ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

IPL 2023: ಶಾರ್ದೂಲ್‌ ಬೆಂಕಿ ಬ್ಯಾಟಿಂಗ್‌; ಕೋಲ್ಕತ್ತಾ ವಿರುದ್ಧ 81 ರನ್‌ಗಳಿಂದ ಸೋತ RCB

Twitter
Facebook
LinkedIn
WhatsApp
Shardul Thakur

IPL 20203: ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ – ಬೌಲಿಂಗ್​ನಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿದ ಆರ್​ಸಿಬಿ 200+ ರನ್ ಬಿಟ್ಟುಕೊಟ್ಟಿತು. ಅಲ್ಲದೆ 123 ರನ್​ಗೆ ಆಲೌಟ್ ಆಯಿತು. ಕೆಕೆಆರ್ 81 ರನ್​ಗಳ ಅಮೋಘ ಜಯ ಸಾಧಿಸಿತು.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿ ಮೆರೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇದೀಗ ತಾನಾಡಿದ ದ್ವಿತೀಯ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ.

ಇದರೊಂದಿಗೆ ಕೋಲ್ಕತ್ತಾ ತಂಡ ಟೂರ್ನಿಯಲ್ಲಿ ಚೊಚ್ಚಲ ಗೆಲುವು ಸಾಧಿಸಿದೆ. ಮೊದಲು ಟಾಸ್ ಸೋತು ಬ್ಯಾಟಿಂಗ್ ಇಳಿದ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ ರಹಮಾನುಲ್ಹಾ ಗುರ್ಬಾಜ್ ಉತ್ತಮ ಆರಂಭ ನೀಡಿದರೆ, ಮತ್ತೊಂದೆಡೆ ವಿಕೆಟ್ ಪತನ ಆರಂಭಗೊಂಡಿತು. ವೆಂಕಟೇಶ್ ಅಯ್ಯರ್ ಕೇವಲ 3 ರನ್ ಸಿಡಿಸಿ ಔಟಾದರು. ಇತ್ತ ಮನ್ದೀಪ್ ಸಿಂಗ್ ಡಕೌಟ್ ಆದರು ಇದರಿಂದ ಕೆಕೆಆರ್‌ 26 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡಿತ್ತು. ನಾಯಕ ನಿತೀಶ್ ರಾಣಾ ಕೇವಲ 1 ರನ್ ಸಿಡಿಸಿ ಔಟಾದರು. ಬಳಿಕ ರಿಂಕು ಸಿಂಗ್ ಜೊತೆ ಬ್ಯಾಟಿಂಗ್ ಮುಂದುವರಿಸಿದ ಗುರ್ಬಾಜ್ ಅರ್ಧ ಶತಕ ಸಿಡಿಸಿ ಮಿಂಚಿದರು.

ಗುರ್ಬಾಜ್ 44 ರನ್‌ಗೆ 57 ರನ್ ಸಿಡಿಸಿ ಔಟಾದರು. ಇದರ ಬೆನ್ನಲ್ಲೇ ಆ್ಯಂಡ್ರೆ ರೆಸೆಲ್ ವಿಕೆಟ್ ಪತನಗೊಂಡಿತು. ರಸೆಲ್ ವಿಕೆಟ್ ಪತನದ ನಂತರ ಕೆಕೆಆರ್ ತಂಡಕ್ಕೆ ತೀವ್ರ ಆಘಾತ ನೀಡಿತು. ಕೊನೆಯಲ್ಲಿ ರಿಂಕು ಸಿಂಗ್ ಹಾಗೂ ಶಾರ್ದೂಲ್ ಠಾಕೂರ್ ಜೊತೆಯಾಟ ಕೆಕೆಆರ್ ತಂಡಕ್ಕೆ ಹೊಸ ಚೈತನ್ಯ ನೀಡಿತು. ಆರ್‌ಸಿಬಿ ಬೌಲರ್‌ಗಳನ್ನು ಬೆಂಡೆತ್ತಿದ್ದ ಶಾರ್ದೂಲ್‌ ಠಾಕೂರ್‌ ಕೇವಲ 20 ಎಸೆತಗಳಲ್ಲಿ 50 ರನ್‌ ಚಚ್ಚಿ ಮಿಂಚಿದರು. 29 ಎಸೆತಗಳಲ್ಲಿ ಬರೋಬ್ಬರಿ 68 ರನ್‌ (9 ಬೌಂಡರಿ, 3 ಸಿಕ್ಸರ್‌) ಸಿಡಿಸಿದ್ದರು.

ಇದರಿಂದ ಅಲ್ಪ ಮೊತ್ತಕ್ಕೆ ಕಟ್ಟಿಹಾಕುವ ಲೆಕ್ಕಾಚಾರದಲ್ಲಿದ್ದ ಆರ್‌ಸಿಬಿ ಪಂದ್ಯದ ಮೇಲೆ ನಿಯಂತ್ರಣ ಕಳೆದುಕೊಂಡಿತು. ಇದರ ನಡುವೆ ರಿಂಕು ಸಿಂಗ್ 33 ಎಸೆತದಲ್ಲಿ 46 ರನ್ (2 ಬೌಂಡರಿ, 3 ಸಿಕ್ಸರ್‌) ಸಿಡಿಸಿ ನಿರ್ಗಮಿಸಿದರು. 45 ಎಸೆತಗಳಲ್ಲಿ 6ನೇ ವಿಕೆಟ್‌ಗೆ ಈ ಜೋಡಿ 102 ರನ್‌ ಚಚ್ಚಿದ ಪರಿಣಾಮ ಕೋಲ್ಕತ್ತಾ ದೊಡ್ಡ ಮೊತ್ತ ಕಲೆ ಹಾಕಿತು. ಅಂತಿಮವಾಗಿ ಕೆಕೆಆರ್ 7 ವಿಕೆಟ್ ನಷ್ಟಕ್ಕೆ 204 ರನ್ ಸಿಡಿಸಿತು.

ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಆರ್‌ಸಿಬಿ ಕಳಪೆ ಬ್ಯಾಟಿಂಗ್‌ನಿಂದ 17.4 ಓವರ್‌ಗಳಲ್ಲೇ 123 ರನ್‌ಗಳಿಗೆ ಸರ್ವಪತನ ಕಂಡಿತು. ಆರಂಭಿಕರಾಗಿ ಕಣಕ್ಕಿಳಿದ ನಾಯಕ ಫಾಫ್‌ ಡುಪ್ಲೆಸಿಸ್‌ (Faf du Plessis) ಹಾಗೂ ವಿರಾಟ್‌ ಕೊಹ್ಲಿ (Virat Kohli) ಉತ್ತಮ ಆರಂಭ ನೀಡಿದ್ದರು. 4.5 ಓವರ್‌ಗಳಲ್ಲಿ ಈ ಜೋಡಿ 44 ರನ್‌ ಕಲೆಹಾಕಿತ್ತು. ಅಷ್ಟರಲ್ಲೇ ವಿರಾಟ್‌ ಕೊಹ್ಲಿ 21 ರನ್‌ (18 ಎಸೆತ, 3 ಬೌಂಡರಿ) ಗಳಿಸಿ ಔಟಾದರು. ಈ ಬೆನ್ನಲ್ಲೇ 23 (12 ಎಸೆತ, 2 ಸಿಕ್ಸರ್‌, 2 ಬೌಂಡರಿ) ರನ್‌ ಗಳಿಸಿದ್ದ ಸಹ ವಿಕೆಟ್‌ ಒಪ್ಪಿಸಿದರು.

ವಿರಾಟ್‌, ಡುಪ್ಲೆಸಿಸ್‌ ಜೋಡಿ ವಿಕೆಟ್‌ ಬೀಳುತ್ತಿದ್ದಂತೆ ಕೆಕೆಆರ್‌ ಬೌಲರ್‌ಗಳ ಅಬ್ಬರಕ್ಕೆ ನಲುಗಿದ ಆರ್‌ಸಿಬಿ ತಂಡ ಒಂದೊಂದೆ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಾ ಸಾಗಿತು. ಪರಿಣಾಮ ತಂಡ ಹೀನಾಯ ಸೋಲಿನತ್ತ ಮುಖ ಮಾಡಿತು. ಅಂತಿಮವಾಗಿ ಆರ್‌ಸಿಬಿ 17.4 ಓವರ್‌ಗಳಲ್ಲಿ 123 ರನ್‌ ಗಳಿಸಲಷ್ಟೇ ಸಾಧ್ಯವಾಗಿ ಸೋಲೊಪ್ಪಿಕೊಂಡರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist