ಬುಧವಾರ, ಮೇ 15, 2024
8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

IND-WI :ಇಶಾನ್ ಕಿಶನ್ ಸ್ಫೋಟಕ ಬ್ಯಾಟಿಂಗ್; ಭಾರತಕ್ಕೆ 5 ವಿಕೆಟ್​ಗಳ ಜಯ

Twitter
Facebook
LinkedIn
WhatsApp
IND-WI :ಇಶಾನ್ ಕಿಶನ್ ಸ್ಫೋಟಕ ಬ್ಯಾಟಿಂಗ್; ಭಾರತಕ್ಕೆ 5 ವಿಕೆಟ್​ಗಳ ಜಯ

IND-WI : ಇಶಾನ್ ಕಿಶನ್: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಭಾರತ ಭರ್ಜರಿ ಆಗಿ ಆರಂಭಿಸಿದೆ. ಬಾರ್ಬಡೊಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ತೋರಿದ ಟೀಮ್ ಇಂಡಿಯಾ 5 ವಿಕೆಟ್​ಗಳ ಜಯ ಸಾಧಿಸಿತು.

ಕುಲ್ದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ಸ್ಪಿನ್ ಬಿರುಗಾಳಿಗೆ ತತ್ತರಸಿದ ಕೆರಿಬಿಯನ್ ಪಡೆ ಅಲ್ಪ ಮೊತ್ತಕ್ಕೆ ಆಲೌಟ್ ಆಯಿತು. ಈ ಗೆಲುವಿನ ಮೂಲಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

images 2

ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್ ಮಾಡಲು ವೆಸ್ಟ್ ಇಂಡೀಸ್ ಆರಂಭದಿಂದಲೇ ವಿಕೆಟ್ ಕಳೆದುಕೊಂಡು ಸಾಗಿತು. ನಾಯಕ ಶಾಯ್ ಹೋಪ್ ಕೆಲ ಹೊತ್ತು ಕ್ರೀಸ್​ನಲ್ಲಿ ಇದ್ದಿದ್ದು ಬಿಟ್ಟರೆ ಉಳಿದ ಯಾವ ಬ್ಯಾಟರ್ ಕೂಡ ನೆರವಾಗಲಿಲ್ಲ.

ಹೋಪ್ 45 ಎಸೆತಗಳಲ್ಲಿ 43 ರನ್ ಬಾರಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ವಿಂಡೀಸ್ 23 ಓವರ್​ಗಳಲ್ಲಿ ಕೇವಲ 114 ರನ್​ಗಳಿಗೆ ಆಲೌಟ್ ಆಯಿತು. ಭಾರತ ಪರ ಕುಲ್ದೀಪ 4, ಜಡೇಜಾ 3, ಹಾರ್ದಿಕ, ಮುಖೇಶ್ ಹಾಗೂ ಥಾಕೂರ್ ತಲಾ 1 ವಿಕೆಟ್ ಪಡೆದರು.

ಸುಲಭ ಟಾರ್ಗೆಟ್ ಬೆನ್ನಟ್ಟಲು ಬಂದ ಭಾರತ ತನ್ನ ಬ್ಯಾಟಿಂಗ್ ಆರ್ಡರ್​ನಲ್ಲಿ ಮಹತ್ವದ ಬದಲಾವಣೆ ಮಾಡಿತು. ಓಪನರ್ ಆಗಿ ರೋಹಿತ್ ಶರ್ಮಾ ಬಾರದೆ ಇಶಾನ್ ಕಿಶನ್ ಹಾಗೂ ಶುಭ್​ಮನ್ ಗಿಲ್ ಕಣಕ್ಕಿಳಿದರು.

istockphoto 943697000 612x612 4

ಇಶಾನ್ ಕಿಶನ್ ಸ್ಫೋಟಕ ಬ್ಯಾಟಿಂಗ್ ನಡೆದ 46 ಎಸೆತಗಳಲ್ಲಿ 52 ರನ್ ಸಿಡಿಸಿದರೆ, ಗಿಲ್ 7 ರನ್​ಗೆ ಔಟಾದರು. ಮೂರನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ 19 ರನ್​ಗೆ ಸುಸ್ತಾದರು. ನಂತರ ಬಂದ ಹಾರ್ದಿಕ್ ಪಾಂಡ್ಯ 5 ರನ್ ಗಳಿಸಿ ರನೌಟ್​ಗೆ ಬಲಿಯಾದರು.

ಶಾರ್ದೂಲ್ ಥಾಕೂರ್ 1 ರನ್​ಗೆ ಔಟಾದರು. ಬಳಿಕ 7ನೇ ಕ್ರಮಾಂಕದಲ್ಲಿ ಬಂದ ರೋಹಿತ್ ಶರ್ಮಾ (ಅಜೇಯ 12), ರವೀಂದ್ರ ಜಡೇಜಾ (ಅಜೇಯ 16) 22.5 ಓವರ್​ನಲ್ಲಿ 5 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿ ಗೆಲುವು ಸಾಧಿಸುವಂತೆ ಮಾಡಿದರು.

ವೆಸ್ಟ್ ಇಂಡೀಸ್ ತಂಡದ ಪರ ಗುಡಕೇಶ್ ಮೋಟಿ 2 ವಿಕೆಟ್, ಜೇಡನ್ ಸೀಲ್ಸ್ ಹಾಗೂ ಯಾನಿಕ್ ಕ್ಯರಿಯಾ ತಲಾ 1 ವಿಕೆಟ್ ಪಡೆದರು.

905074751b132cc8d18bb788cf60f6d6 6
IND vs WI: 3 ಓವರ್, 4 ವಿಕೆಟ್; ವಿಂಡೀಸ್ ನೆಲದಲ್ಲಿ ಇತಿಹಾಸ ಸೃಷ್ಟಿಸಿದ ಕುಲ್ದೀಪ್ ಯಾದವ್

ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನಲ್ಲಿರುವ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿನ ನಗೆ ಬೀರಿದೆ. ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿದ ವಿಂಡೀಸ್ ಪಡೆ 115 ರನ್​ಗಳಿಗೆ ತನ್ನ ಆಟ ಮುಗಿಸಿತು. ಈ ಗುರಿ ಬೆನ್ನಟ್ಟಿದ ಭಾರತ ಸುಲಭ ಜಯ ಸಾಧಿಸಿತು.

ಇನ್ನು ಈ ಪಂದ್ಯದಲ್ಲಿ ಮಿಂಚಿದ ಟೀಂ ಇಂಡಿಯಾದ ಇಬ್ಬರು ಸ್ಪಿನ್ನರ್​ಗಳಾದ ರವೀಂದ್ರ ಜಡೇಜಾ ಹಾಗೂ ಕುಲ್ದೀಪ್ ಯಾದವ್ ಕ್ರಮವಾಗಿ 3 ಹಾಗೂ 4 ವಿಕೆಟ್ ಉರುಳಿಸುವುದರೊಂದಿಗೆ ಹಲವು ದಾಖಲೆಗಳನ್ನು ಮುರಿದರು.

ಅಕ್ಷರ್ ಪಟೇಲ್ ಮತ್ತು ಯುಜ್ವೇಂದ್ರ ಚಾಹಲ್‌ ಬದಲು ತಂಡದಲ್ಲಿ ಆಡುವ ಅವಕಾಶ ಪಡೆದ ಎಡಗೈ ಚೈನಾಮನ್ ಬೌಲರ್ ಕುಲ್ದೀಪ್ ಯಾದವ್ ಮೊದಲ ಏಕದಿನ ಪಂದ್ಯದಲ್ಲಿ ಒಟ್ಟು ಮೂರು ಓವರ್‌ಗಳನ್ನು ಬೌಲ್ ಮಾಡಿ, ನಾಲ್ಕು ಬ್ಯಾಟರ್‌ಗಳನ್ನು ಔಟ್ ಮಾಡಿದರು.

ಬೌಲ್ ಮಾಡಿದ ಮೂರು ಓವರ್​ಗಳಲ್ಲಿ ಎರಡು ಮೇಡನ್‌ಗಳನ್ನು ಬೌಲ್ ಮಾಡಿದರು. ತಮ್ಮ ಮೂರು ಓವರ್‌ಗಳ ಸ್ಪೆಲ್‌ನಲ್ಲಿ ಕೇವಲ ಆರು ರನ್‌ಗಳನ್ನು ಬಿಟ್ಟುಕೊಟ್ಟರು. ಅಲ್ಲದೆ ಪ್ರತಿ ಓವರ್​ನಲ್ಲೂ ಕನಿಷ್ಠ ಒಂದು ವಿಕೆಟ್ ಪಡೆದರು. ತಮ್ಮ ಮೊದಲ ಓವರ್‌ನ ಮೂರನೇ ಎಸೆತದಲ್ಲಿ ಡೊಮಿನಿಕ್ ಡ್ರೇಕ್ಸ್ (3) ಅವರ ಬಲಿ ಪಡೆದ ಕುಲ್ದೀಪ್, ಮುಂದಿನ ಓವರ್‌ನ ನಾಲ್ಕನೇ ಎಸೆತದಲ್ಲಿ ಯಾನಿಕ್ ಕ್ಯಾರಿಯಾ (3) ಅವರನ್ನು ಹೊರಹಾಕಿದರು. ಡ್ರೇಕ್ಸ್‌ನಂತೆ ಕರಿಯಾ ಕೂಡ ಎಲ್‌ಬಿಡಬ್ಲ್ಯು ಔಟಾದರು.

ತಮ್ಮ ಮೂರನೇ ಓವರ್‌ನಲ್ಲಿ ಆತಿಥೇಯ ನಾಯಕ ಶಾಯ್ ಹೋಪ್ (43) ಮತ್ತು ಜೇಡನ್ ಸೀಲ್ಸ್ (0) ಅವರನ್ನು ಔಟ್ ಮಾಡುವ ಮೂಲಕ ಕುಲದೀಪ್ ವೆಸ್ಟ್ ಇಂಡೀಸ್ ಇನ್ನಿಂಗ್ಸ್‌ಗೆ ಅಂತ್ಯ ಹಾಡಿದರು. ಮೂರನೇ ಎಸೆತದಲ್ಲಿ ರಿವರ್ಸ್ ಸ್ವೀಪ್ ಮಾಡಲು ಪ್ರಯತ್ನಿಸಿದ ಹೋಪ್ ಎಲ್‌ಬಿಡಬ್ಲ್ಯೂ ಆಗಿ ಔಟಾದರೆ, ಸೀಲಿಯಾಸ್ ಕೊನೆಯ ಎಸೆತದಲ್ಲಿ ಲೆಗ್ ಸ್ಲಿಪ್‌ನಲ್ಲಿ ಹಾರ್ದಿಕ್ ಪಾಂಡ್ಯಗೆ ಕ್ಯಾಚ್ ನೀಡಿದರು.

ಮೂರು ಓವರ್‌ಗಳಲ್ಲಿ ಆರು ರನ್‌ ನೀಡಿ, ನಾಲ್ಕು ವಿಕೆಟ್‌ಗಳನ್ನು ಕಬಳಿಸುವ ಮೂಲಕ ವೆಸ್ಟ್ ಇಂಡೀಸ್ ನೆಲದಲ್ಲಿ ಭಾರತೀಯ ಬೌಲರ್ ಒಬ್ಬ ನೀಡಿದ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ಎಂಬ ಹೆಗ್ಗಳಿಕೆಗೆ ಕುಲ್ದೀಪ್ ಪಾತ್ರರಾಗಿದ್ದಾರೆ. ಈ ಹಿಂದೆ ಯುಜ್ವೇಂದ್ರ ಚಹಾಲ್ (4/17), ಅಮಿತ್ ಮಿಶ್ರಾ (4/31), ಭುವನೇಶ್ವರ್ ಕುಮಾರ್ (4/31), ಮತ್ತು ಮೊಹಮ್ಮದ್ ಶಮಿ (4/48) – ಇನ್ನಿಂಗ್ಸ್‌ನಲ್ಲಿ ನಾಲ್ಕು ವಿಕೆಟ್‌ಗಳನ್ನು ಕಬಳಿಸುವಲ್ಲಿ ಯಶಸ್ವಿಯಾಗಿದ್ದರು.

ಇದಲ್ಲದೆ ಕುಲ್ದೀಪ್ ಮತ್ತು ರವೀಂದ್ರ ಜಡೇಜಾ ಒಟ್ಟು 7 ವಿಕೆಟ್ ಪಡೆಯುವುದರೊಂದಿಗೆ ಏಕದಿನದಲ್ಲಿ 7 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಭಾರತದ ಮೊದಲ ಎಡಗೈ ಸ್ಪಿನ್ನರ್ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಹಾಗೆಯೇ ಈ ಪಂದ್ಯದಲ್ಲಿ 3 ವಿಕೆಟ್ ಪಡೆದ ಜಡೇಜಾ ಏಕದಿನ ಮಾದರಿಯಲ್ಲಿ ವಿಂಡೀಸ್ ಹಾಗೂ ಭಾರತ ಮುಖಾಮುಖಿಯಲ್ಲಿ ಅತಿ ಹೆಚ್ಚು ವಿಕೆಟ್ ಉರುಳಿಸಿದ ಬೌಲರ್​ಗಳ ಪೈಕಿ ಜಂಟಿಯಾಗಿ ಮೊದಲ ಸ್ಥಾನ (44 ವಿಕೆಟ್) ಪಡೆದುಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ