ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

IPL: ಶೀಘ್ರದಲ್ಲೇ ಐಪಿಎಲ್ ಆರಂಭ ; ಆಟಗಾರರ ಹರಾಜಿಗೆ ದಿನಾಂಕ ಬಿಡುಗಡೆ - ಇಲ್ಲಿದೆ ಮಾಹಿತಿ

Twitter
Facebook
LinkedIn
WhatsApp
IPL: ಶೀಘ್ರದಲ್ಲೇ ಐಪಿಎಲ್ ಆರಂಭ ; ಆಟಗಾರರ ಹರಾಜಿಗೆ ದಿನಾಂಕ ಬಿಡುಗಡೆ - ಇಲ್ಲಿದೆ ಮಾಹಿತಿ

ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​ 17 ಗಾಗಿ ಬಿಸಿಸಿಐ ಸಿದ್ಧತೆಗಳನ್ನು ಆರಂಭಿಸಿದೆ. ಇದರ ಮೊದಲ ಹೆಜ್ಜೆಯಾಗಿ ಇದೀಗ ಐಪಿಎಲ್ ಹರಾಜಿಗಾಗಿ ಡೇಟ್ ಫಿಕ್ಸ್​ ಮಾಡಲಾಗಿದೆ. ಅದರಂತೆ ಡಿಸೆಂಬರ್ 19 ರಂದು ದುಬೈನಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ. ಇದಕ್ಕೂ ಮುನ್ನ 10 ಫ್ರಾಂಚೈಸಿಗಳು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಲಾಗಿರುವ ಆಟಗಾರರ ಪಟ್ಟಿಯನ್ನು ಸಲ್ಲಿಸಬೇಕು. ಇದಕ್ಕಾಗಿ ನವೆಂಬರ್ 15 ರವರೆಗೆ ಕಾಲಾವಕಾಶ ನೀಡಲಾಗಿದೆ.

100 ಕೋಟಿ ಪರ್ಸ್​:

ಮುಂಬರುವ ಐಪಿಎಲ್​ ಹರಾಜಿಗಾಗಿ ಪ್ರತಿ ಫ್ರಾಂಚೈಸಿಗಳಿಗೆ 100 ಕೋಟಿಯ ಪರ್ಸ್ ನೀಡಲಾಗುತ್ತಿದೆ. ಕಳೆದ ಬಾರಿಯ ಹರಾಜಿನಲ್ಲಿ ಎಲ್ಲಾ ಫ್ರಾಂಚೈಸಿಗಳು 95 ಕೋಟಿಯೊಂದಿಗೆ ಹರಾಜು ಪ್ರಕ್ರಿಯೆಯಲ್ಲಿ ಕಾಣಿಸಿಕೊಂಡಿತ್ತು. ಈ ಬಾರಿ 5 ಕೋಟಿ ರೂ. ಅನ್ನು ಹೆಚ್ಚಿಸಲಾಗಿದ್ದು, ಅದರಂತೆ 100 ಕೋಟಿಯೊಳಗೆ ಆಟಗಾರರನ್ನು ಖರೀದಿಸಬಹುದು.

ಮಿನಿ ಹರಾಜು:

ಐಪಿಎಲ್ 2023 ರಲ್ಲಿ ಮೆಗಾ ಹರಾಜು ನಡೆದಿದ್ದರಿಂದ ಈ ಬಾರಿ ಮಿನಿ ಹರಾಜು ನಡೆಯಲಿದೆ. ಹೀಗಾಗಿ ಈ ಬಾರಿ ಫ್ರಾಂಚೈಸಿಗಳಿಗೆ ಬೇಕಾದಷ್ಟು ಆಟಗಾರರನ್ನು ಉಳಿಸಿಕೊಳ್ಳಬಹುದು. ಅಲ್ಲದೆ ಬಿಡುಗಡೆ ಮಾಡಲಾದ ಆಟಗಾರರ ಸ್ಥಾನಗಳಿಗಾಗಿ ಬಿಡ್ಡಿಂಗ್ ನಡೆಸಬಹುದು. ಹೀಗಾಗಿಯೇ ಈ ಬಾರಿಯ ಹರಾಜು ಪ್ರಕ್ರಿಯೆಯನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸಲಾಗಿದೆ.

IPL 2024 Auction Date Time Venue Live Streaming TV OTT

ಸ್ಟಾರ್ ಆಟಗಾರರ ಎಂಟ್ರಿ:

ಐಪಿಎಲ್ 2024 ರ ಹರಾಜಿನಲ್ಲಿ ಸ್ಟಾರ್ ಆಟಗಾರರ ದಂಡೇ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಕಳೆದ ಬಾರಿಯ ಐಪಿಎಲ್​ನಿಂದ ಹೊರಗುಳಿದಿದ್ದ ಪ್ಯಾಟ್ ಕಮಿನ್ಸ್, ಕ್ರಿಸ್ ವೋಕ್ಸ್, ಟ್ರಾವಿಸ್ ಹೆಡ್, ಅಲೆಕ್ಸ್ ಹೇಲ್ಸ್, ಸ್ಯಾಮ್ ಬಿಲ್ಲಿಂಗ್ಸ್​, ಜೆರಾಲ್ಡ್ ಕೊಯಟ್ಝಿ ಮತ್ತು ಮಿಚೆಲ್ ಸ್ಟಾರ್ಕ್​ ಮುಂಬರುವ ಐಪಿಎಲ್​ ಬಿಡ್ಡಿಂಗ್​ನಲ್ಲಿ ಕಾಣಿಸಿಕೊಳ್ಳುವುದನ್ನು ಖಚಿತಪಡಿಸಿದ್ದಾರೆ.

10 ತಂಡಗಳು:

ಮುಂಬರುವ ಐಪಿಎಲ್​ನಲ್ಲೂ 10 ತಂಡಗಳೇ ಮುಂದುವರೆಯಲಿದೆ. ಈ ಹಿಂದೆ ತಂಡಗಳ ಸಂಖ್ಯೆಯನ್ನು 12 ಕ್ಕೇರಿಸುವ ಪ್ರಸ್ತಾವನೆಗಳು ಬಂದಿದ್ದರೂ, ಸದ್ಯದ ಮಟ್ಟಿಗೆ ಬಿಸಿಸಿಐ ಹೆಚ್ಚುವರಿ ಟೀಮ್​ಗಳನ್ನು ಕಣಕ್ಕಿಳಿಸುವ ಇರಾದೆಯಲ್ಲಿಲ್ಲ. ಹೀಗಾಗಿ ಐಪಿಎಲ್​ ಸೀಸನ್ 17 ರಲ್ಲೂ 10 ತಂಡಗಳೇ ಕಣಕ್ಕಿಳಿಯಲಿದೆ

ವುಮೆನ್ಸ್ ಪ್ರೀಮಿಯರ್ ಲೀಗ್​:

ಈ ಬಾರಿ ಕೂಡ ವುಮೆಮ್ಸ್​ ಪ್ರೀಮಿಯರ್ ಲೀಗ್ ನಡೆಯಲಿದ್ದು, ಈ ಲೀಗ್​ನ ಆಟಗಾರ್ತಿಯರ ಹರಾಜು ಪ್ರಕ್ರಿಯೆ ಡಿಸೆಂಬರ್ 9 ರಂದು ನಡೆಸಲು ಯೋಜನೆ ರೂಪಿಸಲಾಗಿದೆ. ಇದಾಗ್ಯೂ ವುಮೆನ್ಸ್ ಪ್ರೀಮಿಯರ್ ಲೀಗ್ ಹರಾಜು ಪ್ರಕ್ರಿಯೆಯ ಸ್ಥಳವನ್ನು ಅಂತಿಮಗೊಳಿಸಲಾಗಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ