ಆಲಂಕಾರಿನಲ್ಲಿ ಬಸ್ನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಮೃತ್ಯು
Twitter
Facebook
LinkedIn
WhatsApp
![images 20](https://urtv24.com/wp-content/uploads/2023/05/images-20.jpeg)
ಕಡಬ (kadaba) ತಾಲೂಕಿನ ಆಲಂಕಾರಿನಲ್ಲಿ ಚಲಿಸುತ್ತಿದ್ದ ಕೆ.ಎಸ್ ಆರ್.ಟಿ.ಸಿ ಬಸ್ಸಿನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮಂಗಳೂರಿನಿಂದ ಉಪ್ಪಿನಂಗಡಿ ಕಡಬ ಮಾರ್ಗವಾಗಿ ಸಾಗುತ್ತಿದ್ದ ಕೆ.ಎಸ್ ಆರ್.ಟಿ.ಸಿ ಬಸ್ಸಿನಲ್ಲಿ ಮೇ 25ರಂದು ಈ ಘಟನೆ ನಡೆದಿತ್ತು.
ಕಡಬ ತಾಲೂಕಿನ ರಾಮಕುಂಜ ಗ್ರಾಮದ ಗೋಳಿತ್ತಡಿ ಶಾರದಾ ನಗರದ ಗುಲಾಬಿ ಎಂಬ ಮಹಿಳೆ ಆಲಂಕಾರಿನಲ್ಲಿ ಚಲಿಸುತ್ತಿದ್ದ ಬಸ್ಸಿನಿಂದ ಮಾರ್ಗಕ್ಕೆ ಬಿದ್ದು ತಲೆಗೆ ಗಾಯವಾಗಿತ್ತು.
ತಕ್ಷಣ ಅವರಿಗೆ ಸ್ಥಳೀಯ ಕ್ಲಿನಿಕ್ ನಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.