ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

IPL 2023 : ವಿರಾಟ್ ಕೊಹ್ಲಿ ಮತ್ತು ಡುಪ್ಲೆಸಿಸ್ ಆರ್ಭಟಕ್ಕೆ ಆರ್ ಸಿಬಿ ಗೆ 8 ವಿಕೆಟ್ ಗಳ ಭರ್ಜರಿ ಜಯ

Twitter
Facebook
LinkedIn
WhatsApp
8vv50p9 virat kohli bcci 625x300 02 April 23

ಬೆಂಗಳೂರು: ಫಾಫ್‌ ಡು ಪ್ಲೆಸಿಸ್‌ (Faf du Plessis), ವಿರಾಟ್‌ ಕೊಹ್ಲಿ (Virat Kohli) ಬೆಂಕಿ ಬ್ಯಾಟಿಂಗ್‌ ಹಾಗೂ ಶಿಸ್ತು ಬದ್ಧ ಬೌಲಿಂಗ್‌ ದಾಳಿ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡವು, ಮುಂಬೈ ಇಂಡಿಯನ್ಸ್‌ (Mumbai Indians) ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

ಆರಂಭಿಕರಾಗಿ ಕಣಕ್ಕಿಳಿದ ಆರ್‌ಸಿಬಿ ತಂಡದ ನಾಯಕ ಫಾಫ್‌ ಡು ಪ್ಲೆಸಿಸ್‌ ಮತ್ತು ವಿರಾಟ್‌ ಕೊಹ್ಲಿ ಭರ್ಜರಿ ಬ್ಯಾಟಿಂಗ್‌ ನಡೆಸಿದರು. ಸಿಕ್ಸರ್‌, ಬೌಂಡರಿ ಸಿಡಿಸುತ್ತಾ ಅಭಿಮಾನಿಗಳಿಗೆ ರಸದೌತಣ ನೀಡಿದರು. ಇದಕ್ಕೆ ಪ್ರತಿಯಾಗಿ ಅಭಿಮಾನಿಗಳೂ ʻಕೊಹ್ಲಿ, ಕೊಹ್ಲಿʼ, ʻಆರ್‌ಸಿಬಿ, ಆರ್‌ಸಿಬಿʼ ಎಂದು ಕೂಗುತ್ತಾ ಆಟಗಾರರನ್ನು ಹುರಿದುಂಬಿಸಿದರು. ಪ್ರತಿ ಬೌಂಡರಿ, ಸಿಕ್ಸರ್‌ಗಳನ್ನು ಅದ್ಭುತವಾಗಿ ಎಂಜಾಯ್‌ ಮಾಡಿದರು.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (M Chinnaswamy Stadium) ಆರ್‌ಸಿಬಿ ವಿರುದ್ಧ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 171 ರನ್‌ ಗಳಿಸಿತ್ತು. 172 ರನ್‌ಗಳ ಗುರಿ ಬೆನ್ನತ್ತಿದ್ದ ಆರ್‌ಸಿಬಿ 16.2 ಓವರ್‌ಗಳಲ್ಲೇ 2 ವಿಕೆಟ್‌ ನಷ್ಟಕ್ಕೆ 172 ರನ್‌ ಗಳಿಸಿ ಭರ್ಜರಿ ಜಯ ಸಾಧಿಸಿತು.

MI vs RCB 1

ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶನ ನೀಡಿದ ವಿರಾಟ್‌ ಕೊಹ್ಲಿ ಹಾಗೂ ಪ್ಲೆಸಿಸ್‌  ಮೊದಲ ವಿಕೆಟ್‌ ಪತನಕ್ಕೆ 14.5 ಓವರ್‌ಗಳಲ್ಲಿ 148 ರನ್‌ಗಳ ಜೊತೆಯಾಟವಾಡಿದರು. ಈ ವೇಳೆ ನಾಯಕ ಪ್ಲೆಸಿಸ್‌ ಸಿಕ್ಸರ್‌ ಸಿಡಿಸುವ ಬರದಲ್ಲಿ ಬೌಂಡರಿ ಲೈನ್‌ ಕ್ಯಾಚ್‌ ನೀಡಿ ಔಟಾದರು. 43 ಎಸೆತಗಳನ್ನು ಎದುರಿಸಿದ ಪ್ಲೆಸಿಸ್‌ 6 ಸಿಕ್ಸರ್‌, 5 ಬೌಂಡರಿಯೊಂದಿಗೆ 73 ರನ್‌ ಗಳಿಸಿದರು. ನಂತರ ಬಂದ ದಿನೇಶ್‌ ಕಾರ್ತಿಕ್‌ ಮೂರೇ ಎಸೆತಗಳಲ್ಲಿ ರನ್‌ ಗಳಿಸದೇ ಕ್ಯಾಚ್‌ ನೀಡಿ ಪೆವಿಲಿಯನ್‌ಗೆ ಮರಳಿದರು. 3ನೇ ವಿಕೆಟ್‌ನಲ್ಲಿ ಜೊತೆಯಾದ ಮ್ಯಾಕ್ಸ್‌ವೆಲ್‌ ಭರ್ಜರಿ ಸಿಕ್ಸರ್‌, ಬೌಂಡರಿ ಸಿಡಿಸಿ ಗೆಲುವಿನ ಹಾದಿಗೆ ತಲುಪಿಸಿದರು. ಗ್ಲೇನ್‌ ಮ್ಯಾಕ್ಸ್‌ವೆಲ್‌ (Glenn Maxwell) 3 ಎಸೆತಗಳಲ್ಲಿ 2 ಸಿಕ್ಸರ್‌ ಸಿಡಿಸಿ, 12 ರನ್‌ ಗಳಿಸಿದರೆ, ಕೊನೆಯವರೆಗೂ ಹೋರಾಡಿದ ವಿರಾಟ್ ಕೊಹ್ಲಿ 49 ಎಸೆತಗಳಲ್ಲಿ ಅಜೇಯ 89 ರನ್‌ (6 ಬೌಂಡರಿ, 5 ಸಿಕ್ಸರ್‌) ಗಳಿಸಿ ಅಜೇಯರಾಗುಳಿದರು.ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ಇಂಡಿಯನ್ಸ್‌ ತಂಡದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮ್ಯಾನ್‌ಗಳು ಆರ್‌ಸಿಬಿ ಬೌಲಿಂಗ್ ದಾಳಿಗೆ ತತ್ತರಿಸಿದರು. ಆದರೆ ಮಧ್ಯಮ ಕ್ರಮಾಂಕದ ಆಟಗಾರ ತಿಲಕ್ ವರ್ಮಾ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದಿಂದ ಆರ್‌ಸಿಬಿ ತಂಡದ ಲೆಕ್ಕಾಚಾರ ಬುಡಮೇಲಾಗಿತ್ತು.

ಆರ್‌ಸಿಬಿ ತಂಡದ ಬೌಲರ್‌ಗಳು ಈ ಪಂದ್ಯದ ಆರಂಭದಲ್ಲಿಯೇ ಅದ್ಭುತ ಯಶಸ್ಸು ಗಳಿಸಲು ಆರಂಭಿಸಿದರು. ಇದರ ಪರಿಣಾಮವಾಗಿ ಅಗ್ರ ಕ್ರಮಾಂಕದ ಆಟಗಾರರಾದ ಇಶಾನ್ ಕಿಶನ್, ಕ್ಯಾಮರೂನ್ ಗ್ರೀನ್, ನಾಯಕ ರೋಹಿತ್ ಶರ್ಮಾ ಹಾಗೂ ಸೂರ್ಯ ಕುಮಾರ್ ಯಾದವ್ ಅಲ್ಪ ಮೊತ್ತಕ್ಕೆ ವಿಕೆಟ್ ಕಳೆದುಕೊಂಡರು.

ಈ ಸಂದರ್ಭದಲ್ಲಿ ಮುಂಬೈ ಇಂಡಿಯನ್ಸ್, ಆರ್‌ಸಿಬಿಗೆ ಸುಲಭ ತುತ್ತಾಗಲಿದೆ ಎಂದು ಭಾವಿಸಲಾಗಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ತಿಲಕ್ ವರ್ಮಾ ಹಾಗೂ ನೇಹಲ್ ವಧೇರಾ 6ನೇ ವಿಕೆಟ್‌ಗೆ ಅರ್ಧ ಶತಕದ ಜೊತೆಯಾಟವಾಡಿ ತಂಡಕ್ಕೆ ಚೇತರಿಕೆ ನೀಡಿದರು. 13 ಎಸೆತಗಳಲ್ಲಿ 21 ರನ್‌ಗಳಿಸಿದ ವಧೇರಾ ವಿಕೆಟ್ ಕಳೆದುಕೊಂಡಾಗ ಮುಂಬೈ ಇಂಡಿಯನ್ಸ್ ತಂಡ 98 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡಿತ್ತು. ಮತ್ತೊಂದು ತುದಿಯಲ್ಲಿ ಇನ್ನೆರಡು ವಿಕೆಟ್‌ಗಳು ಉರುಳಿದರೂ ಕೂಡ ತಿಲಕ್ ವರ್ಮಾ ತಮ್ಮ ಬ್ಯಾಟಿಂಗ್‌ ಅಬ್ಬರ ಮುಂದುವರಿಸಿದರು.

ಕೊನೆಯಲ್ಲಿ ಅರ್ಶದ್ ಖಾನ್ ಅವರೊಂದಿಗೆ ಜೊತೆಯಾದ ತಿಲಕ್ ತಂಡದ ಮೊತ್ತವನ್ನು 170ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಈ ಇನ್ನಿಂಗ್ಸ್‌ನಲ್ಲಿ ತಿಲಕ್ ವರ್ಮಾ 46 ಎಸೆತಗಳಲ್ಲಿ ಸ್ಪೋಟಕ 84 ರನ್‌ (9 ಬೌಂಡರಿ, 4 ಸಿಕ್ಸರ್‌) ಗಳಿಸಿ ಅಜೇಯರಾಗುಳಿದರು.

ಆರ್‌ಸಿಬಿ ಪರ ಕರ್ಣ್ ಶರ್ಮಾ 2 ವಿಕೆಟ್‌ ಕಿತ್ತರೆ, ಮೊಹಮ್ಮದ್‌ ಸಿರಾಜ್‌, ರೀಸ್ ಟೋಪ್ಲಿ, ಆಕಾಶ್‌ ದೀಪ್‌, ಹರ್ಷಲ್‌ ಪಟೇಲ್‌ ಹಾಗೂ ಮೈಕೆಲ್‌ ಬ್ರೇಸ್‌ವೆಲ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು. .

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ