ಭಾರತಕ್ಕೆ ಮೋಸ್ಟ್ ವಾಂಟೆಡ್ ಆಗಿದ್ದ ಖಲಿಸ್ತಾನಿ ಉಗ್ರ ಗುಂಡಿನ ದಾಳಿಗೆ ಬಲಿ
ಒಟ್ಟಾವಾ: ಕೆನಡಾದ ಸರ್ರೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತಕ್ಕೆ ಮೋಸ್ಟ್ ವಾಂಟೆಡ್ ಆಗಿದ್ದ ಖಲಿಸ್ತಾನಿ ಉಗ್ರ (Khalistani Terrorist) ಹರ್ದೀಪ್ ಸಿಂಗ್ ನಿಜ್ಜರ್ (Hardeep Singh Nijjar) ಬಲಿಯಾಗಿದ್ದಾನೆ.
ಇತ್ತೀಚೆಗೆ ಭಾರತ ಸರ್ಕಾರ (Government Of India) ಬಿಡುಗಡೆ ಮಾಡಿದ 40 ಉಗ್ರರ ಪಟ್ಟಿಯಲ್ಲಿ ಹರ್ದೀಪ್ ಸಿಂಗ್ ನಿಜ್ಜರ್ ಪ್ರಮುಖ ಉಗ್ರನಾಗಿದ್ದ.
2022 ರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಪಂಜಾಬ್‌ನ ಜಲಂಧರ್‌ನಲ್ಲಿ ಹಿಂದೂ ಅರ್ಚಕನನ್ನು ಕೊಲ್ಲಲು ಸಂಚು ರೂಪಿಸಿದ ಆರೋಪದ ಮೇಲೆ ಬಂಧಿಸಲು ಸಕಲ ಪ್ರಯತ್ನ ನಡೆದಿತ್ತು. ಆದ್ರೆ ಆರೋಪಿ ಎಸ್ಕೇಪ್ ಆಗಿದ್ದರಿಂದ ನಿಜ್ಜರ್ ಬಗ್ಗೆ ಸುಳಿವು ಕೊಟ್ಟವರಿಗೆ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಿತ್ತು.
ಈ ಹಿಂದೆ ಭಾರತದ ವಿರುದ್ಧ ಭಯೋತ್ಪಾದಕ ಕೃತ್ಯಗಳನ್ನ ಎಸಗಿದ್ದ ಪ್ರಕರಣದಲಿ ನಿಜ್ಜರ್ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್ ಕೂಡ ಸಲ್ಲಿಸಿತ್ತು. ಭಾರತದಿಂದ ಪರಾರಿಯಾಗಿದ್ದ ನಿಜ್ಜರ್ ಕೆನಡಾದಲ್ಲಿ ನೆಲೆಸಿದ್ದ, ಖಲಿಸ್ತಾನಿ ಟೈಗರ್ ಫೋರ್ಸ್ (ಕೆಟಿಎಫ್) ಮುಖ್ಯಸ್ಥನೂ ಆಗಿದ್ದ ಅನ್ನೋದು ತಿಳಿದುಬಂದಿದೆ.