ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಐಪಿಎಲ್ 2024: ಉದ್ಘಾಟನಾ ಪಂದ್ಯದಲ್ಲೇ ಸೋಲು ಕಂಡ ಆರ್ಸಿಬಿ; ಮುಂದಿನ ಪಂದ್ಯ ಯಾರ ಜೊತೆ.?

Twitter
Facebook
LinkedIn
WhatsApp
ಐಪಿಎಲ್ 2024: ಉದ್ಘಾಟನಾ ಪಂದ್ಯದಲ್ಲೇ ಸೋಲು ಕಂಡ ಆರ್ಸಿಬಿ; ಮುಂದಿನ ಪಂದ್ಯ ಯಾರ ಜೊತೆ.?

ಬೆಂಗಳೂರು ಮುಂದಿನ ಮ್ಯಾಚ್ ಯಾವಾಗ?, ಯಾರ ವಿರುದ್ಧ?, ಎಲ್ಲಿ?, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಆರ್ ಸಿಬಿ ವಿರುದ್ಧ ಚೆನ್ನೈ ತಂಡಕ್ಕೆ 6 ವಿಕೆಟ್ ಗಳ ಜಯ

ಚೆನ್ನೈ ನಲ್ಲಿ ನಡೆದ ಐಪಿಎಲ್ 2024 ರ ಮೊದಲ ಪಂದ್ಯದಲ್ಲಿ ಆರ್ ಸಿಬಿ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಸೋಲು ಕಂಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಆರ್ ಸಿಬಿ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಗಳ ನಷ್ಟಕ್ಕೆ 173 ರನ್ ಗಳಿಸಿತು.

ಆರ್ ಸಿಬಿ ಪರ ಆರಂಭಿಕ ಆಟಗಾರ ವಿರಾಟ್ ಕೊಹ್ಲಿ 20 ಎಸೆತಗಳಲ್ಲಿ 21 ರನ್ ಗಳಿಸಿದರೆ, ಫಾಫ್ ಡು ಪ್ಲೆಸಿಸ್ 23 ಎಸೆತಗಳಲ್ಲಿ 35 ರನ್ ಗಳನ್ನು ಗಳಿಸಿ ತಂಡಕ್ಕೆ ನೆರವಾದರು. ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರೂನ್ ಗ್ರೀನ್ ಸೇರಿದಂತೆ ಮಧ್ಯಮಕ್ರಮಾಂಕದ ಬ್ಯಾಟ್ಸ್ ಮನ್ ಗಳ ವೈಫಲ್ಯ ತಂಡಕ್ಕೆ ದುಬಾರಿಯಾಗಿ ಪರಿಣಮಿಸಿತು.

ಅನುಜ್ ರಾವತ್ 25 ಎಸೆತಗಳಲ್ಲಿ 48 ರನ್ ಗಳಿಸಿ ತಂಡ 173 ರನ್ ಗಳಿಸಲು ನೆರವಾದರು. ದಿನೇಶ್ ಕಾರ್ತಿನ್ ಔಟ್ ಆಗದೇ 26 ಎಸೆತಗಳಲ್ಲಿ 38 ರನ್ ಗಳಿಸಿದರು. 174 ರನ್ ಗಳ ಗುರಿ ಬೆನ್ನಟ್ಟಿದ ಸಿಎಸ್ ಕೆ ತಂಡದ ಮೇಲೆ ಆರ್ ಸಿಬಿ ಬೌಲರ್ ಗಳು ಆರಂಭದಲ್ಲಿ ನಿಯಂತ್ರಣ ಸಾಧಿಸಿದರು. ಆರಂಭಿಕ ಆಟಗಾರರಾದ ಋತುರಾಜ್ ಗಾಯಕ್ವಾಡ್ 15 ಎಸೆತಗಳಲ್ಲಿ 15 ರನ್ ರಚಿನ್ ರವೀಂದ್ರ 15 ಎಸೆತಗಳಲ್ಲಿ 37 ರನ್ ಗಳಿಸಿದರೆ, ಅಜಿಂಕ್ಯಾ ರೆಹಾನೆ 19 ಎಸೆತಗಳಲ್ಲಿ 27 ರನ್ ಡೇರಿಲ್ ಮಿಚೆಲ್ 18 ಎಸೆತಗಳಲ್ಲಿ 22 ರನ್ ಗಳಿಸಿದರು. ಶಿವಂ ದುಬೆ 28 ಎಸೆತಗಳಲ್ಲಿ 34 ರನ್ ಗಳಿಸಿದರೆ, ರವೀಂದ್ರ ಜಡೇಜಾ 17 ಎಸೆತಗಳಲ್ಲಿ 25 ರನ್ ಗಳಿಸಿ ತಂಡ ಗೆಲ್ಲುವುದಕ್ಕೆ ನೆರವಾದರು

17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು  ತಂಡ ಸೋಲಿನೊಂದಿಗೆ ಆರಂಭಿಸಿದೆ. ಶುಕ್ರವಾರ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK vs RCB) 6 ವಿಕೆಟ್​ಗಳ ಜಯ ಕಂಡಿತು. ಬ್ಯಾಟಿಂಗ್​ನಲ್ಲಿ ಉತ್ತಮ ಪ್ರದರ್ಶನ ತೋರಿದರೂ ಆರ್​ಸಿಬಿ ಬೌಲಿಂಗ್ ಸೋಲಿಗೆ ಪ್ರಮುಖ ಕಾರಣವಾಯಿತು. ಈ ಮೂಲಕ ಮೊದಲ ಪಂದ್ಯದಲ್ಲಿ ಸೋತು ತನ್ನ ಕೆಟ್ಟ ದಾಖಲೆಯನ್ನು ಮುಂದುವರೆಸಿದೆ. ಇದೀಗ ಎರಡನೇ ಪಂದ್ಯದ ಮೇಲೆ ಆರ್​ಸಿಬಿ ಕಣ್ಣಿಟ್ಟಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಂದಿನ ಪಂದ್ಯ ಯಾರ ವಿರುದ್ಧ? 

ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮುಂದಿನ ಪಂದ್ಯವನ್ನು ಪಂಜಾಬ್ ಕಿಂಗ್ಸ್ ವಿರುದ್ಧ ಆಡಲಿದೆ. ಬೆಂಗಳೂರು ಮತ್ತು ಪಂಜಾಬ್ ನಡುವಿನ 2024 ರ ಐಪಿಎಲ್ ಪಂದ್ಯ ಮಾರ್ಚ್ 25 ಸೋಮವಾರದಂದು ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು-ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಆರ್ಸಿಬಿ-ಪಂಜಾಬ್ ನಡುವಿನ ಐಪಿಎಲ್ ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು-ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರವಾಗಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು-ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರವಾಗಲಿದೆ.

ಉಭಯ ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯ್ಯಾಶ್ ಪ್ರಭುದೇಸಾಯಿ, ವಿಲ್ ಜಾಕ್ವೆಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವಿಜಯಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೂನ್ ಗ್ರೀನ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾನ್.

ಪಂಜಾಬ್ ಕಿಂಗ್ಸ್: ಶಿಖರ್ ಧವನ್ (ನಾಯಕಸಿ), ಪ್ರಭಾಸಿಮ್ರಾನ್ ಸಿಂಗ್, ಜಾನಿ ಬೈರ್‌ಸ್ಟೋವ್, ಸಿಖಂದರ್ ರಾಜಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸ್ಯಾಮ್ ಕರ್ರಾನ್, ಹರ್ಷಲ್ ಪಟೇಲ್, ರಾಹುಲ್ ಚಾಹರ್, ಅರ್ಷ್‌ದೀಪ್ ಸಿಂಗ್, ಕಗಿಸೊ ರಬಾಡ, ಹರ್‌ಪ್ರೀತ್ ಬ್ರಾರ್, ನಾಥನ್ ಎಲ್ಲಿಸ್, ಶಿವಂ ಸಿಂಗ್, ಕ್ರಿಸ್ ವೋಕ್ಸ್, ಲಿಯಾಮ್ ಲಿವಿಂಗ್‌ಸ್ಟೋನ್, ರಿಲೀ ರೋಸೌವ್, ಹರ್‌ಪ್ರೀತ್ ಸಿಂಗ್ ಭಾಟಿಯಾ, ರಿಷಿ ಧವನ್, ಶಶಾಂಕ್ ಸಿಂಗ್, ತನಯ್ ತ್ಯಾಗರಾಜನ್, ಅಶುತೋಷ್ ಶರ್ಮಾ, ಅಥರ್ವ ಟೈಡೆ, ವಿಧ್ವತ್ ಕಾವೇರಪ್ಪ, ಪ್ರಿನ್ಸ್ ಚೌಧರಿ, ವಿಶ್ವನಾಥ್ ಸಿಂಗ್.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist