ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Nandini Ghee: ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಕೆಗೆ ಸೂಚನೆ

Twitter
Facebook
LinkedIn
WhatsApp
Nandini Ghee

ಬೆಂಗಳೂರು, ಸೆಪ್ಟೆಂಬರ್​ 20: ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳು ಕೊಬ್ಬು ಬಳಕೆ ಮಾಡಲಾಗುತ್ತಿತ್ತು ಅಂತ ಚಂದ್ರಬಾಬು ನಾಯ್ಡು ನೀಡಿದ್ದ ಸ್ಫೋಟಕ ಹೇಳಿಕೆ ಸದ್ಯ ದೇಶ ವ್ಯಾಪಿ ಸುದ್ದಿಯಾಗಿದೆ. ಇದೇ ವಿಷಯ ಇದೀಗ ರಾಜಕೀಯ ವಾಗ್ಯುದ್ಧಕ್ಕೂ ವೇದಿಕೆ ಆಗಿದೆ. ಈ ಮಧ್ಯೆ ಇತ್ತ ಕರ್ನಾಟಕದ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ (Nandini Ghee) ಬಳಕೆ ಮಾಡಬೇಕು ಎಂದು ಆದೇಶ ಹೊರಡಿಸಲಾಗಿದೆ.

ಮುಜರಾಯಿ & ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸೂಚನೆಯ ಮೇರೆಗೆ ಸುತ್ತೋಲೆ ಹೊರಡಿಸಿರುವ ಧಾರ್ಮಿಕ ದತ್ತಿ ಇಲಾಖೆ, ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆ ಮತ್ತು ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ಸೂಚನೆ ನೀಡಲಾಗಿದೆ.

ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಅನ್ನೋದನ್ನು ಟಿಟಿಡಿ ಒಪ್ಪಿಕೊಂಡಿದೆ. ಲಡ್ಡುಗೆ ಬಳಸಲಾಗಿರುವ ಕಚ್ಚಾವಸ್ತುಗಳ ಲ್ಯಾಬ್ ವರದಿ ಬಯಲಾಗುತ್ತಿದ್ದಂತೆ ಸುದ್ದಿಗೋಷ್ಠಿ ನಡೆಸಿದ್ದ ಟಿಟಿಡಿ ಎಕ್ಸಿಕ್ಯೂಟಿವ್ ಅಧಿಕಾರಿ ಶ್ಯಾಮಲಾ ರಾವ್, ಲಡ್ಡು ತಯಾರಿಕೆಗೆ ಕಲಬೆರಕೆ ತುಪ್ಪ ಬಳಸಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ.

ಇನ್ನೊಂದೆಡೆ, ತಿರುಪತಿ (Tirupati) ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಿರುವ ಕುರಿತು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಾಡಿರುವ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಆಹಾರ ಸಚಿವ ಪ್ರಹ್ಲಾದ್ ಜೋಶಿ ಇಂದು ಕರೆ ನೀಡಿದ್ದಾರೆ. ಆಂಧ್ರದ ಮುಖ್ಯಮಂತ್ರಿ ಹೇಳಿರುವ ಸಂಗತಿ ಗಂಭೀರವಾದ ಕಳವಳಕಾರಿ ವಿಷಯ. ಈ ಬಗ್ಗೆ ವಿವರವಾದ ತನಿಖೆಯ ಅಗತ್ಯವಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಬುಧವಾರ ನಡೆದ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಿಂದಿನ ವೈಎಸ್ ಜಗನ್ಮೋಹನ್ ರೆಡ್ಡಿ ನೇತೃತ್ವದ ಸರ್ಕಾರವು ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನವನ್ನು ಸಹ ಬಿಡಲಿಲ್ಲ. ತಿರುಪತಿಯ ಲಡ್ಡುಗಳನ್ನು ತಯಾರಿಸಲು ಕಳಪೆ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಿತ್ತು ಎಂದು ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.

ಅದೇ ರೀತಿಯಾಗಿ ತಿರುಪತಿಯಲ್ಲಿ ತಯಾರಾಗುವ ಲಡ್ಡುವಿಗೆ ಬಳಸುವ ತುಪ್ಪದ ಮಾದರಿ ಪರೀಕ್ಷೆ ನಡೆಸಲಾಗಿದೆ. ಆ ತುಪ್ಪದಲ್ಲಿ ಮೀನಿನ ಎಣ್ಣೆ, ಪಾಮ್ ಆಯಿಲ್ ಪತ್ತೆಯಾಗಿದೆ. ಅಚ್ಚರಿ ಏನಂದ್ರೆ.. ದನದ ಮಾಂಸದಿಂದ ತೆಗೆದ ಕೊಬ್ಬು, ಹಂದಿ ಮಾಂಸದ ಪದರದಿಂದ ತೆಗೆದ ಬಿಳಿ ಕೊಬ್ಬು ತುಪ್ಪದಲ್ಲಿ ಇರುವುದು ಕೂಡ ಬೆಳಕಿಗೆ ಬಂದಿದೆ.

ಇನ್ನು ತಿರುಪತಿ ತಿಮ್ಮಪ್ಪನ ಲಡ್ಡು ತಯಾರಿಕೆಗೆ ಕರ್ನಾಟಕ ನಂದಿನಿ ತುಪ್ಪವೇ ಹೋಗುತ್ತಿದೆ. ಆದರೆ ಜಗನ್ ರೆಡ್ಡೆ ಸರ್ಕಾರದ ಅವಧಿಯಲ್ಲಿ 4 ವರ್ಷ ನಂದಿನಿ ತುಪ್ಪ ತಿರುಪತಿಗೆ ಸರಬರಾಜು ಆಗಿರಲಿಲ್ಲ. ಹೀಗಾಗಿ ಇದಕ್ಕೂ ನಮಗೂ ಸಂಬಂಧ ಇಲ್ಲ ಎಂದು ನಿನ್ನೆ ಕೆಎಂಎಫ್​ ಅಧ್ಯಕ್ಷ ಭೀಮಾನಾಯ್ಕ್​ ಹೇಳಿದ್ದಾರೆ.

ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ; 30 ಮಂದಿ ಬಂಧನ

ದಾವಣಗೆರೆ: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದಲ್ಲಿ ಇಬ್ಬರು ಕಾನ್‌ಸ್ಟೆಬಲ್‌ಗಳು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಮೂವತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮೆರವಣಿಗೆ ಸುಗಮವಾಗಿ ಸಾಗುತ್ತಿದ್ದು, ನಿನ್ನೆ ಸಂಜೆ ಚಾಮರಾಜಪೇಟೆ ವೃತ್ತದ ಬಳಿ ಸಾಗುತ್ತಿದ್ದಾಗ ಕಲ್ಲು ತೂರಾಟ ಆರಂಭವಾಯಿತು. ಕೆಲವರು ಘೋಷಣೆಗಳನ್ನು ಕೂಗಿದ್ದರಿಂದ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆಯಿತು. ಆಗ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ಇಬ್ಬರು ಪೇದೆಗಳಿಗೆ ಗಾಯಗಳಾಗಿವೆ.

ಕೂಡಲೇ ಪರಿಸ್ಥಿತಿ ನಿಯಂತ್ರಿಸಿ ಗಣೇಶ ಮೂರ್ತಿಯನ್ನು ಶಾಂತಿಯುತವಾಗಿ ವಿಸರ್ಜನೆಗೊಳಿಸಲಾಯಿತು. ಸೂಕ್ತ ಭದ್ರತಾ ಪಡೆಗಳನ್ನು ನಿಯೋಜಿಸಿ ಪರಿಸ್ಥಿತಿಯನ್ನು ಸಂಪೂರ್ಣವಾಗಿ ಹತೋಟಿಗೆ ತರಲಾಯಿತು ಎಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಐದು ಪ್ರಕರಣಗಳನ್ನು ದಾಖಲಿಸಲಾಗಿದ್ದು 30 ಜನರನ್ನು ಬಂಧಿಸಲಾಗಿದೆ ಎಂದು ಉಮಾ ಪ್ರಶಾಂತ್ ಹೇಳಿದರು.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – 6 ಮಂದಿಗೆ 20 ವರ್ಷ ಕಠಿಣ ಶಿಕ್ಷೆ

ಬೆಳಗಾವಿ: ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುತ್ತೇನೆ ಎಂದು ಪುಸಲಾಯಿಸಿ ಅತ್ಯಾಚಾರ ಎಸಗಿದ ಹಾಗೂ ಪ್ರಚೋದನೆ ನೀಡಿದ 6 ಮಂದಿ ದೋಷಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ ತಲಾ 10 ಸಾವಿರ ದಂಡ ವಿಧಿಸಿ ಜಿಲ್ಲಾ ಪೋಕ್ಸೊ (POCSO) ನ್ಯಾಯಾಲಯ ಗುರುವಾರ ಮಹತ್ವದ ತೀರ್ಪು ನೀಡಿದೆ.

ರಾಯಬಾಗ ತಾಲ್ಲೂಕಿನ ನಸಲಾಪುರದ ಸಚಿನ್ ಬಾಬಾಸಾಹೇಬ ರಾಯಮಾನೆ, ರೂಪಾ ಬಾಬಾಸಾಹೇಬ ಮಾನೆ, ರಾಕೇಸ್ ಬಾಬಾಸಾಹೇಬ ರಾಯಮಾನೆ, ಚಿಕ್ಕೋಡಿ ತಾಲ್ಲೂಕಿನ ಗಳತಗಾದ ರೋಹಿಣಿ ಶ್ರೀಮಂತ ದೀಕ್ಷಿತ್, ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮೀರಜ್ ತಾಲ್ಲೂಕಿನ ಕುಪ್ಪವಾಡದ ವಿನೋದ್ ಸುರೇಶ್ ರಾಯಮಾನೆ, ವಿಜಯ ತಾನಾಜಿ ಸಾಳುಂಕೆ ಶಿಕ್ಷೆಗೆ ಗುರಿಯಾದವರು. 

2015 ಜೂ.21ರಂದು ಆರೋಪಿ ಸಚಿನ್ ರಾಯಮಾನೆ ಬಾಲಕಿಯನ್ನು ಮದುವೆ ಆಗುತ್ತೇನೆ ಎಂದು ನಂಬಿಸಿ ಮಹಾರಾಷ್ಟ್ರದ (Maharashtra) ಕೊಲ್ಹಾಪುರ ಜಿಲ್ಲೆಯ ಗಗನಬಾವಡಾ ತಾಲ್ಲೂಕಿನ ನಿಗದಿವಾಡಿ ಗ್ರಾಮದ ಬಳಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದ. ಕೂಲಿ ಕೆಲಸಕ್ಕೆ ಬಂದಿದ್ದೇವೆ ಎಂದು ಹೇಳಿ ಅಲ್ಲಿ ಮನೆಯೊಂದರ ಶೆಡ್ ಪಡೆದುಕೊಂಡಿರುತ್ತಾರೆ. ಶೆಡ್‌ನಲ್ಲಿ ಬಾಲಕಿ ಮೇಲೆ ಆರೋಪಿ ಸಚಿನ್ ಅತ್ಯಾಚಾರ ಎಸಗಿದ್ದನು. ಇನ್ನುಳಿದವರು ಆತನಿಗೆ ಪ್ರಚೋದನೆ ನೀಡಿದ್ದರು.

ಅಪ್ರಾಪ್ತ ಬಾಲಕಿ ಶೆಡ್‌ನಿಂದ ಹೊರಗೆ ಬರದಂತೆ ಕೂಡಿಟ್ಟಿದ್ದರು. ಅಲ್ಲದೇ 3 ಲಕ್ಷ ಹಣ ಕೊಟ್ಟರೆ ಮಾತ್ರ ನಿಮ್ಮ ಮಗಳನ್ನು ಇಲ್ಲಿಂದ ವಾಪಸ್ ಕಳಿಸುವುದಾಗಿ ಬಾಲಕಿ ತಂದೆಗೆ ಬೆದರಿಕೆಯೊಡ್ಡಿದ್ದರು. ಈ ಸಂಬಂಧ ಬಾಲಕಿ ತಂದೆ ನೀಡಿದ ದೂರು ಆಧರಿಸಿ ತನಿಖೆ ಕೈಗೊಂಡಿದ್ದ ಚಿಕ್ಕೋಡಿಯ ತನಿಖಾಧಿಕಾರಿ ಎಂ.ಎಸ್.ನಾಯ್ಕ ಜಿಲ್ಲಾ ಪೋಕ್ಸೋ ನ್ಯಾಯಾಲಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಸುದೀರ್ಘವಾಗಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಅವರು, ಆರೋಪಿತರ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತೀರ್ಪು ಪ್ರಕಟಿಸಿದ್ದಾರೆ. ಅದೇ ರೀತಿ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಪರಿಹಾರಧನ ಪಡೆಯುವಂತೆ ಸಂತ್ರಸ್ತೆಯ ತಂದೆಗೆ ನ್ಯಾಯಾಲಯ ಆದೇಶಿಸಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ.ಪಾಟೀಲ ವಾದ ಮಂಡಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist