ಬುಧವಾರ, ಮೇ 8, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

IPL 2023: ಮುಂಬೈ ತಂಡಕ್ಕೆ 6 ವಿಕೆಟ್ ಗಳ ಗೆಲುವು; ಡೆಲ್ಲಿ ಕ್ಯಾಪಿಟಲ್ಸ್‌ಗೆ ಸತತ 4ನೇ ಸೋಲು

Twitter
Facebook
LinkedIn
WhatsApp
IPL 2023: ಮುಂಬೈ ತಂಡಕ್ಕೆ 6 ವಿಕೆಟ್ ಗಳ ಗೆಲುವು; ಡೆಲ್ಲಿ ಕ್ಯಾಪಿಟಲ್ಸ್‌ಗೆ ಸತತ 4ನೇ ಸೋಲು

ನವದೆಹಲಿ: ಐಪಿಎಲ್ ನ ಆವೃತ್ತಿಯ 16 ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್- ಮುಂಬೈ ನಡುವಿನ ಪಂದ್ಯದಲ್ಲಿ ಮುಂಬೈ ತಂಡ 6 ವಿಕೆಟ್ ಗಳ ಜಯ ಗಳಿಸಿದೆ.
ದೆಹಲಿಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಮುಂಬೈ ತಂಡ ಡೆಲ್ಲಿ ತಂಡವನ್ನು 19.4 ಓವರ್ ಗಳಲ್ಲಿ 172 ರನ್ ಗಳಿಗೆ ಕಟ್ಟಿ ಹಾಕಿತ್ತು. 

ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ (45 ಎಸೆತಗಳಲ್ಲಿ 65 ರನ್)  ಇಶಾನ್ ಕಿಶನ್ (26 ಎಸೆತಗಳಲ್ಲಿ 31 ರನ್) ಗಳಿಸಿ ತಂಡಕ್ಕೆ ಉತ್ತಮ ಆರಂಭ ನೀಡಿದರು. ಬಳಿಕ ತಿಲಕ್ ವರ್ಮ ಸಹ 29 ಎಸೆತಗಳಲ್ಲಿ 41 ರನ್ ಗಳಿಸಿ ತಂಡದ ಗೆಲುವಿನ ಹಾದಿಯನ್ನು ಸುಗಮಗೊಳಿಸಿದರು. ಆದರೆ ಸೂರ್ಯ ಕುಮಾರ್ ಯಾದವ್  ರನ್ ಗಳಿಸದೇ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು, ಕೊನೆಯಲ್ಲಿ ಟಿಮ್ ಡೇವಿಡ್ (11 ಎಸೆತಗಳಲ್ಲಿ 13 ರನ್) ಕ್ಯಾಮರೋನ್ ಗ್ರೀನ್ (8 ಎಸೆತಗಳಲ್ಲಿ 17 ರನ್) ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. 

ನೆನ್ನೆಯ ಆರ್ ಸಿಬಿ-ಎಲ್ ಎಸ್ ಜಿ ನಡುವಿನ ಪಂದ್ಯದಂತೆಯೇ ಈ ಪಂದ್ಯದಲ್ಲೂ ಗೆಲುವು ಕೊನೆಯ ಕ್ಷಣದವರೆಗೂ ಕುತೂಹಲಕಾರಿಯಾಗಿತ್ತು. ಡೆಲ್ಲಿ ತಂಡಕ್ಕೆ 18 ನೇ ಓವರ್ ನ ಕೊನೆಯ ಒಂದೇ ಎಸೆತದಲ್ಲಿ ಮುಸ್ತಾಫಿಜುರ್ ರೆಹಮಾನ್ 6 ರನ್ ನೀಡಿದ್ದು ಪಂದ್ಯದ ಗತಿಯನ್ನೇ ಬದಲಿಸಿತು ಹಾಗೂ 19. 5 ನೇ ಎಸೆತದಲ್ಲಿ ಒಂದು ರನ್ ಔಟ್ ವಿಫಲವಾಗಿದ್ದೂ ಸಹ ಡೆಲ್ಲಿ ತಂಡದ ಸೋಲಿಗೆ ಕಾರಣವಾಯಿತು. ಪರಿಣಾಮ ಮುಂಬೈ ತಂಡ 4 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿ ಗೆಲುವು ಸಾಧಿಸಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ