ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂದು ಭಾರತ-ಅಫ್ಘಾನಿಸ್ತಾನ ನಡುವೆ ಪಂದ್ಯ ; ಕೊಹ್ಲಿಯ ಅಬ್ಬರದ ಬ್ಯಾಟಿಂಗ್ ವೀಕ್ಷಿಸಲು ಫ್ಯಾನ್ಸ್ ವೈಟಿಂಗ್!

Twitter
Facebook
LinkedIn
WhatsApp
ಇಂದು ಭಾರತ-ಅಫ್ಘಾನಿಸ್ತಾನ ನಡುವೆ ಪಂದ್ಯ ; ಕೊಹ್ಲಿಯ ಅಬ್ಬರದ ಬ್ಯಾಟಿಂಗ್ ವೀಕ್ಷಿಸಲು ಫ್ಯಾನ್ಸ್ ವೈಟಿಂಗ್!

ನವದೆಹಲಿ: ವಿಶ್ವಕಪ್‌ (Cricket World Cup 2023) ಆರಂಭಿಕ ಪಂದ್ಯದಲ್ಲಿ ಸ್ಪಿನ್‌ ಸ್ನೇಹಿ ಪಿಚ್‌ನಲ್ಲೂ ಆಸೀಸ್‌ ವಿರುದ್ಧ ಗೆದ್ದು, ವಿಶ್ವಕಪ್‌ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆದಿರುವ ಭಾರತ ಇಂದು ಅಫ್ಘಾನಿಸ್ತಾನ (Afghanistan) ತಂಡದ ವಿರುದ್ಧ ಸೆಣಸಲಿದೆ.

ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2 ಗಂಟೆಗೆ ಪಂದ್ಯ ಆರಂಭಗೊಳ್ಳಲಿದ್ದು, ಭಾರತ ತಂಡ ನಿರಾಯಾಸವಾಗಿ ಗೆಲ್ಲುವ ಗುರಿ ಹೊಂದಿದೆ. ಅದರಲ್ಲೂ ಮುಖ್ಯವಾಗಿ ಅಫ್ಘಾನ್‌ ಬೌಲರ್‌ ನವೀನ್‌ ಉಲ್‌ ಹಕ್‌ನನ್ನ ಕೆಣಕುವ ಸಲುವಾಗಿಯೇ ಮೈದಾನದಲ್ಲಿ ಕೊಹ್ಲಿ (Virat Kohli) ಅಬ್ಬರಿಸೋದನ್ನ ನೋಡಲು ಕಾದು ಕುಳಿತಿದ್ದಾರೆ.

ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳು ಮೂರು ಬಾರಿ ಮುಖಾಮುಖಿಯಾಗಿದ್ದು, ಭಾರತ 2 ಬಾರಿ ಗೆಲುವು ಸಾಧಿಸಿದೆ. ಒಂದು ಬಾರಿ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. 

ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2 ಗಂಟೆಗೆ ಪಂದ್ಯ ಆರಂಭಗೊಳ್ಳಲಿದ್ದು, ಭಾರತ ತಂಡ ನಿರಾಯಾಸವಾಗಿ ಗೆಲ್ಲುವ ಗುರಿ ಹೊಂದಿದೆ. ಅದರಲ್ಲೂ ಮುಖ್ಯವಾಗಿ ಅಫ್ಘಾನ್‌ ಬೌಲರ್‌ ನವೀನ್‌ ಉಲ್‌ ಹಕ್‌ನನ್ನ ಕೆಣಕುವ ಸಲುವಾಗಿಯೇ ಮೈದಾನದಲ್ಲಿ ಕೊಹ್ಲಿ (Virat Kohli) ಅಬ್ಬರಿಸೋದನ್ನ ನೋಡಲು ಕಾದು ಕುಳಿತಿದ್ದಾರೆ.

ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳು ಮೂರು ಬಾರಿ ಮುಖಾಮುಖಿಯಾಗಿದ್ದು, ಭಾರತ 2 ಬಾರಿ ಗೆಲುವು ಸಾಧಿಸಿದೆ. ಒಂದು ಬಾರಿ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. 

ಇಂದು ಭಾರತ-ಅಫ್ಘಾನಿಸ್ತಾನ ನಡುವೆ ಪಂದ್ಯ ; ಕೊಹ್ಲಿಯ ಅಬ್ಬರದ ಬ್ಯಾಟಿಂಗ್ ವೀಕ್ಷಿಸಲು ಫ್ಯಾನ್ಸ್ ವೈಟಿಂಗ್!

ಕೊಹ್ಲಿ ಫ್ಯಾನ್ಸ್‌ಗೆ ನವೀನ್‌ ಆಹಾರವಾಗ್ತಿರೋದೇಕೆ?
2023ರ ಐಪಿಎಲ್‌ ಟೂರ್ನಿವೇಳೆ ಏಕನಾ ಕ್ರೀಡಾಂಗಣದಲ್ಲಿ ನಡೆದ 43ನೇ ಪಂದ್ಯದಲ್ಲಿ ಆರ್‌ಸಿಬಿ, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 18 ರನ್‌ಗಳ ಜಯ ಸಾಧಿಸಿತು. ಈ ಹಿಂದೆ ಆರ್‌ಸಿಬಿ ತವರಿನಲ್ಲಿ ಲಕ್ನೋ ವಿರುದ್ಧದ ವಿರೋಚಿತ ಸೋಲಿಗೆ ಸೇಡು ತೀರಿಸಿಕೊಂಡಿತು. ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ನಡುವೆ ಈ ಹಿಂದೆಯೂ ಹಲವು ಬಾರಿ ಜಗಳ ನಡೆದಿವೆ. ಆ ನಂತರ ಇಬ್ಬರ ನಡುವೆ ಉತ್ತಮ ಬಾಂಧವ್ಯವಿತ್ತು. ಆದರೆ ಅಂದು ನಡೆದ ಪಂದ್ಯದ ಬಳಿಕ ಇವರಿಬ್ಬರ ನಡುವಿನ ಜಗಳ ಅತಿರೇಕಕ್ಕೆ ತಲುಪಿತ್ತು. ಒಂದು ವೇಳೆ ಸಹ ಆಟಗಾರರು ಮಧ್ಯ ಬಾರದೇ ಇದ್ದಿದ್ದರೆ ಕೈಕೈ ಮಿಲಾಯಿಸುವುದಕ್ಕೂ ಕಾರಣವಾಗುತ್ತಿತ್ತು.

ಅಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಮತ್ತು ಎಲ್‌ಎಸ್‌ಜಿ ನಡುವಣ ಪಂದ್ಯದಲ್ಲಿ ಲಕ್ನೋ ತಂಡ 1 ವಿಕೆಟ್‌ಗಳ ಜಯ ದಾಖಲಿಸಿತ್ತು. ಆ ಪಂದ್ಯದ ಬಳಿಕ ಗಂಭೀರ್ ಬಾಯ್ಮೇಲೆ ಬೆರೆಳಿಟ್ಟು ಆರ್‌ಸಿಬಿ ಪ್ರೇಕ್ಷಕರು ಸುಮ್ಮನಿರುವಂತೆ ಸೂಚಿಸಿ ಸಂಭ್ರಮಿಸಿದ್ದರು. ಲಕ್ನೋ ತಂಡದ ಅವೇಶ್ ಖಾನ್ ಹೆಲ್ಮೆಟ್ ಕಿತ್ತೆಸೆದು ಅತಿರೇಖದ ವರ್ತನೆ ತೋರಿಸಿದ್ದರು. ಇದಕ್ಕೆ ಪ್ರತಿಯಾಗಿ ತವರಿನಲ್ಲಿ ಬುದ್ಧಿ ಕಲಿಸಲು ನಿರ್ಧರಿಸಿದ್ದ ಕೊಹ್ಲಿ ಪಂದ್ಯದ ನಡುವೆ ಅಭಿಮಾನಿಗಳು ಸುಮ್ಮನಿರಬಾರದು? ಹೃದಯತುಂಬಿ ಸಂಭ್ರಮಿಸಬೇಕು ಎಂದು ಸನ್ನೆ ಮೂಲಕ ತೋರಿಸಿದ್ದರು. 

127 ರನ್ ಗುರಿ ಬೆನ್ನತ್ತಿದ್ದ ಲಕ್ನೋ ತಂಡ ಸತತ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇನಿಂಗ್ಸ್ ಅಂತ್ಯದಲ್ಲಿ ಅಮಿತ್ ಮಿಶ್ರಾ 19 ರನ್ ಮತ್ತು ವೇಗಿ ನವೀನ್ ಉಲ್ ಹಕ್ 13 ನಡುವೆ ಸಣ್ಣ ಜೊತೆಯಾಟವೊಂದು ಮೂಡಿಬಂದಿತ್ತು. ಕವರ್ಸ್ ವಿಭಾಗದಲ್ಲಿ ಒಂದು ಫೋರ್ ಕೂಡ ಬಾರಿಸಿದ್ದ ನವೀನ್ ಉಲ್‌ಹಕ್‌ ಆರ್‌ಸಿಬಿ ಸ್ಟಾರ್‌ ವಿರಾಟ್ ಕೊಹ್ಲಿ ಅವರನ್ನ ದುರುಗುಟ್ಟಿ ನೋಡಿ, ದೊಡ್ಡ ಜಗಳಕ್ಕೆ ಸಣ್ಣ ಕಿಡಿ ಹಚ್ಚಿದ್ದರು. ಪಂದ್ಯ ಮುಗಿದ ಬಳಿಕ ನವೀನ್ ಮತ್ತು ಕೊಹ್ಲಿ ಕೈ ಕುಲುಕುವಾಗಲೂ ಮಾತಿನ ಚಕಮಕಿ ನಡೆದಿತ್ತು. ಕೈ-ಕೈ ಮಿಲಾಯಿಸುವುದಕ್ಕೂ ಮುಂದಾಗಿದ್ದರು. ಆದ್ರೆ ಮ್ಯಾಕ್ಸ್ವೆಲ್ ಹಾಗೂ ಹರ್ಷಲ್ ಪಟೇಲ್ ಸಮಾಧಾನಪಡಿಸಿ ಕಳುಹಿಸಿದ್ದರು.

ಇಂದು ಭಾರತ-ಅಫ್ಘಾನಿಸ್ತಾನ ನಡುವೆ ಪಂದ್ಯ ; ಕೊಹ್ಲಿಯ ಅಬ್ಬರದ ಬ್ಯಾಟಿಂಗ್ ವೀಕ್ಷಿಸಲು ಫ್ಯಾನ್ಸ್ ವೈಟಿಂಗ್!

ಕೊಹ್ಲಿ ಮತ್ತು ನವೀನ್ ಉಲ್‌ ಹಕ್‌ ನಡುವಣ ಸಣ್ಣ ಜಗಳವನ್ನು ಅಲ್ಲೇ ಇದ್ದ ಎರಡೂ ತಂಡಗಳ ಆಟಗಾರರು ಬಗೆ ಹರಿಸಿದ್ದರು. ಆದರೆ, ಡಗೌಟ್‌ನಿಂದ ಹೊರಬಂದ ಗೌತಮ್ ಗಂಭೀರ್ ಜಗಳವನ್ನು ಮತ್ತಷ್ಟು ಗಂಭೀರವಾಗಿಸಿದರು. ವಿರಾಟ್ ಜೊತೆಗೆ ಮಾತನಾಡುತ್ತಿದ್ದ ಎಲ್‌ಎಸ್‌ಜಿ ಆಟಗಾರ ಕೈಲ್ ಮೇಯರ್ಸ್ ಅವರನ್ನು ಎಳೆದೊಯ್ದ ಗಂಭೀರ್ ಈ ಸಂದರ್ಭದಲ್ಲಿ ಮಾತಿನ ಚಕಮಕಿಯೇ ನಡೆಸಿದ್ದರು. ಕೊಹ್ಲಿ ಮತ್ತು ಗಂಭೀರ್‌ನ ತಡೆದು ನಿಲ್ಲಿಸಲು ಎರಡೂ ತಂಡದ ಆಟಗಾರರು ಹರಸಾಹನ ನಡೆಸಿದರು. ಈ ವೇಳೆ ಕೆ.ಎಲ್ ರಾಹುಲ್ ಹಾಗೂ ಅಮಿತ್ ಮಿಶ್ರಾ ಪರಿಸ್ಥಿತಿಯನ್ನು ತಣ್ಣಗಾಗಿಸಿದರು.

ಅಫ್ಘಾನ್‌ ವಿರುದ್ಧ ಭಾರತ ಪ್ಲೇಯಿಂಗ್‌-11: ರೋಹಿತ್‌ ಶರ್ಮಾ (ನಾಯಕ), ಇಶಾನ್‌ ಕಿಶನ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌, ಕೆ.ಎಲ್‌ ರಾಹುಲ್‌, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್‌ ಅಶ್ವಿನ್‌, ಕುಲ್ದೀಪ್‌ ಯಾದವ್‌, ಜಸ್ಪ್ರೀತ್‌ ಬುಮ್ರಾ, ಮೊಹಮ್ಮದ್‌ ಸಿರಾಜ್‌.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ