ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Ind vs Aus : ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!

Twitter
Facebook
LinkedIn
WhatsApp
Ind vs Aus ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು

Ind vs Aus : ಆಸ್ಟ್ರೇಲಿಯಾ ಪ್ರವಾಸದಲ್ಲಿ ಮೊದಲ ಪಂದ್ಯ ಗೆದ್ದು ಬೀಗಿದ ಟೀಂ ಇಂಡಿಯಾ ಇದೀಗ ಎರಡನೇ ಪಂದ್ಯದಲ್ಲಿ ಮುಗ್ಗರಿಸಿದೆ. ಆಸ್ಟ್ರೇಲಿಯಾ ಬೌಲಿಂಗ್ ದಾಳಿಯಲ್ಲಿ ಮುಗ್ಗರಿಸಿದ ಟೀಂ ಇಂಡಿಯಾ ಕೇವಲ 19 ರನ್ ಟಾರ್ಗೆಟ್ ನೀಡಿತ್ತು. ಆಸ್ಟ್ರೇಲಿಯಾ ತನ್ನ 2ನೇ ಇನ್ನಿಂಗ್ಸ್‌ನಲ್ಲಿ ಈ ಸುಲಭ ಮೊತ್ತವನ್ನು ಯಾವುದೇ ವಿಕೆಟ್ ನಷ್ಟವಿಲ್ಲದೆ ಗುರಿ ಸಾಧಿಸಿತು. ಈ ಮೂಲಕ 5 ಪಂದ್ಯಗಳ ಟೆಸ್ಟ್ ಪಂದ್ಯದಲ್ಲಿ ಇದೀಗ 1-1 ಸಮಬಲಗೊಂಡಿದೆ.

ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇದೀಗ ಮುಗ್ಗರಿಸಿದೆ. ಮೂರೇ ದಿನಕ್ಕೆ ಪಿಂಕ್ ಬಾಲ್ ಟೆಸ್ಟ್ ಪಂದ್ಯ ಅಂತ್ಯಗೊಂಡಿದೆ. ಟೀಂ ಇಂಡಿಯಾ ಬ್ಯಾಟಿಂಗ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಕಾರಣ ದ್ವಿತೀಯ ಇನ್ನಿಂಗ್ಸ್‌ನಲ್ಲೂ ಟೀಂ ಇಂಡಿಯಾ ಚೇತರಿಸಿಕೊಳ್ಳಲಿಲ್ಲ. ಟಾಸ್ ಗೆದ್ದ ಅಡ್ವಾಂಟೇಟ್ ಭಾರತಕ್ಕಿತ್ತು. ಆದರೆ ಸ್ಕೋರ್ ಮಾತ್ರ ಟೀಂ ಇಂಡಿಯಾ ಪರವಾಗಿರಲಿಲ್ಲ. ಮೊದಲ ಇನ್ನಿಂಗ್ಸ್‌ನಲ್ಲಿ 180 ರನ್‌ಗೆ ಆಲೌಟ್ ಆಗಿದ್ದರೆ, 2ನೇ ಇನ್ನಿಂಗ್ಸ್‌ನಲ್ಲಿ 175 ರನ್‌ಗೆ ಆಲೌಟ್ ಆಯಿತು. ಈ ಮೂಲಕ ಕೇವಲ 18 ರನ್‌ಗಳ ಮುನ್ನಡೆ ಪಡೆದುಕೊಂಡಿತ್ತು.  19 ರನ್ ಸುಲಭ ಟಾರ್ಗೆಟ್ ಚೇಸ್ ಮಾಡಿದ ಆಸ್ಟ್ರೇಲಿಯಾ 3.2 ಓವರ್‌ಗಳಲ್ಲೇ ಪಂದ್ಯ ಮುಗಿಸಿತು. 

ದ್ವಿತೀಯ ಇನ್ನಿಂಗ್ಸ್‌ನಲ್ಲೂ ಭಾರತದ ಮಾನ ಕಾಪಾಡಿದ್ದು ನಿತೀಶ್ ರೆಡ್ಡಿ. 2ನೇ ಇನ್ನಿಂಗ್ಸ್‌ನಲ್ಲಿ ನಿತೀಶ್ ರೆಡ್ಡಿ 42 ರನ್ ಸಿಡಿಸಿದರು. ಇತರರಿಂದ ನಿರೀಕ್ಷಿತ ರನ್ ಹರಿದು ಬರಲಿಲ್ಲ. 

ವಿಕೆಟ್ ಪತನದ ನಡುವೆ ನಿತೀಶ್ ರೆಡ್ಡಿ 6 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 42 ರನ್ ಸಿಡಿಸಿ ಔಟಾದರು. ನಿಕೀಶ್ ರೆಡ್ಡಿ ಇನ್ನಿಂಗ್ಸ್‌ನಲ್ಲಿ ಭಾರತ ಮುನ್ನಡೆ ಸಾಧಿಸಿತು. ಆದರೆ ಉತ್ತಮ ಟಾರ್ಗೆಟ್ ನೀಡಲು ಸಾಧ್ಯವಾಗಲಿಲ್ಲ. ಮೊದಲ ಇನ್ನಿಂಗ್ಸ್‌ನಲ್ಲೂ ನಿತೀಶ್ ರೆಡ್ಡಿ 42 ರನ್ ಸಿಡಿಸಿದ್ದರು. ಎರಡೂ ಇನ್ನಿಂಗ್ಸ್‌ನಲ್ಲಿ ಭಾರತದ ಪರ ಗರಿಷ್ಠ ರನ್ ಸಿಡಿಸಿದ ಏಕೈಕ ಆಟದಾರ ನಿತೀಶ್ ರೆಡ್ಡಿ.

2ನೇ ಇನ್ನಿಂಗ್ಸ್‌ನಲ್ಲಿ ಯಶಸ್ವಿ ಜೈಸ್ವಾಲ್ 24 ರನ್, ಶುಭಮನ್ ಗಿಲ್ 28 ರನ್, ರಿಷಬ್ ಪಂತ್ 28 ರನ್ ಸಿಡಿಸಿದ್ದರು. ಇನ್ನು ಕೊಹ್ಲಿ 11, ನಾಯಕ ರೋಹಿತ್ ಶರ್ಮಾ 6, ಕೆಎಲ್ ರಾಹುಲ್ 7 ರನ್ ಸಿಡಿಸಿ ನಿರಾಸೆ ಅನಭವಿಸಿದರು.

ಪಿಂಕ್ ಬಾಲ್ ಟೆಸ್ಟ್ ಪಂದ್ಯದ ಸೋಲಿನಿಂದ ಭಾರತ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಟೂರ್ನಿ ಅಂಕ ಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಕುಸಿತಿದೆ. ಆರಂಭಿಕ 2 ತಂಡಗಳು ಮಾತ್ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಟೂರ್ನಿ ಫೈನಲ್ ಪಂದ್ಯ ಆಡಲು ಅರ್ಹತೆ ಪಡೆಯುತ್ತದೆ. ಆದರೆ ಆಸ್ಟ್ರೇಲಿಯಾ ಪ್ರವಾಸದಲ್ಲಿ ಇನ್ನು 3 ಟಸ್ಟ್ ಪಂದ್ಯಗಳು ಭಾಕಿ ಇದೆ. ಈ ಪಂದ್ಯದಲ್ಲಿ ದಿಟ್ಟ ಹೋರಾಟದ ಮೂಲಕ ಗೆಲವು ಸಾಧಿಸಿದರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಟೂರ್ನಿ ಫೈನಲ್ ಪಂದ್ಯಕ್ಕೆ ಅವಕಾಶ ಸಿಗಲಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಟೂರ್ನಿ ಅಂಕ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿದ್ದ ಟೀಂ ಇಂಡಿಯಾ ಪಿಂಕ್ ಬಾಲ್ ಟೆಸ್ಟ್ ಸೋಲಿನಿಂದ 3ನೇ ಸ್ಥಾನಕ್ಕೆ ಕುಸಿದರೆ, 3ನೇ ಸ್ಥಾನದಲ್ಲಿದ್ದ ಸೌತ್ ಆಫ್ರಿಕಾ ಇದೀಗ 2ನೇ ಸ್ಥಾನಕ್ಕೆ ಬಡ್ತಿ ಪಡೆದಿದೆ.

Ind vs Aus : 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ:

ಈ ಪಂದ್ಯವು ಉಭಯ ತಂಡಗಳ ನಡುವಿನ ಅತ್ಯಂತ ಕಡಿಮೆ ಎಸೆತಗಳ ಟೆಸ್ಟ್​​ ಪಂದ್ಯವಾಗಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಆಸ್ಟ್ರೇಲಿಯನ್ನರು ಕೇವಲ 486 ಎಸೆತಗಳನ್ನು ಮಾತ್ರ ಎಸೆದಿದ್ದಾರೆ.

ಮೊದಲ ಇನಿಂಗ್ಸ್​​ನಲ್ಲಿ 44.1 ಓವರ್​​ಗಳಲ್ಲಿ ಆಸ್ಟ್ರೇಲಿಯಾ 180 ರನ್ ನೀಡಿದರೆ, ದ್ವಿತೀಯ ಇನಿಂಗ್ಸ್​​ನಲ್ಲಿ 36.5 ಓವರ್​​ಗಳಲ್ಲಿ 175 ರನ್ ಮಾತ್ರ ಬಿಟ್ಟುಕೊಟ್ಟರು. ಈ ಮೂಲಕ ಟೀಮ್ ಇಂಡಿಯಾವನ್ನು ಕೇವಲ 486 ಎಸೆತಗಳಲ್ಲಿ ಕಟ್ಟಿಹಾಕಿದರು.

ಇನ್ನು ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​​ನಲ್ಲಿ 525 ಎಸೆತಗಳನ್ನು ಎದುರಿಸಿ 337 ರನ್ ಕಲೆಹಾಕಿದರೆ, ದ್ವಿತೀಯ ಇನಿಂಗ್ಸ್​ನಲ್ಲಿ ಆಡಿದ್ದು ಕೇವಲ 20 ಎಸೆತಗಳನ್ನು ಮಾತ್ರ. ಈ ಮೂಲಕ ದ್ವಿತೀಯ ಇನಿಂಗ್ಸ್​​ನಲ್ಲಿ 19 ರನ್​​ಗಳ ಗುರಿಯನ್ನು ಬೆನ್ನತ್ತಿ ಭರ್ಜರಿ ಜಯ ಸಾಧಿಸಿದೆ. ಈ ಟೆಸ್ಟ್​ ಪಂದ್ಯದ 4 ಇನಿಂಗ್ಸ್​ಗಳಲ್ಲಿ ಮೂಡಿಬಂದ ಒಟ್ಟು ಎಸೆತಗಳ ಸಂಖ್ಯೆ ಕೇವಲ 1031. ವಿಶೇಷ ಎಂದರೆ ಇದು ಉಭಯ ತಂಡಗಳ ನಡುವಿನ ಅತ್ಯಂತ ಕಡಿಮೆ ಎಸೆತಗಳ ಟೆಸ್ಟ್​ ಪಂದ್ಯ. ಇದಕ್ಕೂ ಮುನ್ನ 2023 ರಲ್ಲಿ ಇಂದೋರ್​​ನಲ್ಲಿ ನಡೆದ ಟೆಸ್ಟ್ ಪಂದ್ಯವು 1135 ಎಸೆತಗಳಲ್ಲಿ ಅಂತ್ಯ ಕಂಡಿತ್ತು.

ಇದೀಗ ಮತ್ತೊಮ್ಮೆ ಟೀಮ್ ಇಂಡಿಯಾ ವಿರುದ್ಧ 1031 ಎಸೆತಗಳಲ್ಲಿ ಪಂದ್ಯ ಮುಗಿಸಿ ಭರ್ಜರಿ ಜಯ ದಾಖಲಿಸುವಲ್ಲಿ ಪ್ಯಾಟ್ ಕಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ ತಂಡ ಯಶಸ್ವಿಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist