ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

IND vs WI 2nd T20: ಕೊನೆಯ ಓವರ್​ನಲ್ಲಿ ನೋ ಬಾಲ್, ಫ್ರೀ ಹಿಟ್: ಗೆಲ್ಲುವ ಪಂದ್ಯದಲ್ಲಿ ಸೋತ ಭಾರತ

Twitter
Facebook
LinkedIn
WhatsApp
IND vs WI 2nd T20: ಕೊನೆಯ ಓವರ್​ನಲ್ಲಿ ನೋ ಬಾಲ್, ಫ್ರೀ ಹಿಟ್: ಗೆಲ್ಲುವ ಪಂದ್ಯದಲ್ಲಿ ಸೋತ ಭಾರತ

ಸ್ಯಾಂಟ್ ಕಿಟ್ಸ್​ನ ವಾರ್ನರ್ ಪಾರ್ಕ್ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ದ್ವಿತೀಯ ಟಿ20 ಪಂದ್ಯದಲ್ಲಿ ಭಾರತ (India vs West Indies) ಸೋಲು ಕಂಡಿದೆ. ಈ ಮೂಲಕ ಟೀಮ್ ಇಂಡಿಯಾದ ಗೆಲುವಿನ ಓಟಕ್ಕೆ ವಿಂಡೀಸ್ ಬ್ರೇಕ್ ಹಾಕಿದೆ. ಏಕದಿನ ಸರಣಿಯಲ್ಲಿ ಮೂರು ಸೋಲು ಕಂಡು, ಮೊದಲ ಟಿ20 ಪಂದ್ಯದಲ್ಲೂ ಸೋಲುಂಡ ವಿಂಡೀಸ್ ಕೊನೆಗೂ ಜಯದ ನಗೆ ಬೀರಿದೆ. ಒಬೆಡ್ ಮೆಖಾಯ್ ಮಾರಕ ಬೌಲಿಂಗ್, ಬ್ರಾಂಡನ್ ಕಿಂಗ್ ಹಾಗೂ ಡೆವೋನ್ ಥೋಮಸ್ (Obed McCoy) ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ವಿಂಡೀಸ್ 5 ವಿಕೆಟ್​ಗಳ ರೋಚಕ ಜಯ ಸಾಧಿಸಿತು. ಬ್ಯಾಟಿಂಗ್​ನಲ್ಲಿ ಭಾರತ ಸಂಪೂರ್ಣ ವೈಫಲ್ಯ ಅನುಭವಿಸಿದರೆ, ಬೌಲಿಂಗ್​ನಲ್ಲೂ ಎಡವಿತು. ಅದರಲ್ಲೂ ವೇಗಿ ಆವೇಶ್ ಖಾನ್ (Avesh Khan) ಅಂತಿಮ ಓವರ್​ನಲ್ಲಿ ಮಾಡಿದ ಎಡವಟ್ಟು ತಂಡದ ಸೋಲಿನಲ್ಲಿ ಮುಖ್ಯ ಪಾತ್ರವಹಿಸಿತು.

ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಭಾರತ ಇನ್ನಿಂಗ್ಸ್​ನ ಮೊದಲ ಓವರ್​ನ ಮೊದಲ ಎಸೆತದಲ್ಲೇ ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡಿತು. ಸೂರ್ಯಕುಮಾರ್ ಯಾದವ್ (11) ಹಾಗೂ ಶ್ರೇಯಸ್ ಅಯ್ಯರ್ (10) ಈ ಬಾರಿ ಕೂಡ ತಂಡಕ್ಕೆ ನೆರವಾಗಲಿಲ್ಲ. ಆದರೆ, ಮಧ್ಯಮ ಕ್ರಮಾಂಕದಲ್ಲಿ ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಕೊಂಚ ರನ್ ಕಲೆಹಾಕಿದರು. ಹೀಗಾಗಿ ತಂಡದ ಮೊತ್ತ 100ರ ಗಡಿ ದಾಟಿತು.

ಪಂತ್ 12 ಎಸೆತಗಳಲ್ಲಿ 24 ರನ್ ಬಾರಿಸಿದರೆ, ಪಾಂಡ್ಯ 31 ಎಸೆತಗಳಲ್ಲಿ 31 ರನ್ ಗಳಿಸಿದರು. ಜಡೇಜಾ 31 ಎಸೆತಗಳಲ್ಲಿ 27 ರನ್ ಕೊಡುಗೆ ನೀಡಿದರು. ಕಳೆದ ಪಂದ್ಯದಲ್ಲಿ ಮಿಂಚಿದ್ದ ದಿನೇಶ್ ಕಾರ್ತಿಕ್ ಈ ಬಾರಿ ಕೇವಲ 7 ರನ್​ಗೆ ಬ್ಯಾಟ್ ಕೆಳಗಿಟ್ಟರು. ಅಶ್ವಿನ್ 10 ರನ್​ಗೆ ಸುಸ್ತಾದರು. ಅಂತಿಮವಾಗಿ ಭಾರತ 19.4 ಓವರ್​ನಲ್ಲಿ 138 ರನ್​ಗೆ ಆಲೌಟ್ ಆಯಿತು. ವೆಸ್ಟ್ ಇಂಡೀಸ್ ಪರ ಒಬೆಡ್ ಮೆಖಾಯ್ 4 ಓವರ್ ಬೌಲಿಂಗ್ ಮಾಡಿ 1 ಮೇಡನ್ ಸಹಿತ ಬರೋಬ್ಬರಿ 6 ವಿಕೆಟ್ ಕಿತ್ತು ಮಿಂಚಿದರು.

ಸುಲಭ ಟಾರ್ಗೆಟ್ ಬೆನ್ನಟ್ಟಿದ ವೆಸ್ಟ್​ ಇಂಡೀಸ್ ಕೂಡ ಆರಂಭದಲ್ಲಿ ವಿಕೆಟ್ ಕಳೆದುಕೊಂಡಿತು. ಖೈಲ್ ಮೇಯೆರ್ಸ್ 8, ನಾಯಕ ನಿಕೋಲಸ್ ಪೂರನ್ 14 ಹಾಗೂ ಶಿಮ್ರೋನ್ ಹೆಟ್ಮೇರ್ 6 ರನ್​ಗೆ ಔಟಾದರರು. ಆದರೆ, ಇದರ ನಡುವೆ ಓಪನರ್ ಆಗಿ ಬಂದ ಬ್ರೆಂಡನ್ ಕಿಂಗ್ ಭರ್ಜರಿ ಬ್ಯಾಟಿಂಗ್ ನಡೆಸಿದರು. 52 ಎಸೆತಗಳಲ್ಲಿ 8 ಬೌಂಡರಿ, 2 ಸಿಕ್ಸರ್ ಸಿಡಿಸಿ 68 ರನ್ ಚಚ್ಚಿ ತಂಡಕ್ಕೆ ಗೆಲುವನ್ನು ಹತ್ತಿರ ಮಾಡಿ ನಿರ್ಗಮಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ