IND vs SA: ಭಾರತದ ಬೌಲರ್ ಗಳ ಅಬ್ಬರ ; ದಕ್ಷಿಣ ಆಫ್ರಿಕಾಗೆ 243 ರನ್ ಗಳಿಂದ ಸೋಲು!
ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಹೈವೋಲ್ಟೇಜ್ ಕದನ ಏಕಪಕ್ಷೀಯವಾಗಿ ಅಂತ್ಯಗೊಂಡಿದೆ. ಭಾರತದ ಹುಲಿಗಳ ಅಬ್ಬರಕ್ಕೆ ನಡುಗಿದ ಹರಿಣಗಳು ಕೇವಲ 83 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಬರೋಬ್ಬರಿ 243 ರನ್ಗಳಿಂದ ಸೋಲು ಕಂಡಿದೆ.
ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರ ಅಜೇಯ 101 ಮತ್ತು ಶ್ರೇಯಸ್ ಅಯ್ಯರ್ ಅವರ 77 ರನ್‌ಗಳ ಆಧಾರದ ಮೇಲೆ ಮೊದಲು ಬ್ಯಾಟ್ ಮಾಡಿದ ಭಾರತ ಐದು ವಿಕೆಟ್ ಕಳೆದುಕೊಂಡು 326 ರನ್ ಕಲೆಹಾಕಿತು. ಈ ಇಡೀ ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡ ಬಿರುಸಿನ ಆಟ ಪ್ರದರ್ಶಿಸಿದ್ದು, ಈ ಪಂದ್ಯ ರೋಚಕವಾಗಲಿದೆ ಎಂದು ಸಂಪೂರ್ಣವಾಗಿ ನಿರೀಕ್ಷಿಸಲಾಗಿತ್ತು. ಆದರೆ ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾಕ್ಕೆ ಆರಂಭದಲ್ಲಿ ಆಘಾತ ನೀಡಿದರು.
ಇದಾದ ಬಳಿಕ ರವೀಂದ್ರ ಜಡೇಜಾ ಅವರ ಸ್ಪಿನ್‌ಗೆ ದಕ್ಷಿಣ ಆಫ್ರಿಕಾ ಬ್ಯಾಟ್ಸ್‌ಮನ್‌ಗಳು ಒಬ್ಬೊಬ್ಬರಾಗಿ ಕುಸಿದು ಬಿದ್ದು ಇಡೀ ತಂಡ 27.1 ಓವರ್‌ಗಳಲ್ಲಿ ಕೇವಲ 87 ರನ್‌ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಟೀಂ ಇಂಡಿಯಾ ಲೀಗ್ ಹಂತವನ್ನು ಮೊದಲ ಸ್ಥಾನದಲ್ಲಿಯೇ ಕೊನೆಗೊಳಿಸುವುದು ಖಚಿತವಾಯಿತು.
ಸೌತ್ ಆಫ್ರಿಕಾ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ತಬ್ರೇಝ್ ಶಮ್ಸಿ, ಕಗಿಸೊ ರಬಾಡ, ಲುಂಗಿ ಎನ್ಗಿಡಿ.
ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್.
ಸೌತ್ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಜೆರಾಲ್ಡ್ ಕೊಯೆಟ್ಝಿ, ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ರಾಸ್ಸೀ ವ್ಯಾನ್ ಡೆರ್ ಡಸ್ಸೆನ್, ತಬ್ರೇಝ್ ಶಂಸಿ, ಕಗಿಸೊ ರಬಾಡ, ಆಂಡಿಲೆ ಫೆಹ್ಲುಕ್ವಾಯೊ ಮತ್ತು ಲಿಝಾಡ್ ವಿಲಿಯಮ್ಸ್.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.