ಬುಧವಾರ, ಅಕ್ಟೋಬರ್ 4, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತೆಲಂಗಾಣದಲ್ಲಿ 6 ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್!

Twitter
Facebook
LinkedIn
WhatsApp
ತೆಲಂಗಾಣದಲ್ಲಿ 6 ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್!

ಹೈದರಾಬಾದ್: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ನೀಡುವಲ್ಲಿ ನೆರವಾಗಿದ್ದ ‘5 ಗ್ಯಾರಂಟಿ’ಗಳನ್ನು ತೆಲಂಗಾಣದಲ್ಲಿಯೂ ಪ್ರಯೋಗಿಸಲು ಕಾಂಗ್ರೆಸ್ ಮುಂದಾಗಿದೆ. ಕರ್ನಾಟಕದ ತನ್ನ ದಿಗ್ವಿಜಯವನ್ನು ಮತ್ತೆ ಸಾಧಿಸುವ ವಿಶ್ವಾಸದಲ್ಲಿರುವ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ತೆಲಂಗಾಣ ವಿಧಾನಸಭೆ ಚುನಾವಣೆಗೂ ಮುನ್ನ ಅದೇ ರೀತಿಯ ಆರು ಗ್ಯಾರಂಟಿಗಳನ್ನು ಘೋಷಿಸಿದ್ದಾರೆ.

“ತೆಲಂಗಾಣದ ಜನರ ಆಕಾಂಕ್ಷೆಗಳನ್ನು ಈಡೇರಿಸಲು, ನಾವು (ಕಾಂಗ್ರೆಸ್) ಆರು ಗ್ಯಾರಂಟಿಗಳನ್ನು ಘೋಷಿಸುತ್ತಿದ್ದೇವೆ. ಅವುಗಳಲ್ಲಿ ಪ್ರತಿಯೊಂದನ್ನೂ ಈಡೇರಿಸಲು ನಾವು ಬದ್ಧರಾಗಿದ್ದೇವೆ” ಎಂದು ರಂಗಾರೆಡ್ಡಿ ಜಿಲ್ಲೆಯ ತುಕ್ಕುಗುಡದಲ್ಲಿನ ವಿಜಯಭೇರಿ ಸಭಾದಲ್ಲಿ ಭಾನುವಾರ ನಡೆಸಿದ ಸಾರ್ವಜನಿಕ ಸಮಾವೇಶದಲ್ಲಿ ಸೋನಿಯಾ ಗಾಂಧಿ ಹೇಳಿದರು.

ಈ ಗ್ಯಾರಂಟಿಗಳಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳೂ 2,500 ರೂ ನೀಡುವ ಮಹಾಲಕ್ಷ್ಮಿ ಯೋಜನೆ ಸೇರಿದೆ. ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆಯಂತೆಯೇ ಮಹಾಲಕ್ಷ್ಮಿ ಯೋಜನೆಯನ್ನು ಕಾಂಗ್ರೆಸ್ ಘೋಷಿಸಿದೆ. ಹಾಗೆಯೇ ಮಹಿಳೆಯರಿಗೆ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ನೀಡುವ ವಾಗ್ದಾನ ಮಾಡಿದೆ. ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು 500 ರೂ ದರದಲ್ಲಿ ನೀಡುವುದಾಗಿ ಹೇಳಿದೆ.

“ಸಮಾಜದ ಎಲ್ಲಾ ವರ್ಗಗಳ ಪರವಾಗಿಯೂ ಕೆಲಸ ಮಾಡುವಂತಹ ಕಾಂಗ್ರೆಸ್ ಸರ್ಕಾರವನ್ನು ತೆಲಂಗಾಣದಲ್ಲಿ ನೋಡುವುದು ನನ್ನ ಕನಸು” ಎಂದು ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದರು.

“ಈ ಮಹಾನ್ ರಾಜ್ಯ ತೆಲಂಗಾಣದ ಹುಟ್ಟಿನಲ್ಲಿ ಭಾಗಿಯಾಗುವ ಅವಕಾಶ ನನ್ನ ಸಹೋದ್ಯೋಗಿಗಳ ಜತೆ ನನಗೂ ಸಿಕ್ಕಿತ್ತು. ರಾಜ್ಯವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವುದು ಈಗ ನಮ್ಮ ಕರ್ತವ್ಯವಾಗಿದೆ” ಎಂದು ಸೋನಿಯಾ ಹೇಳಿದರು.

ತೆಲಂಗಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಮಾಡಿರುವ ಪ್ರಮುಖ ಭರವಸೆಗಳಲ್ಲಿ ಮಹಾಲಕ್ಷ್ಮಿ ಯೋಜನೆ ಒಂದಾಗಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಎಲ್ಲರಿಗೂ ಉಚಿತ ಶಿಕ್ಷಣ ಮತ್ತು ಆರೋಗ್ಯ ಸೇವೆ ಒದಗಿಸುವುದಾಗಿ ಹಾಗೂ ಯುವಜನರಿಗೆ ಉದ್ಯೋಗ ಸೃಷ್ಟಿಸುವುದಾಗಿ ಕೂಡ ಆಶ್ವಾಸನೆ ನೀಡಿದೆ.

ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ

ಇದಕ್ಕೂ ಮುನ್ನ ಹೈದರಾಬಾದ್‌ನಲ್ಲಿ ಎರಡು ದಿನಗಳ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಒಗ್ಗಟ್ಟು ಮತ್ತು ಸಂಘಟನಾತ್ಮಕ ಶಿಸ್ತಿನ ಬಗ್ಗೆ ಒತ್ತಿ ಹೇಳಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರು ತಮ್ಮ ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ, ಅದು ಮೂಲ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆ ಕಡೆಗೆ ತಿರುಗಿಸುತ್ತಿದೆ ಎಂದು ಆರೋಪಿಸಿದರು. ಪಕ್ಷದ ನಾಯಕರು ಅಂತಹ ಅಡತಡೆಗಳಿಂದ ದೂರ ಇದ್ದು, ನೈಜ ಸಮಸ್ಯೆಗಳ ಕಡೆ ಗಮನ ಕೇಂದ್ರೀಕರಿಸಬೇಕು. ತೆಲಂಗಾಣದಿಂದ ನಾವು ಹೊಸ ಶಕ್ತಿ ಮತ್ತು ಸ್ಪಷ್ಟ ಸಂದೇಶದೊಂದಿಗೆ ಹೋಗಲಿದ್ದೇವೆ ಎಂದು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ