ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇಂದ್ರದ ಭಾರತ್ ಬ್ರ್ಯಾಂಡ್​ನ ಅಕ್ಕಿ ಮಾರಾಟಕ್ಕೆ ಇಂದು ಚಾಲನೆ ; ಕೆಜಿ ಗೆ 29 ರೂ ಗೆ ಮಾರಟ..!

Twitter
Facebook
LinkedIn
WhatsApp
ಕೇಂದ್ರದ ಭಾರತ್ ಬ್ರ್ಯಾಂಡ್​ನ ಅಕ್ಕಿ ಮಾರಾಟಕ್ಕೆ ಇಂದು ಚಾಲನೆ ; ಕೆಜಿ ಗೆ 29 ರೂ ಗೆ ಮಾರಟ..!

ಲೋಕ ಸಭಾ ಚುನಾವಣೆ (Lok Sabha Election) ಸಮೀಪಿಸುತ್ತಿದ್ದು ರಾಜಕೀಯ ಪಕ್ಷಗಳು ನಾನಾ ರೀತಿಯ ತಂತ್ರಗಳನ್ನು ರೂಪಿಸುತ್ತಿವೆ. ಸದ್ಯ ಕೇಂದ್ರ ಸರ್ಕಾರ (Central Government) ಮಾರಾಟ ಮಾಡಲು ತೀರ್ಮಾನಿಸಿರುವ ಭಾರತ್ ಬ್ರ್ಯಾಂಡ್‌‌ (Bharath Brand) ಅಕ್ಕಿ ಇಂದಿನಿಂದ ಗ್ರಾಹಕರ ಕೈಗೆ ಸಿಗಲಿದೆ. ಇಂದು ಸಂಜೆ 4 ಗಂಟೆಗೆ ಬೆಂಗಳೂರಿನಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಾಹನಗಳಿಗೆ ಚಾಲನೆ ಸಿಗಲಿದೆ. ಈ ಮೂಲಕ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ ನೀಡಲಾಗುತ್ತಿದೆ. ಕೆಜಿ ಭಾರತ್ ಬ್ರ್ಯಾಂಡ್​ ಅಕ್ಕಿಗೆ 29 ರೂ.ದರ ನಿಗದಿ ಮಾಡಲಾಗಿದೆ.

ಅಕ್ಕಿ ದರ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ಈ ಯೋಜನೆಯನ್ನು ಘೋಷಿಸಿದೆ. ನಾಫೆಡ್​​-ಭಾರತ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟದಿಂದ ಇಂದು ನಾಫೆಡ್​​ನ 7 ಸಂಚಾರಿ ವಾಹನಗಳಲ್ಲಿ ಭಾರತ್​ ಅಕ್ಕಿ ಮಾರಾಟ ಮಾಡಲಾಗುತ್ತಿದೆ. ಭಾರತ್ ಅಕ್ಕಿ ಯೋಜನೆಯಡಿ ಕೆಜಿ ಭಾರತ್ ಅಕ್ಕಿ 29 ರೂ.ಗೆ ಲಭ್ಯವಾಗಲಿದೆ. 5 ಕೆಜಿ, 10 ಕೆಜಿ ಬ್ಯಾಗ್​ಗಳಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ಲಭ್ಯವಾಗಲಿದೆ. ಸಂಜೆ 4 ಗಂಟೆಯಿಂದ ಬೆಂಗಳೂರಿನಲ್ಲಿ ಭಾರತ್​ ಅಕ್ಕಿ ಮಾರಾಟ ಆರಂಭವಾಗುತ್ತೆ. ನಾಳೆ ಮಂಡ್ಯ, ಇನ್ನೊಂದು ವಾರದಲ್ಲಿ ಇತರೆ ಜಿಲ್ಲೆಗಳಲ್ಲೂ ಲಭ್ಯವಾಗಲಿದೆ.

ಆನ್​ಲೈನ್​ನಲ್ಲೂ ಭಾರತ್ ಬ್ರ್ಯಾಂಡ್ ಅಕ್ಕಿ ಖರೀದಿಗೆ ಅವಕಾಶ

ಇನ್ನು ರಿಲಯನ್ಸ್​​, ಫ್ಲಿಪ್​​ಕಾರ್ಟ್​, ಬಿಗ್​ ಬಾಸ್ಕೆಟ್​ ಅಷ್ಟೇ ಅಲ್ಲದೆ ಆನ್​ಲೈನ್​ನಲ್ಲೂ ಭಾರತ್ ಬ್ರ್ಯಾಂಡ್ ಅಕ್ಕಿ ಖರೀದಿ ಮಾಡಬಹುದು. ಇನ್ನೊಂದು ವಾರದಲ್ಲಿ ಇತರೆ ಸ್ಟೋರ್​ಗಳಲ್ಲೂ ಭಾರತ್ ಅಕ್ಕಿ ಲಭ್ಯವಾಗಲಿದೆ. ಎನ್‌ಸಿಸಿಎಫ್‌ನ ಮುಖ್ಯ ಗೋಡಾನ್ ಯಶವಂತಪುರದಲ್ಲಿದ್ದು ಬೆಂಗಳೂರಿನ 50 ಏರಿಯಾಗಳಿಗೆ ಮೊಬೈಲ್ ವ್ಯಾನ್ ಮೂಲಕ ಮನೆ ಮನೆಗೆ ಅಕ್ಕಿ ತಲುಪಿಸಲು ಸಿದ್ಧತೆ ನಡೆದಿದೆ.

ರಾಜ್ಯದಲ್ಲಿ ದಿನಸಿ, ಧಾನ್ಯ ಎಲ್ಲಾ ವಸ್ತುಗಳ ಬೆಲೆಗಳು ಗಗನಕ್ಕೇರಿದೆ. ಇದರಿಂದ ಜನ ಕಂಗೆಟ್ಟಿದ್ದಾರೆ. ಈ ದರ ಏರಿಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ನಾನಾ ಪ್ರಯತ್ನಗಳನ್ನು ನಡೆಸುತ್ತಿದ್ದು, ಸರ್ಕಾರ ಈಗಾಗಲೇ ಭಾರತ್ ಬ್ರ್ಯಾಂಡ್‌ ಅಡಿಯಲ್ಲಿ ಗೋಧಿ ಮತ್ತು ಬೇಳೆ ಕಾಳುಗಳನ್ನು ಮಾರಾಟ ಮಾಡುತ್ತಿದೆ. ಸದ್ಯ ಈಗ ಅಕ್ಕಿಯನ್ನೂ ಕೂಡ ಮಾರಾಟ ಮಾಡಲು ಮುಂದಾಗಿದೆ. ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳ (ನಾಫೆಡ್), ರಾಷ್ಟ್ರೀಯ ಸಹಕಾರ ಗ್ರಾಹಕರ ಮಹಾಮಂಡಳ (ಎನ್‌ಸಿಸಿಎಫ್‌) ಮತ್ತು ಕೇಂದ್ರೀಯ ಭಂಡಾರದ ಮಳಿಗೆಗಳಲ್ಲಿ ಮಾರಾಟಕ್ಕೆ ನಿರ್ಧರಿಸಲಾಗಿದ್ದು, ಇ–ಕಾರ್ಮಸ್‌ ವೇದಿಕೆಗಳಲ್ಲೂ ಅಕ್ಕಿ ದೊರೆಯಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ