ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಾಲಕಿ ಜೊತೆ ಅಸಭ್ಯ ವರ್ತನೆ, ಧರ್ಮದೇಟು; ಚಿನ್ನದ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ ದಾಖಲು!

Twitter
Facebook
LinkedIn
WhatsApp
ಬಾಲಕಿ ಜೊತೆ ಅಸಭ್ಯ ವರ್ತನೆ, ಧರ್ಮದೇಟು; ಚಿನ್ನದ ಅಂಗಡಿ ಮಾಲೀಕನ ವಿರುದ್ಧ ಪ್ರಕರಣ ದಾಖಲು!

ಚಿಕ್ಕಮಗಳೂರು, ಅ.17: ಚಿನ್ನದಂಗಡಿಗೆ (Gold Shop) ಬರುವ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಚಿನ್ನದಂಗಡಿ ಮಾಲೀಕನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿ ಪಾಠ ಕಲಿಸಿರುವ ಘಟನೆ ಚಿಕ್ಕಮಗಳೂರು (chikmagalur) ಜಿಲ್ಲೆಯಲ್ಲಿ ನಡೆದಿದೆ. ತರೀಕೆರೆ ಪಟ್ಟಣದ M.G ರಸ್ತೆಯಲ್ಲಿ ಚಿನ್ನದಂಗಡಿ ನಡೆಸುತ್ತಿದ್ದ ಮಹಮ್ಮದ್ ಅಮೀರ್, ತನ್ನ ಅಂಗಡಿ ಬರುವ ಮಹಿಳೆಯರ ಜೊತೆ ಕೆಟ್ಟದಾಗಿ ನಡೆದುಕೊಳ್ಳುತ್ತಿದ್ದ.

ಅಪ್ರಾಪ್ತ ವಯಸ್ಸಿನ ಬಾಲಕಿ ತನ್ನ ತಾಯಿ ಜೊತೆ ಚಿನ್ನದಂಗಡಿಗೆ ಬಂದಿದ್ದಳು. ಈ ವೇಳೆ ಚಿನ್ನದ ಅಂಗಡಿ ಮಾಲೀಕ ಮಹಮ್ಮದ್ ಅಮೀರ್, ಬಾಲಕಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಇದು ತಿಳಿಯುತ್ತಿದ್ದಂತೆ ಬಾಲಕಿಯ ತಾಯಿ ಸೇರಿದಂತೆ ಸಾರ್ವಜನಿರು ಅಮೀರ್​ಗೆ ಧರ್ಮದೇಟು ನೀಡಿದ್ದಾರೆ. ಬಾಲಕಿಯ ತಾಯಿ ಅಮೀರ್​ಗೆ ಚಪ್ಪಲಿಯಿಂದ ಥಳಿಸಿ ಬುದ್ದಿ ಹೇಳಿದ್ದಾರೆ. ನಾಲ್ಕು ದಿನದ ಹಿಂದೆ ನಡೆದ ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತರೀಕೆರೆ ಪೊಲೀಸ್ ಠಾಣೆಯಲ್ಲಿ ಅಮೀರ್ ವಿರುದ್ಧ ಪ್ರಕರಣ ದಾಖಲಾಗಿದೆ.

ಚಿನ್ನದಂಗಡಿ ಕಳ್ಳತನಕ್ಕೆ ಯತ್ನ

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕೆ.ಜಿ ಟೆಂಪಲ್ ಬಳಿ ಗ್ಯಾಸ್ ಕಟ್ಟರ್ ಬಳಸಿ ಜುವೆಲ್ಲರಿ ಶಾಪ್​ ಕಳ್ಳತನಕ್ಕೆ ಯತ್ನ ನಡೆದಿದೆ. ಖದೀಮರು ಗ್ಯಾಸ್ ಕಟ್ಟರ್ ಬಳಸಿ ಲಕ್ಷ್ಮೀ ಜುವೆಲ್ಲರಿ ಶಾಪ್ ಬಾಗಿಲು ಮುರಿಯಲು ಯತ್ನಿಸಿದ್ದಾರೆ. ಸ್ಥಳೀಯರು ಬರುತ್ತಿದ್ದಂತೆ ಖದೀಮರು ಬೈಕ್ ಹಾಗೂ ಗ್ಯಾಸ್ ಕಟ್ಟರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಳೆದ ಎರಡು ದಿನಗಳ‌ ಹಿಂದಷ್ಟೇ ಇದೇ ರೀತಿ ಕಳ್ಳತನ ನಡೆದಿತ್ತು. ಕೆ.ಜಿ ಟೆಂಪಲ್ ಭವಾನಿ ಜುವೆಲ್ಲರಿ ಶಾಪ್ ನಲ್ಲಿ ಕಳ್ಳತನ ನಡೆದಿತ್ತು. 6 ಕೆಜಿ ಬೆಳ್ಳಿ ಆಭರಣ ದೋಚಲಾಗಿತ್ತು. ಇದೀಗ ಮತ್ತೊಂದು ಕಳ್ಳತನ ಯತ್ನ ನಡೆದಿದೆ. ಇದರಿಂದ ವ್ಯಾಪಾರಸ್ಥರು ಆತಂಕಕ್ಕೊಳಗಾಗಿದ್ದಾರೆ.

ಬೆಳಗ್ಗೆ ಹೊತ್ತಿನಲ್ಲಿ ಸರಗಳ್ಳತನ: ಕಲಬುರಗಿ ನಗರದಲ್ಲಿ ಪೊಲೀಸರಿಂದ ಮಾರ್ನಿಂಗ್ ಬೀಟ್

ಕಲಬುರಗಿ, ಅ.16: ಸಾಮಾನ್ಯವಾಗಿ ಪೊಲೀಸರು ರಾತ್ರಿ ಸಮಯದಲ್ಲಿ ಕಳ್ಳತನ, ಅಪರಾಧ ಕೃತ್ಯಗಳನ್ನು ತಡೆಯಲು ನೈಟ್ ಬೀಟ್​ಗಳನ್ನು ಮಾಡುತ್ತಾರೆ. ಆದರೆ ಕಲಬುರಗಿ (Kalaburagi) ಪೊಲೀಸರು ರಾತ್ರಿ ಬೀಟ್ ಮಾತ್ರವಲ್ಲ, ಬೆಳಗ್ಗೆ ಬೀಟ್ ಕೂಡ ಆರಂಭಿಸಿದ್ದಾರೆ. ಸಾರ್ವಜನಿಕ ಉದ್ಯಾನವನ, ಮಾರ್ಕೇಟ್ ಸೇರಿದಂತೆ ಕೆಲವಡೇ ಮುಂಜಾನೆಯೇ ಪೊಲೀಸರು ಭೇಟಿ ನೀಡಲು ಆರಂಭಿಸಿದ್ದಾರೆ. ಆ ಮೂಲಕ ಕಲಬುರಗಿ ನಗರದಲ್ಲಿ ಹೆಚ್ಚಾಗುತ್ತಿರುವ ಸರಗಳ್ಳತನ ಮತ್ತು ಅಪರಾಧ ಕೃತ್ಯಗಳನ್ನು ತಡೆಯಲು ಖಾಕಿ ಪಡೆ ಮುಂದಾಗಿದೆ.

ಕಲಬುರಗಿ ನಗರದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳನ್ನು ತಡೆಗಟ್ಟಲಿಕ್ಕಾಗಿಯೇ ನಗರ ಪೊಲೀಸ್ ಆಯುಕ್ತಾಲಯವನ್ನು ಅನೇಕ ವರ್ಷಗಳ ಹಿಂದೆ ಆರಂಭಿಸಲಾಗಿದೆ. ಆದರೂ ಅಪರಾಧಗಳ ಸಂಖ್ಯೆ ಮಾತ್ರ ಕಡಿಮೆಯಾಗುತ್ತಿಲ್ಲ.

ನಗರದಲ್ಲಿ ಪ್ರತಿನಿತ್ಯ ಅನೇಕ ಕಡೆ ಮನೆಗಳ್ಳತನ, ಸರಗಳ್ಳತನ, ದರೋಡೆ ಪ್ರಕರಣಗಳು ವರದಿಯಾಗುತ್ತಲೇ ಇವೆ. ರಾತ್ರಿ ಸಮಯದಲ್ಲಿ ನಡೆಯುತ್ತಿದ್ದ ಕಳ್ಳತನ ಪ್ರಕರಣಗಳು ಇದೀಗ ಮುಂಜಾನೆ ಕೂಡಾ ನಡೆಯುತ್ತಿವೆ. ಹೀಗಾಗಿ ಮಂಜಾನೆ ನಡೆಯುತ್ತಿರುವ ಅಪರಾಧ ಕೃತ್ಯಗಳನ್ನು ತಡೆಯಲು ಕಲಬುರಗಿ ಪೊಲೀಸರು ಮಾರ್ನಿಂಗ್ ಬೀಟ್ ಆರಂಭಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ