ಮೊಬೈಲ್ ಕೊಡಿಸುವಂತೆ ಅಜ್ಜನ ಬಳಿ ಹಠ; ವಿಷ ಸೇವಿಸಿ ಆತ್ಮಹತ್ಯೆಗೆ ಶರಣು!
ಚಿತ್ರದುರ್ಗ: ಅಜ್ಜ ಮೊಬೈಲ್ ಕೊಡಿಸದ ಹಿನ್ನೆಲೆಯಲ್ಲಿ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗದಲ್ಲಿ (Chitradurga) ನಡೆದಿದೆ. ಕೊಳಾಳ್ ಗ್ರಾಮದ ಯಶವಂತ್ (20) ಮೃತ ಯುವಕ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೊಳಾಳ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಅಕ್ಟೋಬರ್ 8ರಂದು ಮಹಾಗಣಪತಿ ಶೋಭಾಯಾತ್ರೆ ನಡೆದಿತ್ತು. ಹಿಂದೂ ಮಹಾಗಣಪತಿ ವಿಸರ್ಜನೆ ವೇಳೆ ಯಶವಂತ್ ಮೊಬೈಲ್ ಕಳೆದುಕೊಂಡಿದ್ದನು. ಹೀಗಾಗಿ ಹೊಸ ಮೊಬೈಲ್ ಕೊಡಿಸುವಂತೆ ಅಜ್ಜನ ಬಳಿ ಹಠ ಹಿಡಿದಿದ್ದನು. ಈ ವೇಳೆ ಅಜ್ಜ, ಈರುಳ್ಳಿ ಬೆಳೆ ಬಂದ ಬಳಿಕ ಮೊಬೈಲ್ ಕೊಡಿಸುವುದಾಗಿ ಹೇಳಿದ್ದರು.
ಅಕ್ಟೋಬರ್ 8ರಂದು ಮಹಾಗಣಪತಿ ಶೋಭಾಯಾತ್ರೆ ನಡೆದಿತ್ತು. ಹಿಂದೂ ಮಹಾಗಣಪತಿ ವಿಸರ್ಜನೆ ವೇಳೆ ಯಶವಂತ್ ಮೊಬೈಲ್ ಕಳೆದುಕೊಂಡಿದ್ದನು. ಹೀಗಾಗಿ ಹೊಸ ಮೊಬೈಲ್ ಕೊಡಿಸುವಂತೆ ಅಜ್ಜನ ಬಳಿ ಹಠ ಹಿಡಿದಿದ್ದನು. ಈ ವೇಳೆ ಅಜ್ಜ, ಈರುಳ್ಳಿ ಬೆಳೆ ಬಂದ ಬಳಿಕ ಮೊಬೈಲ್ ಕೊಡಿಸುವುದಾಗಿ ಹೇಳಿದ್ದರು.
ಗುರುವಾರ ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಸಾಗಿಸುವ ಮಾರ್ಗಮಧ್ಯೆ ಯುವಕ ಸಾವನ್ನಪ್ಪಿದ್ದಾನೆ. ಈ ಸಂಬಂಧ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಲ ತೀರಿಸಲಿಕ್ಕಾಗದೇ ಆತ್ಮಹತ್ಯೆ- ಬಿಜೆಪಿ ಕಾರ್ಯಕರ್ತನ ಪ್ರಕರಣಕ್ಕೆ ಸ್ಫೋಟಕ ತಿರುವು
ಕಲಬುರಗಿ: ಬಿಜೆಪಿ ಕಾರ್ಯಕರ್ತ (BJP Activist) ಶಿವಕುಮಾರ್ ಪೂಜಾರಿ (35) ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ.
ಆತ್ಮಹತ್ಯೆ ಕುರಿತಾಗಿ ಶಿವಕುಮಾರ್ ಪತ್ನಿ ಮಲ್ಲಮ್ಮ ಪೊಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.
ತನ್ನ ಪತಿ ಹನ್ನೆರಡು ಲಕ್ಷ ಸಾಲ ಮಾಡಿಕೊಂಡಿದ್ದ. ಸಾಲದ ಚಿಂತೆಯಲ್ಲಿ ಮದ್ಯ ಸೇವಿಸುತ್ತಿದ್ದ. ಮಳೆಯಾಗದೇ ಇದ್ದಿದ್ದರಿಂದ ಹೆಸರು ಬೆಳೆ ಹಾಳಾಗಿ ಹೋಗಿತ್ತು. ಸಾಲ ತೀರಿಸಲಿಕ್ಕಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪತಿಯ ಆತ್ಮಹತ್ಯೆ ಕೇಸ್ ನಲ್ಲಿ ಯಾರ ಮೇಲೆಯೂ ಅನುಮಾನ ಇಲ್ಲ ಎಂದು ಮಲ್ಲಮ್ಮ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೆಪೇಟ್ ಪೊಲೀಸ್ ಠಾಣೆಯಲ್ಲಿ ಕಳೆದ ರಾತ್ರಿ ಮಲ್ಲಮ್ಮ ದೂರು ದಾಖಲಿಸಿದ್ದಾರೆ. ಸದ್ಯ ದೂರು ಸ್ವೀಕರಿಸಿರುವ ಪೊಲೀಸರು ಯುಡಿಆರ್ (ಅಸಹಜ ಸಾವು) ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇತ್ತ ಸಾವಿಗೂ ಮುನ್ನ ಶಿವಕುಮಾರ್ ಆಡೀಯೋ ರೆಕಾರ್ಡ್ ಮಾಡಿದ್ದು, ಅದರಲ್ಲಿ ನನ್ನ ಸಾವಿಗೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮತ್ತು ಕಾಂಗ್ರೆಸ್ ನಾಯಕರೇ ಕಾರಣ ಅಂತ ಹೇಳಿರೋ ಆಡಿಯೋ ವೈರಲ್ ಆಗಿದ್ದವು. ಈ ಬೆನ್ನಲ್ಲೇ ಬಿಜೆಪಿ ನಾಯಕರು ಪ್ರಕರಣವನ್ನು ಸಿಐಡಿ ಗೆ ನೀಡಬೇಕು ಅಂತ ಆಗ್ರಹಿಸಿದ್ದರು.