ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

IND vs PAK: ಮೋದಿ ಸ್ಟೇಡಿಯಂನಲ್ಲಿ ಇಂದು ಜನವೋ ಜನ ; ಹಲವು ಕಡೆ ಅಭಿಮಾನಿಗಳ ಪೂಜೆ ಪ್ರಾರ್ಥನೆ!

Twitter
Facebook
LinkedIn
WhatsApp
IND vs PAK: ಮೋದಿ ಸ್ಟೇಡಿಯಂನಲ್ಲಿ ಇಂದು ಜನವೋ ಜನ ; ಹಲವು ಕಡೆ ಅಭಿಮಾನಿಗಳ ಪೂಜೆ ಪ್ರಾರ್ಥನೆ!

ಅಹಮದಾಬಾದ್: ಬುದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ತಾನ ಪಂದ್ಯ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯ ನೋಡಲು ಮೈದಾನಕ್ಕೆ ಜನಸಾಗರವೇ ಹರಿದು ಬರುತ್ತಿವೆ. ಎಲ್ಲ ಟಿಕೆಟ್​ಗಳು ಕೂಡ ಸೋಲ್ಡ್​ ಔಟ್​ ಆಗಿದೆ. ಟಿಕೆಟ್​ ಸಿಗದ ಕೆಲವರು ಸ್ಟೇಡಿಯಂನ ಹೊರ ಭಾಗದಲ್ಲಿ ಭಾರತ ತಂಡದ ಜೆರ್ಸಿಯನ್ನು ಹಾಕಿ ಸಂಭ್ರಮಾಚರಣೆ ಮಾಡುವ ಮೂಲಕ ತಂಡಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ.

ಇನ್ನೇನು ಕೆಲವೇ ಗಂಟೆಗಳಲ್ಲಿ ಮನರಂಜನಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12.30ರಿಂದ ವಿಶೇಷ ಸಾಂಸತಿಕ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬಾಲಿವುಡ್​ ಗಾಯಕರಾದ ಶಂಕರ್​ ಮಹಾದೇವನ್​, ಸುಖ್ವಿಂದರ್​ ಸಿಂಗ್​, ಅರ್ಜಿತ್​ ಸಿಂಗ್​ ಸಂಗೀತ ಸುಧೆ ಹರಿಸಲಿದ್ದಾರೆ. ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸೇರಿ ಹಲವು ಮಾಜಿ ಆಟಗಾರರು ಈ ಪಂದ್ಯ ವೀಕ್ಷಣೆಗೆ ಅಹಮದಾಬಾದ್‌ಗೆ ಆಗಮಿಸಿದ್ದಾರೆ.

ಹಲವು ಕಡೆ ಪೂಜೆ, ಪ್ರಾರ್ಥನೆ

ಪ್ರತಿ ಬಾರಿಯಂತೆ ಭಾರತದ ಗೆಲುವಿಗಾಗಿ ದೇಶದ ಹಲವು ಕಡೆಗಳಲ್ಲಿ ಅಭಿಮಾನಿಗಳು ಪೂಜೆ ಮತ್ತು ಪ್ರಾರ್ಥನೆ ನಡೆಸಿದ್ದಾರೆ. ಪಂದ್ಯಕ್ಕೆ ಭಾರಿ ಕಟ್ಟೆಚ್ಚರ ವಹಿಸಿದ್ದು, ಗುಜರಾತ್​ ಪೊಲೀಸ್​, ಎನ್​ಎಸ್​ಜಿ, ಆರ್​ಎಎ್​, ಗೃಹರಕ್ಷಣಾ ಪಡೆ ಸಹಿತ ಕ್ರೀಡಾಂಗಣದ ಸುತ್ತ ವಿವಿಧ ಭದ್ರತಾ ಏಜೆನ್ಸಿಗಳಿಂದ ಒಟ್ಟು 11 ಸಾವಿರ ರಕ್ಷಣಾ ಸಿಬ್ಬಂದಿಯನ್ನು ಬಿಗಿಭದ್ರತೆಗಾಗಿ ನಿಯೋಜಿಸಲಾಗಿದೆ.

ಹವಾಮಾನ ವರದಿ

ಇದು ಏಳು ವರ್ಷಗಳ ಬಳಿಕ ಪಾಕಿಸ್ತಾನ ತಂಡ ಭಾರತದ ನೆಲದಲ್ಲಿ ಆಡುತ್ತಿರುವ ಪಂದ್ಯವಾಗಿದೆ. ಈ ಪಂದ್ಯವನ್ನು ನೋಡಲು ಅಭಿಮಾನಿಗಳು ದುಪ್ಪಟ್ಟು ಹಣ ನೀಡಿ ಟಿಕೆಟ್​ ಖರೀದಿಸಿದ್ದಾರೆ. ಸ್ಟೇಡಿಯಂ ಹೌಸ್​ಫುಲ್​ ಆಗುವುದರಲ್ಲಿ ಅನುಮಾನವೇ ಬೇಡ. IMDಯ ಮುನ್ಸೂಚನೆ ಪ್ರಕಾರ ಅಹಮದಾಬಾದ್‌ ನಗರದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಆದರೆ ಪಂದ್ಯಕ್ಕೆ ವರುಣನ ಅವಕೃಪೆ ಇರದು. ಶನಿವಾರ ಅಹಮದಾಬಾದ್​ನಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇದೆ ಎಂದು ತಿಳಿಸಿದೆ. ಒಂದೊಮ್ಮೆ ಮಳೆ ಬಂದರೂ ವಿಶ್ವಕಪ್​ನಲ್ಲಿ ಯಾವುದೇ ಲೀಗ್​ ಪಂದ್ಯಕ್ಕೂ ಮೀಸಲು ದಿನ ಇಲ್ಲ. ಐಸಿಸಿ ನಿಯಮದ ಪ್ರಕಾರ ಸೆಮಿಫೈನಲ್​ನ ಎರಡು ಪಂದ್ಯಗಳಿಗೆ ಮತ್ತು ಫೈನಲ್​ಗೆ ಮಾತ್ರ ಮೀಸಲು ದಿನ ಇರಲಿದೆ. ಹೀಗಾಗಿ ಪಂದ್ಯ ಮಳೆಯಿಂದ ರದ್ದಾದರೆ ಉಭಯ ತಂಡಗಳಿಗೆ ತಲಾ ಒಂದು ಅಂಕ ಸಿಗಲಿದೆ.

ಸಂಭಾವ್ಯ ತಂಡ

ಭಾರತ: ಇಶಾನ್​ ಕಿಶನ್​/ಶುಭಮನ್​ ಗಿಲ್​, ರೋಹಿತ್​ ಶರ್ಮ(ನಾಯಕ), ವಿರಾಟ್​ ಕೊಹ್ಲಿ, ಶ್ರೇಯಸ್​ ಅಯ್ಯರ್​, ಹಾರ್ದಿಕ್​ ಪಾಂಡ್ಯ, ಕೆ.ಎಲ್​ ರಾಹುಲ್​, ರವೀಂದ್ರ ಜಡೇಜ, ಕುಲ್​ದೀಪ್​ ಯಾದವ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್​, ಶಾರ್ದೂಲ್​ ಠಾಕೂರ್​.

ಪಾಕಿಸ್ತಾನ: ಅಬ್ದುಲ್ಲಾ ಶಫೀಕ್, ಇಮಾಮ್ ಉಲ್-ಹಕ್, ಬಾಬರ್ ಅಜಂ (ನಾಯಕ), ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಹಾರಿಸ್ ರೌಫ್.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist