ಇಂಡಿಯಾ-ಭಾರತ ಕುರಿತು ಹೇಳಿಕೆ ನೀಡದಂತೆ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ
ಇಂಡಿಯಾ(India)ವನ್ನು ಇನ್ನುಮುಂದೆ ಭಾರತ(Bharat) ಎಂದು ಕರೆಯಬೇಕೆನ್ನುವ ವಿಚಾರ ಕಳೆದ ಎರಡು ದಿನಗಳಿಂದ ರಾಜಕೀಯ ಗದ್ದಲವನ್ನುಂಟು ಮಾಡಿದೆ. ಈ ವಿಚಾರವಾಗಿ ಯಾವುದೇ ರೀತಿಯ ಹೇಳಿಕೆಯನ್ನು ನೀಡದಿರಲು ಪ್ರಧಾನಿ ಮೋದಿ ಸಚಿವರಿಗೆ ಸೂಚನೆ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ತಮ್ಮ ಸಚಿವರೊಂದಿಗೆ ಈ ವಿಷಯದ ಬಗ್ಗೆ ಚರ್ಚಿಸಿದ್ದಾರೆ. ಕಳೆದ ಎರಡು ದಿನಗಳಿಂದ, ಪ್ರತಿಪಕ್ಷಗಳು ಈ ವಿಷಯದ ಬಗ್ಗೆ ಗೇಮ್‌ಪ್ಲಾನ್ ಮಾಡಲು ಎರಡು ಸಭೆಗಳನ್ನು ನಡೆಸಿವೆ.
ಸೆಪ್ಟೆಂಬರ್ 18 ರಿಂದ ಪ್ರಾರಂಭವಾಗುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಚರ್ಚಿಸಬಹುದಾದ 9 ವಿಷಯಗಳ ಪಟ್ಟಿಗಳ ಬಗ್ಗೆ ಸೋನಿಯಾ ಗಾಂಧಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ರಾಷ್ಟ್ರಪತಿ ಕಚೇರಿಯಿಂದ ಜಿ20 ಪ್ರತಿನಿಧಿಗಳಿಗೆ ಕಳುಹಿಸಲಾದ ಔತಣಕೂಟದ ಆಮಂತ್ರಣದಲ್ಲಿ ದ್ರೌಪದಿ ಮುರ್ಮು ಅವರನ್ನು ‘ಪ್ರೆಸಿಡೆಂಟ್ ಆಫ್ ಇಂಡಿಯಾ’ ಬದಲಿಗೆ ‘ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಕರೆಯಲಾಗಿದ್ದು ಈ ಕುರಿತು ಕಾಂಗ್ರೆಸ್ ಕಿಡಿ ಕಾರಿತ್ತು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವಿಟರ್‌ನಲ್ಲಿ , ಸಂವಿಧಾನ ಒಂದನೇ ವಿಧಿಯಡಿ, ಭಾರತ, ಅದು ಇಂಡಿಯಾ, ರಾಜ್ಯಗಳ ಒಕ್ಕೂಟ ಎಂದು ಕರೆಯಲಾಗುತ್ತಿತ್ತು. ಆದರೆ ಈಗ ಈ ರಾಜ್ಯಗಳ ಒಕ್ಕೂಟ ಆಕ್ರಮಣಕ್ಕೆ ಒಳಗಾಗಿದೆ ಎಂದು ಆಕ್ರೋಶ ಹೊರಹಾಕಿದ್ದರು.
ಎರಡು ದಿನಗಳ ಹಿಂದಷ್ಟೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಇಂಡಿಯಾ ಎಂದು ಹೇಳುವುದನ್ನು ಇನ್ನು ಬಿಡಿ, ಭಾರತ ಎಂದು ಹೇಳಿ ಎಂದು ಮನವಿ ಮಾಡಿಕೊಂಡ ನಂತರ ಈ ವಿಷಯ ಬೆಳಕಿಗೆ ಬಂದಿದೆ.
ಅದಾದ ಬಳಿಕ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಪ್ರಧಾನಿ ಮೋದಿಯನ್ನು ಪ್ರೈಮ್ ಮಿನಿಸ್ಟರ್ ಆಫ್ ಭಾರತ್ ಎಂದು ಬರೆಯಲಾಗಿತ್ತು. ಈ ಕುರಿತು ಕೂಡ ಸಾಕಷ್ಟು ಗೊಂದಲಗಳೆದ್ದಿವೆ.
ಬಿಜೆಪಿ ರಾಜ್ಯಸಭಾ ಸಂಸದ ಹರನಾಥ್ ಸಿಂಗ್ ಯಾದವ್ ಇಂಡಿಯಾ ಬದಲು ಭಾರತ ಪದವನ್ನು ಬಳಸಬೇಕೆಂದು ಇಡೀ ದೇಶ ಒತ್ತಾಯಿಸುತ್ತಿದೆ ಎಂದರು, ಇಂಡಿಯಾ ಎಂಬ ಪದವು ಬ್ರಿಟಿಷರು ನಮಗೆ ನೀಡಿದ ನಿಂದನೆಯಾಗಿದೆ ಆದರೆ ‘ಭಾರತ್’ ಎಂಬ ಪದವು ನಮ್ಮ ಸಂಸ್ಕೃತಿಯ ಸಂಕೇತವಾಗಿದೆ ಎಂದು ಹೇಳಿದರು.
ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ನಾನು ಯಾವುದೇ ಧರ್ಮದ ಶತ್ರುವಲ್ಲ: ಉದಯನಿಧಿ ಸ್ಟಾಲಿನ್
ಸನಾತನ ಧರ್ಮದ ಕುರಿತ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ನಾನು ಯಾವುದೇ ಧರ್ಮದ ಶತ್ರುವಲ್ಲ ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್(Udhayanidhi Stalin) ಹೇಳಿದ್ದಾರೆ. ಇತ್ತೀಚೆಗಷ್ಟೇ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಹಾಗೂ ಕೊರೊನಾಗೆ ಹೋಲಿಸಿದ್ದರು, ಸನಾತನ ಧರ್ಮವನ್ನು ಬುಡ ಸಮೇತ ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿದ್ದರು, ಇದು ವಿವಾದಕ್ಕೆ ಕಾರಣವಾಗಿತ್ತು. ಈ ವೈರಸ್‌ಗಳನ್ನು ಬೇರು ಸಹಿತ ನಾಶಗೊಳಿಸುವ ರೀತಿಯಲ್ಲೇ ಸನಾತನ ಧರ್ಮೀಯರನ್ನು ನಾಶಗೊಳಿಸಿದರೆ ಮಾತ್ರ ಈ ದೇಶಕ್ಕೆ ಒಳಿತಾಗುತ್ತದೆ ಎಂಬ ಆಘಾತಕಾರಿ ಹೇಳಿಕೆ ನೀಡಿದ್ದರು.
ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದ್ದು, ನಾವು ಯಾವುದೇ ಧರ್ಮದ ಶತ್ರುಗಳಲ್ಲ ಎಂದರು. ನಾವು ಪೆರಿಯಾರ್, ಅಣ್ಣಾ ಮತ್ತು ಕರುಣಾನಿಧಿಯವರ ಬೆಂಬಲಿಗರು. ಸಾಮಾಜಿಕ ನ್ಯಾಯಕ್ಕಾಗಿ ನಾವು ಯಾವಾಗಲೂ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ ಯಾರಿಗೂ ಭಯ ಪಡುವುದಿಲ್ಲ ಎಂದರು.
ಡಿಎಂಕೆ ನಾಯಕನ ಹೇಳಿಕೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಭಟನೆ ಆರಂಭವಾಗಿದೆ. ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಹೇಳಿದ್ದಾರೆ.
ರಾಜ್ಯದಲ್ಲಿ ಡಿಎಂಕೆ ಮತ್ತು ಕಾಂಗ್ರೆಸ್ ಚುನಾವಣಾ ಮೈತ್ರಿ ಮಾಡಿಕೊಂಡಿವೆ ಎಂದರು. ಅಲ್ಲದೆ 2024ರ ಸಂಸತ್ ಚುನಾವಣೆಯಲ್ಲಿ ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳಿಗೆ ಮತ ನೀಡುವಂತೆ ಜನರಿಗೆ ಮನವಿ ಮಾಡಿದರು.
ಸನಾತನ ಧರ್ಮವನ್ನು ಅನುಸರಿಸುವ ಜನರ ನರಮೇಧಕ್ಕೆ ನಾನು ಎಂದಿಗೂ ಕರೆ ನೀಡಿಲ್ಲ . ಸನಾತನ ಧರ್ಮವು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುವ ತತ್ವವಾಗಿದೆ. ಸನಾತನ ಧರ್ಮವನ್ನು ಕಿತ್ತುಹಾಕುವುದು ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಎತ್ತಿಹಿಡಿಯುತ್ತದೆ.
ನಾನು ಮಾತನಾಡುವ ಪ್ರತಿಯೊಂದು ಮಾತಿಗೂ ದೃಢವಾಗಿ ನಿಲ್ಲುತ್ತೇನೆ.ಸನಾತನ ಧರ್ಮದಿಂದ ಬಳಲುತ್ತಿರುವ ತುಳಿತಕ್ಕೊಳಗಾದ ಮತ್ತು ಅಂಚಿನಲ್ಲಿರುವವರ ಪರವಾಗಿ ಮಾತನಾಡಿದ್ದೇನೆ ಎಂದು ಸಮರ್ಥಿಸಿಕೊಂಡರು.