ಭಾನುವಾರ, ಸೆಪ್ಟೆಂಬರ್ 15, 2024
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ-ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತ - ನ್ಯೂಜಿಲೆಂಡ್ ರೋಚಕ ಪಂದ್ಯದಲ್ಲಿ ಭಾರತ ಫೈನಲ್ ಪ್ರವೇಶ ; 7 ವಿಕೆಟ್ ಕಬಳಿಸಿ ದಾಖಲೆ ಬರೆದ ಶಮಿ...!

Twitter
Facebook
LinkedIn
WhatsApp
ಭಾರತ - ನ್ಯೂಜಿಲೆಂಡ್ ರೋಚಕ ಪಂದ್ಯದಲ್ಲಿ ಭಾರತ ಫೈನಲ್ ಪ್ರವೇಶ ; 7 ವಿಕೆಟ್ ಕಬಳಿಸಿ ದಾಖಲೆ ಬರೆದ ಶಮಿ...!

ಏಕದಿನ ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ವಿರುದ್ಧ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ವಿಶ್ವಕಪ್​ನ ಫೈನಲ್​ಗೇರಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ (117) ಹಾಗೂ ಶ್ರೇಯಸ್ ಅಯ್ಯರ್ (105) ಶತಕ ಸಿಡಿಸಿ ಮಿಂಚಿದರು. ಈ ಶತಕಗಳ ನೆರವಿನಿಂದ ಟೀಮ್ ಇಂಡಿಯಾ 50 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 397 ರನ್​ ಕಲೆಹಾಕಿತು.ಇನ್ನು ಇನ್ ಬೌಲಿಂಗ್ ವೇಗಿ ಶಮಿ 7 ವಿಕೇಟ್ ತೆಗೆದು ವಿಶ್ವ ದಾಖಲೆ ಬರೆದಿದ್ದಾರೆ.

398 ರನ್​ಗಳ ಬೃಹತ್ ಗುರಿಯನ್ನು ಪಡೆದ ನ್ಯೂಝಿಲೆಂಡ್ ಪರ ಡೇರಿಲ್ ಮಿಚೆಲ್ (134) ಶತಕ ಬಾರಿಸಿದರು. ಇದಾಗ್ಯೂ 50 ಓವರ್​ಗಳಲ್ಲಿ ನ್ಯೂಝಿಲೆಂಡ್ ತಂಡವು 327 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇದರೊಂದಿಗೆ ಟೀಮ್ ಇಂಡಿಯಾ 70 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಏಕದಿನ ಕ್ರಿಕೆಟ್​ನಲ್ಲಿ ಉಭಯ ತಂಡಗಳು 118 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ತಂಡ 60 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 50 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯ ಟೈನಲ್ಲಿ ಅಂತ್ಯಕಂಡರೆ, 7 ಮ್ಯಾಚ್​ಗಳು ಫಲಿತಾಂಶರಹಿತವಾಗಿತ್ತು.

ನ್ಯೂಝಿಲೆಂಡ್ (ಪ್ಲೇಯಿಂಗ್ XI): ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಾಮ್ ಲಾಥಮ್ (ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.

ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ನ್ಯೂಝಿಲೆಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೆ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ