ಭಾರತ - ನ್ಯೂಜಿಲೆಂಡ್ ರೋಚಕ ಪಂದ್ಯದಲ್ಲಿ ಭಾರತ ಫೈನಲ್ ಪ್ರವೇಶ ; 7 ವಿಕೆಟ್ ಕಬಳಿಸಿ ದಾಖಲೆ ಬರೆದ ಶಮಿ...!
ಏಕದಿನ ವಿಶ್ವಕಪ್ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ವಿರುದ್ಧ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ವಿಶ್ವಕಪ್ನ ಫೈನಲ್ಗೇರಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ (117) ಹಾಗೂ ಶ್ರೇಯಸ್ ಅಯ್ಯರ್ (105) ಶತಕ ಸಿಡಿಸಿ ಮಿಂಚಿದರು. ಈ ಶತಕಗಳ ನೆರವಿನಿಂದ ಟೀಮ್ ಇಂಡಿಯಾ 50 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 397 ರನ್ ಕಲೆಹಾಕಿತು.ಇನ್ನು ಇನ್ ಬೌಲಿಂಗ್ ವೇಗಿ ಶಮಿ 7 ವಿಕೇಟ್ ತೆಗೆದು ವಿಶ್ವ ದಾಖಲೆ ಬರೆದಿದ್ದಾರೆ.
398 ರನ್ಗಳ ಬೃಹತ್ ಗುರಿಯನ್ನು ಪಡೆದ ನ್ಯೂಝಿಲೆಂಡ್ ಪರ ಡೇರಿಲ್ ಮಿಚೆಲ್ (134) ಶತಕ ಬಾರಿಸಿದರು. ಇದಾಗ್ಯೂ 50 ಓವರ್ಗಳಲ್ಲಿ ನ್ಯೂಝಿಲೆಂಡ್ ತಂಡವು 327 ರನ್ಗಳಿಸಲಷ್ಟೇ ಶಕ್ತರಾಗಿದ್ದರು. ಇದರೊಂದಿಗೆ ಟೀಮ್ ಇಂಡಿಯಾ 70 ರನ್ಗಳ ಭರ್ಜರಿ ಜಯ ಸಾಧಿಸಿದೆ.
ಏಕದಿನ ಕ್ರಿಕೆಟ್ನಲ್ಲಿ ಉಭಯ ತಂಡಗಳು 118 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ತಂಡ 60 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 50 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯ ಟೈನಲ್ಲಿ ಅಂತ್ಯಕಂಡರೆ, 7 ಮ್ಯಾಚ್ಗಳು ಫಲಿತಾಂಶರಹಿತವಾಗಿತ್ತು.
ನ್ಯೂಝಿಲೆಂಡ್ (ಪ್ಲೇಯಿಂಗ್ XI): ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಾಮ್ ಲಾಥಮ್ (ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.
ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ನ್ಯೂಝಿಲೆಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೆ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್.