ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಭಾರತದ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯ ವಿರುದ್ಧ ಭರ್ಜರಿ ಜಯ ; ಖಾತೆಯನ್ನು ತೆರೆಯದೆ ಔಟಾದ ರೋಹಿತ್, ಕಿಷನ್ ಮತ್ತು ಶ್ರೇಯಾಸ್..!

Twitter
Facebook
LinkedIn
WhatsApp
ಭಾರತದ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯ ವಿರುದ್ಧ ಭರ್ಜರಿ ಜಯ ; ಖಾತೆಯನ್ನು ತೆರೆಯದೆ ಔಟಾದ ರೋಹಿತ್, ಕಿಷನ್ ಮತ್ತು ಶ್ರೇಯಾಸ್..!

ಏಕದಿನ ವಿಶ್ವಕಪ್​ನ 5ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ  ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು ಟೀಮ್ ಇಂಡಿಯಾ ಸ್ಪಿನ್ ದಾಳಿಗೆ ತತ್ತರಿಸಿತು. ಪರಿಣಾಮ 49.3 ಓವರ್​ಗಳಲ್ಲಿ 199 ರನ್​ಗಳಿಸಿ ಆಸ್ಟ್ರೇಲಿಯಾ ಆಲೌಟ್ ಆಯಿತು. 200 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾಗೆ ಆಸೀಸ್ ವೇಗಿಗಳು ಆರಂಭಿಕ ಆಘಾತ ನೀಡಿದರು. ಆರಂಭಿಕರಾದ ಇಶಾನ್ ಕಿಶನ್ (0) ಹಾಗೂ ರೋಹಿತ್ ಶರ್ಮಾ (0) ಶೂನ್ಯಕ್ಕೆ ಔಟಾದರೆ, ಆ ಬಳಿಕ ಶ್ರೇಯಸ್ ಅಯ್ಯರ್ ಕೂಡ ಸೊನ್ನೆ ಸುತ್ತಿ ನಿರ್ಗಮಿಸಿದರು.

 

ಈ ಹಂತದಲ್ಲಿ ಜೊತೆಗೂಡಿದ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಅದ್ಭುತ ಜೊತೆಯಾಟವಾಡಿದರು. 4ನೇ ವಿಕೆಟ್​ಗೆ 165 ರನ್ ಪೇರಿಸಿದ ಈ ಜೋಡಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಈ ಹಂತದಲ್ಲಿ 85 ರನ್ ಬಾರಿಸಿದ್ದ ವಿರಾಟ್ ಕೊಹ್ಲಿ ಔಟಾದರು. ಇದಾಗ್ಯೂ ಅಜೇಯ 97 ರನ್ ಬಾರಿಸುವ ಮೂಲಕ ಕೆಎಲ್ ರಾಹುಲ್ ಟೀಮ್ ಇಂಡಿಯಾವನ್ನು 41.2 ಓವರ್​ಗಳಲ್ಲಿ ಗುರಿ ಮುಟ್ಟಿಸಿದರು. ಈ ಮೂಲಕ ಟೀಮ್ ಇಂಡಿಯಾ ಏಕದಿನ ವಿಶ್ವಕಪ್​ನ ಮೊದಲ ಪಂದ್ಯದಲ್ಲೇ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಶೇನ್, ಕ್ಯಾಮರೋನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಝಲ್‌ವುಡ್, ಆ್ಯಡಂ ಝಂಪಾ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಶಾನ್ ಅಬಾಟ್, ಮಾರ್ನಸ್ ಲಾಬುಶೇನ್, ಕ್ಯಾಮೆರೋನ್ ಗ್ರೀನ್, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ, ಮಿಚೆಲ್ ಸ್ಟಾರ್ಕ್.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ