ಭಾನುವಾರ, ಫೆಬ್ರವರಿ 23, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹಿಮಾಚಲ, ಉತ್ತರಾಖಂಡದಲ್ಲಿ ವರುಣನ ಆರ್ಭಟ – 54 ಮಂದಿ ಸಾವು

Twitter
Facebook
LinkedIn
WhatsApp
ಹಿಮಾಚಲ, ಉತ್ತರಾಖಂಡದಲ್ಲಿ ವರುಣನ ಆರ್ಭಟ – 54 ಮಂದಿ ಸಾವು

ನವದೆಹಲಿ: ಹಿಮಾಚಲ ಪ್ರದೇಶ (Himachal) ಮತ್ತು ಉತ್ತರಾಖಂಡ (Uttarakhand) ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು (Rain), ಈವರೆಗೂ 54 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹಿಮಾಚಲ ಪ್ರದೇಶ ಒಂದರಲ್ಲಿ 51 ಜನ ಸಾವನ್ನಪ್ಪಿದ್ದು, ಉತ್ತರಾಖಂಡದಲ್ಲಿ 3 ಜನ ಮೃತಪಟ್ಟಿದ್ದಾರೆ.

ಶಿಮ್ಲಾದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಭೂ ಕುಸಿತದಲ್ಲಿ (Landslide) ಈವರೆಗೂ 14 ಶವಗಳನ್ನು ಹೊರತೆಗೆಯಲಾಗಿದೆ. ಸಮ್ಮರ್ ಹಿಲ್ ಪ್ರದೇಶದ ಶಿವ ದೇವಾಲಯದ ಅವಶೇಷಗಳ ಅಡಿಯಲ್ಲಿ ಇನ್ನೂ ಹೆಚ್ಚಿನ ಜನರು ಸಿಲುಕಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಮಂಡಿ ಜಿಲ್ಲೆಯಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ 19 ಮಂದಿ ಸಾವನ್ನಪ್ಪಿದ್ದಾರೆ. ಸೋಲನ್ ಜಿಲ್ಲೆಯಲ್ಲಿ ಒಂದು ಕುಟುಂಬದ ಏಳು ಸದಸ್ಯರು ಸೇರಿದಂತೆ 11 ಜನರು ಸಾವನ್ನಪ್ಪಿದ್ದಾರೆ. ಕುಲು, ಕಿನ್ನೌರ್, ಲಾಹೌಲ್ ಮತ್ತು ಸ್ಪಿತಿ ಹೊರತುಪಡಿಸಿ ರಾಜ್ಯದ 12 ಜಿಲ್ಲೆಗಳ ಪೈಕಿ ಒಂಬತ್ತು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ಜಿಲ್ಲಾಧಿಕಾರಿ ಅರಿಂದಮ್ ಚೌಧರಿ ತಿಳಿಸಿದ್ದಾರೆ.

ಯುನೆಸ್ಕೋ ವಿಶ್ವ ಪರಂಪರೆಯ ಶಿಮ್ಲಾ-ಕಲ್ಕಾ ರೈಲು ಮಾರ್ಗವು ಶಿಮ್ಲಾದ ಸಮ್ಮರ್ ಹಿಲ್ ಬಳಿ 50 ಮೀಟರ್ ಸೇತುವೆ, ಭೂಕುಸಿತದಿಂದ ಹಾನಿಗೊಳಗಾಗಿದೆ. ಟ್ರ್ಯಾಕ್‍ನ ಒಂದು ಭಾಗ ನೇತಾಡುತ್ತಿದೆ. ಈ ಭಾಗದಲ್ಲಿ ಸೇನೆ, ಎಸ್‍ಡಿಆರ್‍ಎಫ್, ಎನ್‍ಡಿಆರ್‍ಎಫ್, ಐಟಿಬಿಪಿ ಮತ್ತು ರಾಜ್ಯ ಪೊಲೀಸ್ ಸಿಬ್ಬಂದಿ ಪರಿಹಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಲ್ಲದೇ ಉತ್ತರಾಖಂಡದಲ್ಲಿ 10 ಮಂದಿ ನಾಪತ್ತೆಯಾಗಿದ್ದಾರೆ. ಭೂಕುಸಿತ ಸಹ ಸಂಭವಿಸಿದ್ದು ಬದರಿನಾಥ್, ಕೇದಾರನಾಥ ಮತ್ತು ಗಂಗೋತ್ರಿ ದೇಗುಲಗಳಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಗಳ ಸಂಪರ್ಕ ಕಡಿತವಾಗಿದೆ. ಇದರ ಬೆನ್ನಲ್ಲೇ ಚಾರ್ಧಾಮ್ ಯಾತ್ರೆಯನ್ನು ಎರಡು ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ.

ಕೇದಾರನಾಥ ಟ್ರೆಕ್ ಮಾರ್ಗದಲ್ಲಿ ಲಿಂಚೋಲಿಯಲ್ಲಿ ಕ್ಯಾಂಪ್‍ಗೆ ಭೂಕುಸಿತ ಸಂಭವಿಸಿದ್ದು, ನಾಲ್ಕು ಅಂಗಡಿಗಳಿಗೆ ಹಾನಿಯಾಗಿದೆ. ಇದರಲ್ಲಿ ನೇಪಾಳದ ಒಬ್ಬ ಪ್ರಜೆ ಸಾವನ್ನಪ್ಪಿದ್ದಾರೆ. ಒಬ್ಬ ವ್ಯಾಪಾರಿ ನಾಪತ್ತೆಯಾಗಿದ್ದಾರೆ. ಋಷಿಕೇಶದ ಶಿವ ದೇವಾಲಯ ಮತ್ತು ಮೀರಾನಗರ ಪ್ರದೇಶಗಳ ಬಳಿ ಹೊಳೆಗಳಿಂದಲೂ ಎರಡು ಮೃತದೇಹಗಳನ್ನು ಮೇಲೆತ್ತಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಋಷಿಕೇಶ-ಕರ್ಣಪ್ರಯಾಗ ರೈಲು ಮಾರ್ಗ ಯೋಜನೆಯ `ಎಡಿಟ್ II’ ಎಂಬ ಹೆಸರಿನ ಸುರಂಗದಲ್ಲಿ ನೀರು ನುಗ್ಗಿ 114 ಕಾರ್ಮಿಕರು ಸಿಲುಕಿಕೊಂಡಿದ್ದರು. ಪೊಲೀಸರು ಸ್ಥಳಕ್ಕೆ ಧಾವಿಸಿ ಸುರಂಗದೊಳಗೆ ಸಂಗ್ರಹವಾದ ನೀರನ್ನು ಹೊರಹಾಕಿದ್ದಾರೆ. ಬಳಿಕ ಎಲ್ಲಾ 114 ಕಾರ್ಮಿಕರನ್ನು ಹಗ್ಗಗಳ ಸಹಾಯದಿಂದ ರಕ್ಷಿಸಲಾಗಿದೆ.

ತೆಹ್ರಿ, ಹರಿದ್ವಾರ ಮತ್ತು ಋಷಿಕೇಶದಲ್ಲಿ ಗಂಗಾ (Ganga River) ಸೇರಿದಂತೆ ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ. ಹರಿದ್ವಾರದಲ್ಲಿ ಗಂಗಾ ನದಿಯು 295.60 ಮೀಟರ್, ಅಪಾಯದ ಮಟ್ಟಕ್ಕಿಂತ 1.60 ಮೀಟರ್ ಎತ್ತರದಲ್ಲಿ ಹರಿಯುತ್ತಿರುವುದರಿಂದ ಪರಿಸ್ಥಿತಿ ಆತಂಕಕಾರಿಯಾಗಿದೆ. ಗಂಗಾ ನದಿಯಿಂದ ಹರಿದ್ವಾರದ ಬೈರಾಗಿ ಶಿಬಿರಕ್ಕೂ ನೀರು ನುಗ್ಗಿದೆ. ರುದ್ರಪ್ರಯಾಗ, ಶ್ರೀನಗರ, ದೇವಪ್ರಯಾಗದ ಅಲಕನಂದಾ, ಮಂದಾಕಿನಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ಎಂದು ಡೆಹ್ರಾಡೂನ್‍ನ ವಿಪತ್ತು ನಿಯಂತ್ರಣಾಲಯ ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist