IND vs SL: ಭಾರತ ಮತ್ತು ಶ್ರಿಲಂಕಾದ ರೋಚಕ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ; ಭಾರತಕ್ಕೆ ಬ್ಯಾಟಿಂಗ್!
ಮುಂಬೈ: ಐಸಿಸಿ ಕ್ರಿಕೆಟ್ ವಿಶ್ವಕಪ್ 2023ರ 33ನೇ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾ (Ind vs Sl) ವಿರುದ್ಧ ಸೆಣಸಲಿದೆ. ಮೆನ್ ಇನ್ ಬ್ಲೂ ಅತ್ಯುತ್ತಮ ಫಾರ್ಮ್ ನಲ್ಲಿದ್ದು, ಪಂದ್ಯಾವಳಿಯಲ್ಲಿ ಆಡಿದ ಎಲ್ಲಾ ಆರು ಪಂದ್ಯಗಳನ್ನು ಗೆದ್ದಿದೆ ಮತ್ತು ಪ್ರಸ್ತುತ 12 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್ ನಲ್ಲಿ ಅಗ್ರಸ್ಥಾನದಲ್ಲಿದೆ. ಇನ್ನೂ ಮೂರು ಲೀಗ್ ಹಂತದ ಪಂದ್ಯಗಳು ಬಾಕಿ ಇರುವುದರಿಂದ ಭಾರತ ಸೆಮಿಫೈನಲ್ ತಲುಪುವ ಸಾಧ್ಯತೆ ಹೆಚ್ಚಿದೆ. ಇದಕ್ಕೆ ವ್ಯತಿರಿಕ್ತವಾಗಿ, ಈ ಪಂದ್ಯಾವಳಿಯಲ್ಲಿ ಶ್ರೀಲಂಕಾದ ಪ್ರದರ್ಶನವು ಸಾಮರ್ಥ್ಯಕ್ಕಿಂತ ಕಡಿಮೆಯಾಗಿದೆ. ಆ ತಂಡ ಅಫ್ಘಾನಿಸ್ತಾನದ ವಿರುದ್ಧ ನಿರಾಶಾದಾಯಕ ಸೋಲಿನಿಂದ ಹೊರಬರಬೇಕಾಗಿದೆ.
ಈ ಪಂದ್ಯವು ಮುಂಬಯಿಯ ಐತಿಹಾಸಿ ವಾಂಖೆಡೆ ಸ್ಟೇಡಿಯಮ್ನಲ್ಲಿ ಆಯೋಜನೆಗೊಂಡಿದೆ. ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಅದಕ್ಕಿಂತ ಮೊದಲು 1.30 ನಿಮಿಷಕ್ಕೆ ಟಾಸ್ ನಡೆಯಲಿದೆ.
ಆರು ಸಮಗ್ರ ಗೆಲುವುಗಳ ನಂತರ ಭಾರತವು ಸೋಲಿಲ್ಲದ ಏಕೈಕ ತಂಡವಾಗಿ ಎತ್ತರಕ್ಕೆ ಹಾರುತ್ತಿದೆ ಮತ್ತು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ಮತ್ತು ನಾಕೌಟ್ ಹಂತದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಅಂಚಿನಲ್ಲಿದೆ.
ಬೌಲಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಆಫ್ರಿದಿ – ಟಾಪ್ 10 ರಲ್ಲಿ ಇಬ್ಬರು ಟೀಂ ಇಂಡಿಯಾ ಆಟಗಾರರು
ನವದೆಹಲಿ: ಪಾಕ್ (Pakistan) ತಂಡದ ವೇಗಿ ಶಾಹಿನ್ ಶಾ ಆಫ್ರಿದಿ (Shaheen Afridi) ವಿಶ್ವದ ನಂಬರ್ ಒನ್ ಶ್ರೇಯಾಂಕದ ಬೌಲರ್ ಆಗಿ ಹೊರಹೊಮ್ಮಿದ್ದಾರೆ. ನ.1 ರಂದು ಐಸಿಸಿ ಏಕದಿನ ಶ್ರೇಯಾಂಕದ ಪಟ್ಟಿಯಲ್ಲಿ ಅಫ್ರಿದಿ ಅಗ್ರ ಸ್ಥಾನಕ್ಕೆ ಏರಿದ್ದಾರೆ. ತಮ್ಮ ಕ್ರಿಕೆಟ್ ಜೀವನದಲ್ಲಿ ಇದೇ ಮೊದಲ ಬಾರಿಗೆ ಅವರು ಸಾಧನೆ ಮಾಡಿದ್ದಾರೆ.
ಐಸಿಸಿ ಶ್ರೇಯಾಂಕದಲ್ಲಿ ಬರೋಬ್ಬರಿ ಏಳು ಸ್ಥಾನ ಮೇಲಕ್ಕೇರಿರುವ ಅಫ್ರಿದಿ, ಅಗ್ರಸ್ಥಾನದಲ್ಲಿದ್ದ ಆಸ್ಟ್ರೇಲಿಯಾದ ವೇಗದ ಬೌಲರ್ ಜೋಶ್ ಹೇಜಲ್‍ವುಡ್ ಅವರನ್ನು ಎರಡನೇ ಸ್ಥಾನಕ್ಕೆ ತಳ್ಳಿದ್ದಾರೆ. ಬಾಂಗ್ಲಾದೇಶ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಕೇವಲ 23 ರನ್ ಬಿಟ್ಟು ಕೊಟ್ಟು ಪ್ರಮುಖ ಮೂರು ವಿಕೆಟ್‍ಗಳನ್ನು ಕಬಳಿಸಿದ ಅಫ್ರಿದಿ ತಂಡದ ಗೆಲುವಿನ ಬಳಿಕ ಅಗ್ರಸ್ಥಾನವನ್ನು ಪಡೆದಿದ್ದಾರೆ. ಅತ್ತ ತಿಂಗಳುಗಳ ಹಿಂದೆ ಏಕದಿನ ಶ್ರೇಯಾಂಕದಲ್ಲಿ ಅಗ್ರಸ್ಥಾನ ಪಡೆದಿದ್ದ ಭಾರತದ ವೇಗಿ ಮೊಹಮ್ಮದ್ ಸಿರಾಜ್ ಈಗ ಮೂರನೇ ಸ್ಥಾನದಲ್ಲಿದ್ದಾರೆ.
ಟೀಂ ಇಂಡಿಯಾ ಸ್ಪಿನ್ನರ್ ಕುಲ್‍ದೀಪ್ ಯಾದವ್ ಏಳನೇ ಸ್ಥಾನ ಪಡೆಯುವ ಮೂಲಕ ಟಾಪ್ 10 ಪಟ್ಟಿಯಲ್ಲಿ ಕಾಣಿಸಿಕೊಂಡ ಎರಡನೇ ಆಟಗಾರರಾಗಿದ್ದಾರೆ. ಉಳಿದಂತೆ ದಕ್ಷಿಣ ಆಫ್ರಿಕಾ ಸ್ಪಿನ್ನರ್ ಕೇಶವ್ ಮಹಾರಾಜ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ಮುಜೀಬ್ ಉರ್ ರೆಹಮಾನ್ ಎಂಟನೇ ಸ್ಥಾನದಲ್ಲಿದ್ದಾರೆ.
ಪಾಕಿಸ್ತಾನದ ನಾಯಕ ಬಾಬರ್ ಆಜಮ್ ಬ್ಯಾಟ್ಸ್‍ಮನ್‍ಗಳ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಭಾರತದ ಶುಭಮನ್ ಗಿಲ್ ಎರಡನೇ ಸ್ಥಾನದಲ್ಲಿದ್ದರೆ, ಟೀಮ್ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕ್ರಮವಾಗಿ ಐದು ಮತ್ತು ಏಳನೇ ಸ್ಥಾನದಲ್ಲಿದ್ದಾರೆ.
ಆಲ್‍ರೌಂಡರ್‌ಗಳ ಪೈಕಿ ಬಾಂಗ್ಲಾದೇಶದ ನಾಯಕ ಶಕೀಬ್ ಅಲ್ ಹಸನ್ ಅಗ್ರಸ್ಥಾನದಲ್ಲಿದ್ದಾರೆ. ಮತ್ತೊಂದೆಡೆ ಗಾಯಾಳುವಾಗಿ ಭಾರತದ ಕಳೆದೆರಡು ವಿಶ್ವಕಪ್ ಪಂದ್ಯವನ್ನು ಕಳೆದುಕೊಂಡಿರುವ ಹಾರ್ದಿಕ್ ಪಾಂಡ್ಯ 11ನೇ ಸ್ಥಾನಕ್ಕೆ ಕುಸಿದಿದ್ದಾರೆ. ರವೀಂದ್ರ ಜಡೇಜಾ 13ನೇ ಸ್ಥಾನದಲ್ಲಿ ಮುಂದುವರಿದರೆ, ಪಾಕಿಸ್ತಾನದ ಶಾದಾಬ್ ಖಾನ್ 20ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಪಾಕಿಸ್ತಾನ ತಂಡವು ವಿಶ್ವಕಪ್ ಟೂರ್ನಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ನೆದರ್ಲೆಂಡ್ಸ್ ಮತ್ತು ಶ್ರೀಲಂಕಾ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಕಪ್ ಗೆಲ್ಲುವ ತವಕದಲ್ಲಿದ್ದ ಪಾಕ್ ಬಳಿಕ ಸತತ ನಾಲ್ಕು ಸೋಲುಗಳೊಂದಿಗೆ ಮುಗ್ಗರಿಸಿತು. ಅಫ್ಘಾನಿಸ್ತಾನ, ದಕ್ಷಿಣ ಆಫ್ರಿಕಾ ವಿರುದ್ಧ ಸೋಲು ಕಂಡ ಪಾಕಿಸ್ತಾನ ಕೊನೆಗೂ ಬಾಂಗ್ಲಾದೇಶ ವಿರುದ್ಧ ಗೆದ್ದು ಸೆಮಿಫೈನಲ್ ಪ್ರವೇಶಿಸುವ ಕನಸನ್ನು ಜೀವಂತವಾಗಿಟ್ಟುಕೊಂಡಿದೆ.