ಮಂಗಳವಾರ, ಮೇ 7, 2024
ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

India vs Pakistan: ಇದೇ ವಾರ ಭಾರತ-ಪಾಕ್ ಮತ್ತೆ ಮುಖಾಮುಖಿ..!

Twitter
Facebook
LinkedIn
WhatsApp
India vs Pakistan: ಇದೇ ವಾರ ಭಾರತ-ಪಾಕ್ ಮತ್ತೆ ಮುಖಾಮುಖಿ..!

ಏಷ್ಯಾಕಪ್​ನ 2ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿಯುವ ಮೂಲಕ ಟೀಮ್ ಇಂಡಿಯಾ ಶುಭಾರಂಭ ಮಾಡಿದೆ. ದುಬೈ ಇಂಟರ್​ನ್ಯಾಷನಲ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಯನ್ನು 5 ವಿಕೆಟ್​ಗಳಿಂದ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಿದೆ. ಪಾಕಿಸ್ತಾನ ನೀಡಿದ 148 ರನ್‌ಗಳ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 2 ಎಸೆತಗಳು ಬಾಕಿಯಿರುವಂತೆ ಗೆದ್ದು ಬೀಗಿತು. ಈ ಗೆಲುವಿನೊಂದಿಗೆ ಗ್ರೂಪ್ ಎ ಪಾಯಿಂಟ್ ಟೇಬಲ್​ನಲ್ಲಿ ಭಾರತ ತಂಡ ಅಗ್ರಸ್ಥಾನಕ್ಕೇರಿದೆ.

ನ್ನು ಭಾರತ ತಂಡವು ಆಗಸ್ಟ್ 31 ರಂದು ಹಾಂಗ್ ಕಾಂಗ್ ವಿರುದ್ದ ಆಡಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಸೂಪರ್- 4 ಹಂತಕ್ಕೇರುವುದುನ್ನು ಖಚಿತ ಪಡಿಸಿಕೊಳ್ಳಲಿದೆ. ಮತ್ತೊಂದೆಡೆ ಪಾಕಿಸ್ತಾನ್ ಕೂಡ ಹಾಂಗ್ ಕಾಂಗ್ ವಿರುದ್ದ ಪಂದ್ಯವಾಡಲಿದ್ದು, ಈ ಪಂದ್ಯದಲ್ಲಿ ಪಾಕ್ ಕೂಡ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಭಾರತ ಹಾಗೂ ಪಾಕಿಸ್ತಾನ್ ಸೂಪರ್​- 4 ಹಂತದಲ್ಲಿ ಮತ್ತೆ ಮುಖಾಮುಖಿಯಾಗಲಿದೆ.

ಉಭಯ ತಂಡಗಳು ಸೂಪರ್-4 ಹಂತಕ್ಕೇರಿದರೆ ಸೆಪ್ಟೆಂಬರ್ 3 ರಂದು ನಡೆಯಲಿರುವ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಅಂದರೆ ಮುಂದಿನ ಶನಿವಾರ ಮತ್ತೊಮ್ಮೆ ಇಂಡೋ-ಪಾಕ್ ಕ್ರಿಕೆಟ್ ಕದನವನ್ನು ವೀಕ್ಷಿಸುವ ಅವಕಾಶ ಕ್ರಿಕೆಟ್ ಪ್ರೇಮಿಗಳಿಗೆ ದೊರೆಯಲಿದೆ.

ಒಂದು ವೇಳೆ ಹಾಂಗ್​ ಕಾಂಗ್ ತಂಡವು ಮುಂದಿನ 2 ಪಂದ್ಯಗಳಲ್ಲಿ ಒಂದನ್ನು ಗೆದ್ದರೂ, ಸೂಪರ್- 4 ಹಂತಕ್ಕೇರಲು 2 ತಂಡಗಳ ನೆಟ್​ ರನ್​ ರೇಟ್ ಪರಿಗಣನೆಗೆ ಬರಲಿದೆ. ಹೀಗಾಗಿ ಹಾಂಗ್ ಕಾಂಗ್ ವಿರುದ್ದ ಪಾಕಿಸ್ತಾನ್ ಸೋತರೆ ಟೂರ್ನಿಯಿಂದಲೇ ಹೊರಬೀಳಬಹುದು.

ಸದ್ಯ ಪಾಕಿಸ್ತಾನ್ ವಿರುದ್ದ ಟಿ20 ವಿಶ್ವಕಪ್ ಸೋಲಿನ ಸೇಡನ್ನು ತೀರಿಸಿಕೊಂಡಿರುವ ಟೀಮ್ ಇಂಡಿಯಾ ಈ ಬಾರಿ ಏಷ್ಯಾಕಪ್​ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ. ಆದರೆ ಸೂಪರ್- 4 ಹಂತದಲ್ಲಿ ಭಾರತ-ಪಾಕ್ ಮುಖಾಮುಖಿಯಾದರೆ ಮುಂದಿನ ಹಂತ ಕೂಡ ರೋಚಕತೆಯಿಂದ ಕೂಡಿರಲಿದೆ. ಇನ್ನು ಸೂಪರ್-4 ಹಂತದ ಪಾಯಿಂಟ್ ಟೇಬಲ್​ನಲ್ಲಿ ಭಾರತ-ಪಾಕಿಸ್ತಾನ್ ಮೊದಲೆರಡು ಸ್ಥಾನಗಳನ್ನು ಪಡೆದುಕೊಂಡರೆ ಫೈನಲ್​ನಲ್ಲೂ ಮುಖಾಮುಖಿಯಾಗಬಹುದು. ಅದರಂತೆ ಈ ಬಾರಿಯ ಏಷ್ಯಾಕಪ್​ನಲ್ಲಿ ಭಾರತ-ಪಾಕಿಸ್ತಾನ್ ಮೂರು ಪಂದ್ಯಗಳನ್ನು ಆಡಲಿದೆಯಾ ಕಾದು ನೋಡಬೇಕಿದೆ.

ಏಷ್ಯಾಕಪ್ ಮುಂದಿನ ಪಂದ್ಯಗಳ ವೇಳಾಪಟ್ಟಿ ಹೀಗಿದೆ:

  1. ಆಗಸ್ಟ್ 30  – ಬಾಂಗ್ಲಾದೇಶ vs ಅಫ್ಘಾನಿಸ್ತಾನ- ಶಾರ್ಜಾ
  2. ಆಗಸ್ಟ್ 31  – ಭಾರತ vs ಹಾಂಗ್​ ಕಾಂಗ್- ದುಬೈ
  3. ಸೆಪ್ಟೆಂಬರ್ 1 – ಶ್ರೀಲಂಕಾ vs ಬಾಂಗ್ಲಾದೇಶ- ದುಬೈ
  4. ಸೆಪ್ಟೆಂಬರ್ 2 – ಪಾಕಿಸ್ತಾನ vs ಹಾಂಗ್​ ಕಾಂಗ್- ಶಾರ್ಜಾ

ಗ್ರೂಪ್​ ಸುತ್ತಿನಿಂದ ನಾಲ್ಕು ತಂಡಗಳು ಸೂಪರ್-4 ಗೆ ಅರ್ಹತೆ ಪಡೆಯಲಿದೆ. ಇದಾದ ಬಳಿಕ ಸೆಪ್ಟಂಬರ್ 3 ರಿಂದ ಸೂಪರ್-4 ಪಂದ್ಯಗಳು ಶುರುವಾಗಲಿದೆ.

ಸೂಪರ್- 4 ವೇಳಾಪಟ್ಟಿ:

  1. ಸೆಪ್ಟೆಂಬರ್ 3 – B1 vs B2- ಶಾರ್ಜಾ
  2. ಸೆಪ್ಟೆಂಬರ್ 4 – A1 vs A2- ದುಬೈ
  3. ಸೆಪ್ಟೆಂಬರ್ 6 – A1 vs B1- ದುಬೈ
  4. ಸೆಪ್ಟೆಂಬರ್ 7 – A2 vs B2- ದುಬೈ
  5. ಸೆಪ್ಟೆಂಬರ್ 8 – A1 vs B2- ದುಬೈ
  6. ಸೆಪ್ಟೆಂಬರ್ 9 – B1 vs- A2- ದುಬೈ
  7. ಸೆಪ್ಟೆಂಬರ್ 11 – ಫೈನಲ್ ಪಂದ್ಯ- ದುಬೈ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ