ಸೋಮವಾರ, ಮೇ 20, 2024
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

IPL 2024 : ಈ ಬಾರಿಯ ಐಪಿಎಲ್ ನಲ್ಲಿ ಆರ್​ಸಿಬಿ ತಂಡದ ಹೆಸರು ಬದಲಾವಣೆ ಸಾಧ್ಯತೆ..!

Twitter
Facebook
LinkedIn
WhatsApp
Pinterest
IPL 2024 : ಈ ಬಾರಿಯ ಐಪಿಎಲ್ ನಲ್ಲಿ ಆರ್​ಸಿಬಿ ತಂಡದ ಹೆಸರು ಬದಲಾವಣೆ ಸಾಧ್ಯತೆ..!

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಆರಂಭಕ್ಕೂ ಮುನ್ನ RCB ಯಲ್ಲಿ ಮಹತ್ವದ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ. ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಹೊಸ ಹೆಸರಿನೊಂದಿಗೆ ಕಣಕ್ಕಿಳಿಯಲಿದೆ ಎಂದು ತಿಳಿದು ಬಂದಿದೆ.

ಹೌದು, ಈ ಬಾರಿ ಆರ್​ಸಿಬಿ ತಂಡವು ರಾಯಲ್ ಚಾಲೆಂಜರ್ಸ್ ಬ್ಯಾಂಗಲೂರ್ ಬದಲಿಗೆ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಹೆಸರಿನಲ್ಲಿ ಕಣಕ್ಕಿಳಿಯಲಿದೆ. ಮಾರ್ಚ್ 19 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಅನ್​ಬಾಕ್ಸ್​ ಕಾರ್ಯಕ್ರಮದಲ್ಲಿ ಆರ್​ಸಿಬಿ ತಂಡದ ಹೆಸರು ರಾಯಲ್ ಚಾಲೆಂಜರ್ಸ್​ ಬೆಂಗಳೂರು ಎಂದು ಘೋಷಣೆಯಾಗಲಿದೆ ಎಂದು ವರದಿಯಾಗಿದೆ.

ಈ ಹಿಂದಿನಿಂದಲೂ ಆರ್​ಸಿಬಿ ಅಭಿಮಾನಿಗಳು ಬ್ಯಾಂಗಲೂರ್ ಬದಲಿಗೆ ಬೆಂಗಳೂರು ಬಳಸುವಂತೆ ಸೋಷಿಯಲ್ ಮೀಡಿಯಾ ಮೂಲಕ ಮನವಿ ಸಲ್ಲಿಸುತ್ತಾ ಬಂದಿದ್ದರು. ಇದೀಗ ಅಭಿಮಾನಿಗಳ ಬಹುಕಾಲದ ಈ ಬೇಡಿಕೆಯನ್ನು ಈಡೇರಿಸಲು ಆರ್​ಸಿಬಿ ಫ್ರಾಂಚೈಸಿ ಮುಂದಾಗಿದೆ.

ಅದರಂತೆ ಐಪಿಎಲ್ ಸೀಸನ್ 17 ರಲ್ಲಿ ರಾಯಲ್ ಚಾಲೆಂಜರ್ಸ್ ಬ್ಯಾಂಗಲೂರ್ ಬದಲಿಗೆ ಆರ್​ಸಿಬಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೆಸರಿನಲ್ಲಿ ಕಣಕ್ಕಿಳಿಯಲಿದೆ. ಈ ಮೂಲಕ ಹೊಸ ಹೆಸರಿನೊಂದಿಗೆ ಐಪಿಎಲ್​ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯಲಿದೆ.

ಬಹುನಿರೀಕ್ಷಿತ ಐಪಿಎಲ್​ನ 17ನೇ ಆವೃತ್ತಿ ಮಾರ್ಚ್ 22 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಆರ್​ಸಿಬಿ ಐಪಿಎಲ್ ಅಭಿಯಾನ ಆರಂಭಿಸಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ