ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Independence Day: ದೇಶಾದ್ಯಂತ ಇಂದು ಸ್ವಾತಂತ್ರ್ಯೋತ್ಸವದ ಸಂಭ್ರಮ ; ಹೇಗಿದೆ ಇಂದಿನ ಕಾರ್ಯಕ್ರಮಗಳು

Twitter
Facebook
LinkedIn
WhatsApp
Independence Day: ದೇಶಾದ್ಯಂತ ಇಂದು ಸ್ವಾತಂತ್ರ್ಯೋತ್ಸವದ ಸಂಭ್ರಮ ; ಹೇಗಿದೆ ಇಂದಿನ ಕಾರ್ಯಕ್ರಮಗಳು

ದೇಶಾದ್ಯಂತ ಇಂದು 77ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. 77ನೇ ಸ್ವಾತಂತ್ರ್ಯೋತ್ಸವ ನಿಮಿತ್ತ ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಧ್ವಜಾರೋಹಣ ನೆರವೇರಿಸಲಿದ್ದು, ಇದಕ್ಕೂ ಮುನ್ನ ಮಹಾತ್ಮಾ ಗಾಂಧೀಜಿ ಸಮಾಧಿ ಸ್ಥಳ ರಾಜಘಾಟ್​ಗೆ ಭೇಟಿ ನೀಡಿ ದರ್ಶನ ಪಡೆದರು.ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಇಂದು ದೆಹಲಿಯ ಕೆಂಪುಕೋಟೆ ಮೇಲೆ ಪ್ರಧಾನಿ ನರೇಂದ್ರ ಮೋದಿಯವರು ಬೆಳಗ್ಗೆ 7.30ಕ್ಕೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬೆಳಗ್ಗೆ 7.33ಕ್ಕೆ ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುತ್ತಾರೆ. ರಾಷ್ಟ್ರೀಯ ಗೌರವ ಸಲ್ಲಿಕೆ, ಬ್ಯಾಂಡ್ ಮೂಲಕ ರಾಷ್ಟ್ರಗೀತೆ, ಗೌರವ ವಂದನೆ ನೆರವೇರುತ್ತದೆ.

ರಾಜ್ಯಾದ್ಯಂತ 77ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಾಚರಣೆ ಮನೆಮಾಡಿದೆ. ಬೆಂಗಳೂರಿನ ಮಾಣೆಕ್​ ಶಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಕಲ ಸಿದ್ದತೆಯಾಗಿದ್ದು, ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ತೆರೆದ ಜೀಪ್​ನಲ್ಲಿ ಪರೇಡ್​ ಪರಿವೀಕ್ಷಣೆ, ಗೌರವ ರಕ್ಷೆ ಸ್ವೀಕಾರ ಮಾಡಲಿದ್ದಾರೆ. ಬಳಿಕ ಬಳಿಕ ರಾಜ್ಯದ ಜನರನ್ನು ಉದ್ದೇಶಿಸಿ  ಭಾಷಣ ಮಾಡಲಿದ್ದಾರೆ.

 ಕೆಂಪುಕೋಟೆಯ 77ನೇ ಸ್ವಾತಂತ್ರ್ಯ ದಿನಾಚರಣೆಗೆ 31 ಜನ ಕನ್ನಡಿಗರು ಸೇರಿದಂತೆ ದೇಶದ 1800 ವಿಶೇಷ ಅತಿಥಿಗಳಿಗೆ ಆಹ್ವಾನಿಸಲಾಗಿದೆ.

ಬ್ರಿಟಿಷರ ದಾಸ್ಯದಿಂದ ಮುಕ್ತವಾಗಿ 1947 ಆಗಸ್ಟ್​ 15 ರಂದು ಭಾರತಕ್ಕೆ ಸ್ವಾತಂತ್ರ್ಯ (Independence Day)ದೊರೆಯಿತು. ಸ್ವಾತಂತ್ರ್ಯಕ್ಕಾಗಿ ಅನೇಕ ಹೋರಾಟಗಾರರು ಜೀವನ ಮತ್ತು ಜೀವ ಮುಡಿಪಾಗಿಟ್ಟಿದ್ದರು. ಅವರ ತ್ಯಾಗ, ಸೇವೆಯ ಪ್ರತಿರೂಪವೇ ಸ್ವಾತಂತ್ರ್ಯ. ದೇಶಾದ್ಯಂತ ಇಂದು 77ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯ ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಇನ್ನು ರಾಜ್ಯದಲ್ಲಿ ಬೆಂಗಳೂರಿನ ಮಾಣಿಕ್​ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾ ಆರೋಹಣ ಮಾಡಲಿದ್ದಾರೆ. ಹಾಗೇ ದೇಶದ ಎಲ್ಲ ಶಾಲೆ, ಕಾಲೇಜು, ಸರ್ಕಾರಿ ಮತ್ತು ಬಹುತೇಕ ಖಾಸಗಿ ಕಚೇರಿಗಳ ಎದುರು ಧ್ವಜಾರೋಹಣ ಮಾಡಲಾಗುತ್ತದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ