರಾಜನಗರ : ವಿಶ್ವ ವಿಖ್ಯಾತ ಕ್ರಿಕೆಟಿಗ, ಸ್ಪಿನ್ ಮಾಂತ್ರಿಕ ಎಂದೇ ಪ್ರಸಿದ್ಧಿಯಾಗಿರುವ ಮುತ್ತಯ್ಯ ಮುರಳೀಧರನ್ ಕೈಗಾರಿಕೋದ್ಯಮಿಯಾಗಿ ಮತ್ತೇ ಮೋಡಿ ಮಾಡಲು ಕರ್ನಾಟಕಕ್ಕೆ ಬರುತ್ತಿದ್ದಾರೆ. ಅದರಲ್ಲೂ ಕರ್ನಾಟಕದ ಚಾಮರಾಜನಗರದಲ್ಲಿ ಕಾರ್ಖಾನೆ ಸ್ಥಾಪನೆ ಮಾಡಲು ಮುಂದಾಗಿರುವುದೇ ವಿಶೇಷ.
ಗಡಿಜಿಲ್ಲೆ ಚಾಮರಾಜನಗರದ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸಾಫ್ಟ್ ಡ್ರಿಂಕ್ ಕಾರ್ಖಾನೆಯನ್ನು ಆರಂಭಿಸಲು ಮುಂದಾಗಿದ್ದಾರೆ. ಈ ಹಿನ್ನೆಲೆ 46 ಹೆಕ್ಟೇರ್ ಪ್ರದೇಶವನ್ನು ಖರೀದಿಸಿ, ಆಡಳಿತಾತ್ಮಕವಾದ ಎಲ್ಲಾ ಹಂತಗಳನ್ನೂ ಮುಗಿಸಿ ಕಾರ್ಕಾನೆ ನಿರ್ಮಾಣ ಕಾರ್ಯವನ್ನು ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.
ಶ್ರೀಲಂಕಾ ತಂಡದ ಮಾಜಿ ಕ್ರಕೆಟ್ ಆಟಗಾರ ಈ ಕಾರ್ಖಾನೆಯಲ್ಲಿ ಮುತ್ತಯ್ಯ ಬೆವರೇಜಸ್ ಹೆಸರಿನಲ್ಲಿ ಸಾಫ್ಟ್ ಡ್ರಿಂಕ್, ಕೂಲ್ ಡ್ರಿಂಕ್, ಸುವಾಸಿತ ಹಾಲನ್ನು ಕ್ಯಾನ್‌ಗಳಲ್ಲಿ ಮಾರಾಟ ಮಾಡಲಿದ್ದಾರೆ. ಚಾಮರಾಜನಗರದಲ್ಲಿ ಸಾಪ್ಟ್ ಡ್ರಿಂಕ್ ಹಾಗೂ ನಾನ್ ಆಲ್ಕೊಹಾಲಿಕ್ ಡ್ರಿಂಕ್‌ಗಳು ತಯಾರಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
250 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಹಣವನ್ನು ಚಾಮರಾಜನಗರದಲ್ಲಿ ಹೂಡಿಕೆ ಮಾಡುತ್ತಿದ್ದು, ಇದರಿಂದ ಸ್ಥಳೀಯವಾಗಿ 500-800 ಮಂದಿಗೆ ಕೆಲಸ ಸಿಗಲಿದೆ. ಪರೋಕ್ಷವಾಗಿ ನೂರಾರು ಮಂದಿ ಕಾರ್ಕಾನೆಯಿಂದ ಸಹಾಯವಾಗಾಲಿದೆ.
ಖ್ಯಾತ ಕ್ರಿಕೆಟಿಗ ಚಾಮರಾಜನಗರದಲ್ಲಿ ಕಾರ್ಖಾನೆ ಆರಂಭಿಸುವುದರಿಂದ ಮತ್ತಷ್ಟು ಕೈಗಾರಿಕೆಗಳನ್ನು ಸೆಳೆಯಲು ಅನುಕೂಲ ಆಗಲಿದೆ. ಈಗಾಗಲೇ ಬಿರ್ಲಾ ಗ್ರೂಪಿನಿಂದ ಪರಿಸರಸ್ನೇಹಿ ಬಣ್ಣದ ಕಾರ್ಖಾನೆ ಕೂಡ ನಿರ್ಮಾಣವಾಗುತ್ತಿದ್ದು, ಅಂತಿಮ ಹಂತದ ಪ್ರಕ್ರಿಯೆಯಲ್ಲಿ ಈ ಕಾರ್ಖಾನೆ ಇದೆ. ಒಟ್ಟಿನಲ್ಲಿ ಖ್ಯಾತ ಕ್ರಿಕೆಟಿಗ ಕರ್ನಾಟಕದಲ್ಲಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭ ಮಾಡಿರುವುದು ಸಂತೋಷದಾಯಕ ಬೆಳವಣಿಗೆ ಆಗಿದೆ.