ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

IND vs PAK: ಇಂದು ಭಾರತ-ಪಾಕಿಸ್ತಾನ ಮುಖಾಮುಖಿ; ಕ್ರೀಡಾಂಗಣದ ಟಿಕೆಟ್ ಸಂಪೂರ್ಣ ಸೋಲ್ಡ್ ಔಟ್-ಅಭಿಮಾನಿಗಳು ಕಾತುರ!

Twitter
Facebook
LinkedIn
WhatsApp
IND vs PAK: ಇಂದು ಭಾರತ-ಪಾಕಿಸ್ತಾನ ಮುಖಾಮುಖಿ; ಕ್ರೀಡಾಂಗಣದ ಟಿಕೆಟ್ ಸಂಪೂರ್ಣ ಸೋಲ್ಡ್ ಔಟ್-ಅಭಿಮಾನಿಗಳು ಕಾತುರ!

ಐಸಿಸಿ ಏಕದಿನ ವಿಶ್ವಕಪ್ 2023 ರ 11ನೇ ಪಂದ್ಯದಲ್ಲಿ ಇಂದು ಕ್ರಿಕೆಟ್ ಲೋಕದ ಬದ್ಧವೈರಿಗಳಾದ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಬಾಬರ್ ಅಝಂ ನೇತೃತ್ವದ ಪಾಕಿಸ್ತಾನ (India vs Pakistan) ತಂಡಗಳು ಮುಖಾಮುಖಿ ಆಗುತ್ತಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಉಭಯ ತಂಡಗಳು ಆಡಿದ ಮೊದಲ ಎರಡೂ ಪಂದ್ಯಗಳನ್ನು ಗೆದ್ದು ಬೀಗಿರುವ ಕಾರಣ ಇಂದಿನ ಮ್ಯಾಚ್ ಸಾಕಷ್ಟು ಕುತೂಹಲ ಕೆರಳಿಸಿದೆ. ವಿಶ್ವದ ಅತಿ ದೊಡ್ಡ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದ ಟಿಕೆಟ್ ಕೂಡ ಸಂಪೂರ್ಣ ಸೋಲ್ಡ್ ಔಟ್ ಆಗಿದೆ.

ಇಂದಿನ ಪಂದ್ಯದಲ್ಲಿ ಶುಭ್​ಮನ್ ಗಿಲ್ ಆಡುವುದು ಬಹುತೇಕ ಖಚಿತವಾಗಿದೆ. ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ನಾಯಕ ರೋಹಿತ್ ಶರ್ಮಾ ಅವರು ಗಿಲ್ ಶೇ. 99 ರಷ್ಟು ಆಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಹೀಗಾಗಿ ಇಶಾನ್ ಕಿಶನ್ ಬೆಂಚ್ ಕಾಯಬೇಕಿದೆ. ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಭರ್ಜರಿ ಫಾರ್ಮ್​ನಲ್ಲಿದ್ದು, ಪಾಕ್ ವಿರುದ್ಧದ ಪಂದ್ಯದಲ್ಲೂ ಅಬ್ಬರಿಸುವುದು ಖಚಿತ. ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ ಹಾಗೂ ಜಡೇಜಾ ಸಂದರ್ಭಕ್ಕೆ ತಕ್ಕಂತೆ ಆಡಬೇಕು.

ಭಾರತದ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ನಿರೀಕ್ಷಿಸಲಾಗಿದೆ. ಆರ್. ಅಶ್ವಿನ್ ಕೈಬಿಡುವುದು ಬಹುತೇಕ ಖಚಿತವಾಗಿದ್ದು, ಮೂರನೇ ಸೀಮರ್ ಆಗಿ ಯಾರನ್ನು ಆಯ್ಕೆ ಮಾಡುತ್ತಾರೆ ಎಂಬುದು ನೋಡಬೇಕಿದೆ. ಮೊಹಮ್ಮದ್ ಶಮಿ ಅಥವಾ ಶಾರ್ದೂಲ್ ಠಾಕೂರ್ ಪೈಕಿ ಒಬ್ಬರಿಗೆ ಸ್ಥಾನ ಸಿಗಲಿದೆ. ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಆಡುತ್ತಿರುವ ಶಮಿ 2023 ರಲ್ಲಿ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ 17 ವಿಕೆಟ್ ಪಡೆದಿದ್ದರು. ಹೀಗಾಗಿ ಶಮಿ ಮೊದಲ ಆಯ್ಕೆ ಆಗಿದ್ದಾರೆ. ಉಳಿದಂತೆ ಕುಲ್ದೀಪ್, ಬುಮ್ರಾ, ಸಿರಾಜ್ ಇರಲಿದ್ದಾರೆ.

ಇತ್ತ ಪಾಕಿಸ್ತಾನ ತಂಡ ಬಲಿಷ್ಠವಾಗಿದೆ. ಆದರೆ, ನಾಯಕ ಬಾಬರ್ ಅಝಂ ಫಾರ್ಮ್ ವೈಫಲ್ಯ ಅನುಭವಿಸುತ್ತಿದ್ದಾರೆ. ಇಂದು ಹೇಗೆ ಆಡುತ್ತಾರೆ ನೋಡಬೇಕು. ಹೊಸ ಬ್ಯಾಟರ್ ಅಬ್ದುಲ್ ಶಫೀಖ್ ಕಳೆದ ಪಂದ್ಯದಲ್ಲಿ ಶತಕ ಸಿಡಿಸಿ ಅಬ್ಬರಿಸಿದ್ದರು. ಜೊತೆಗೆ ಮೊಹಮ್ಮದ್ ರಿಝ್ವಾನ್ ಕೂಡ ಫಾರ್ಮ್​ಗೆ ಬಂದಿರುವುದು ತಂಡದಲ್ಲಿ ಸಂತಸ ಮೂಡಿದೆ. ಇಮಾಮ್ ಉಲ್ ಹಖ್, ಶಕೀಲ್ ಹಾಗೂ ಇಫ್ತಿಖರ್ ತಂಡಕ್ಕೆ ಆಸರೆಯಾದರೆ ದೊಡ್ಡ ಸ್ಕೋರ್ ಗಳಿಸಬಹುದು. ಬೌಲಿಂಗ್​ನಲ್ಲಿ ಶಾಹಿನ್ ಅಫ್ರಿದಿ, ಹಸನ್ ಅಲಿ, ನವಾಜ್, ರೌಫ್ ಹಾಗೂ ಶಬಾದ್ ಖಾನ್ ಇದ್ದಾರೆ.

ನರೇಂದ್ರ ಮೋದಿ ಸ್ಟೇಡಿಯಂ ಪಿಚ್ ವರದಿ:

ಅತಿ ದೊಡ್ಡ ಕ್ರೀಡಾಂಗಣ ಎಂಬ ಹೆಸರು ಪಡೆದುಕೊಂಡಿರುವ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್‌ ಸ್ಟೇಡಿಯಂ ಪಿಚ್‌ ಬ್ಯಾಟಿಂಗ್‌ ಸ್ನೇಹಿಯಾಗಿದೆ. ಪಂದ್ಯದ ಆರಂಭದಲ್ಲಿ ಬ್ಯಾಟಿಂಗ್‌ಗೆ ಯೋಗ್ಯವಾಗಿದ್ದರೆ, ಪಂದ್ಯ ಸಾಗುತ್ತಿದ್ದಂತೆ ಇಲ್ಲಿನ ವಿಕೆಟ್‌ ಸ್ಪಿನ್ನರ್‌ಗಳು ಪರಿಣಾಮಕಾರಿಯಾಗಲಿದ್ದಾರೆ. ಇಲ್ಲಿರುವ ಕಪ್ಪು ಮಣ್ಣಿನ ಪಿಚ್‌ಗಳು ಉತ್ತಮ ಬೌನ್ಸ್‌ನೊಂದಿಗೆ ಬೌಲರ್‌ಗಳಿಗೆ ಯೋಗ್ಯವಾಗಿದೆ. ಬ್ಯಾಟರ್‌ಗಳಿಗೆ ಆರಂಭಿಕ ಓವರ್‌ಗಳು ಸವಾಲಾಗಿರಬಹುದು. ಆಟಗಾರರು ಪರಿಸ್ಥಿತಿಗಳಿಗೆ ಹೊಂದಿಕೊಳ್ಳುವುದರಿಂದ, ಪಿಚ್ ಸ್ವಲ್ಪಮಟ್ಟಿಗೆ ಬ್ಯಾಟಿಂಗ್ ಸ್ವರ್ಗವಾಗಿ ಬದಲಾಗುತ್ತದೆ. ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಪರಿಸ್ಥಿತಿಗಳನ್ನು ಹೆಚ್ಚಿಸಲು ಇಬ್ಬನಿ ಅಂಶವು ಸಹ ಸಹಾಯ ಮಾಡುತ್ತದೆ.

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್. , ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.

ಪಾಕಿಸ್ತಾನ ತಂಡ: ಬಾಬರ್ ಅಝಂ (ನಾಯಕ), ಶಾದಾಬ್ ಖಾನ್, ಮುಹಮ್ಮದ್ ರಿಜ್ವಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಸೌದ್ ಶಕೀಲ್, ಫಖರ್ ಜಮಾನ್, ಹಾರಿಸ್ ರೌಫ್, ಹಸನ್ ಅಲಿ, ಇಫ್ತಿಕರ್ ಅಹ್ಮದ್, ಮುಹಮ್ಮದ್ ನವಾಜ್, ಮುಹಮ್ಮದ್ ವಾಸಿಂ ಜೂನಿಯರ್ , ಅಘಾ ಸಲ್ಮಾನ್, ಶಾಹೀನ್ ಶಾ ಅಫ್ರಿದಿ, ಒಸಾಮಾ ಮಿರ್.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ