ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಇಂದಿರಾ ಕ್ಯಾಂಟೀನ್ ಯೋಜನೆ ಮತ್ತೆ ಆರಂಭಿಸಲು ಸಿಎಂ ಸೂಚನೆ

Twitter
Facebook
LinkedIn
WhatsApp
73

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ, ಹಿಂದಿನ ಬಾರಿ ಅಧಿಕಾರದ ಅವಧಿಯಲ್ಲಿ ಆರಂಭಿಸಿದ್ದ ಕೆಲ ಪ್ರಮುಖ ಯೋಜನೆಗಳ ಮತ್ತೆ ಆರಂಭಿಸಲು ಮುಂದಾಗಿದೆ. ಇದೀಗ ಮಹತ್ವದ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಪುನರಾರಂಭ ಮಾಡುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಇಂದಿರಾ ಕ್ಯಾಂಟೀನ್‌ಗಳಿಗೆ ಜೀವ ತುಂಬಲು ಮುಂದಾಗಿದೆ. ಹೊಸದಾಗಿ ಟೆಂಡರ್ ಕರೆದು, ಬೆಂಗಳೂರಿನಲ್ಲಿ 250 ಇಂದಿರಾ ಕ್ಯಾಂಟೀನ್ ತೆರೆಯಲು ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನ ಬಹುತೇಕ ಕಡೆ ಇಂದಿರಾ ಕ್ಯಾಂಟೀನ್ ಮುಚ್ಚಿ ಹೋಗಿದೆ. ಈಗ ಮತ್ತೆ ತಮ್ಮ ಸರ್ಕಾರ ಬಂದ ಹಿನ್ನೆಲೆಯಲ್ಲಿ, ತಮ್ಮ ಹಿಂದಿನ ಆಡಳಿತದಲ್ಲಿ ಜಾರಿಗೊಳಿಸಿದ್ದ ಮಹತ್ವಾಕಾಂಕ್ಷೆಯ ಇಂದಿರಾ ಕ್ಯಾಂಟೀನ್ ಪುನಾರಾಂಭಿಸಲು ಸಿಎಂ‌ ನಿರ್ಧರಿಸಿದ್ದಾರೆ. ಈ ನಿಟ್ಟಿನಲ್ಲಿ ಬಿಬಿಎಂಪಿ ಅಧಿಕಾರಗಳೊಂದಿಗೆ ಗೃಹ ಕಚೇರಿ ಕೃಷ್ಣದಲ್ಲಿ ಮಹತ್ವದ ಸಭೆ ನಡೆಸಿ ನಿರ್ಧಾರ ಕೈಗೊಂಡಿದ್ದಾರೆ.

ಟೆಂಡರ್ ಪ್ರಕ್ರಿಯೆ ಪೂರ್ಣವಾದ ಬಳಿಕ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಮತ್ತೊಮ್ಮೆ ಜಾರಿಗೊಳಿಸುತ್ತೇವೆ. ಈವರೆಗೆ ಬಿಬಿಎಂಪಿಗೆ ಸರ್ಕಾರದಿಂದ ಶೇ. 50 ಹಾಗೂ ಬಿಬಿಎಂಪಿ ಯಿಂದ ಶೇ. 50 ಅನುದಾನ ಭರಿಸಲಾಗುತ್ತಿತ್ತು. ಇತರ ನಗರ ಸ್ಥಳೀಯ ಸಂಸ್ಥೆಗಳಿಗೆ ಶೇ. 70 ಅನುದಾನ ಸರ್ಕಾರದಿಂದ ಹಾಗೂ ನಗರ ಸ್ಥಳೀಯ ಸಂಸ್ಥೇಯಿಂದ ಶೇ. 30 ರಷ್ಟು ಭರಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಹಾಗೆಯೇ ಉಪಹಾರದ ದರದಲ್ಲಿ ಯಾವುದೇ ವ್ಯತ್ಯಾಸ ಇರುವುದಿಲ್ಲ. ಹಿಂದಿನ ಬೆಲೆಯೇ ಅನ್ವಯವಾಗಲಿದೆ. ಹೊಸದಾಗಿ ಎಲ್ಲಿಲ್ಲಿ ಇಂದಿರಾ ಕ್ಯಾಂಟೀನ್ ಅಗತ್ಯತೆ ಇದೆ ಎಂಬುದರ ಪಟ್ಟಿ ಕೊಡಲು ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದಿರಾ ಕ್ಯಾಂಟೀನ್‌ಗಳನ್ನು ಮೇಲ್ದರ್ಜೆಗೇರಿಸಲು ಹಾಗೂ ಹೊಸದಾಗಿ 50 ಕ್ಯಾಂಟೀನ್‌ಗಳನ್ನು ನಿರ್ಮಿಸಲು 30 ಕೋಟಿ ರೂ. ಅನುದಾನ ಕೋರಿ ಬಿಬಿಎಂಪಿಯು ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಪಾಲಿಕೆ ವ್ಯಾಪ್ತಿಯಲ್ಲಿ 173 ಸ್ಥಿರ ಮತ್ತು 23 ಮೊಬೈಲ್‌ ಕ್ಯಾಂಟೀನ್‌ಗಳಿದ್ದವು. ನಿರ್ವಹಣೆ ಮತ್ತು ಅನುದಾನದ ಕೊರತೆಯಿಂದ ಬಹುತೇಕ ಕ್ಯಾಂಟೀನ್‌ಗಳು ಸ್ಥಗಿತಗೊಂಡಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist