ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರ‍್ಯಾಂಪ್​ವಾಕ್​ ಮಾಡುವಾಗ ಕಬ್ಬಿಣದ ಪಿಲ್ಲರ್​ ಬಿದ್ದು ಮಾಡೆಲ್ ಸಾವು

Twitter
Facebook
LinkedIn
WhatsApp
ರ‍್ಯಾಂಪ್​ವಾಕ್​ ಮಾಡುವಾಗ ಕಬ್ಬಿಣದ ಪಿಲ್ಲರ್​ ಬಿದ್ದು ಮಾಡೆಲ್ ಸಾವು

ನೋಯ್ಡಾದಲ್ಲಿ ನಡೆಯುತ್ತಿದ್ದ ಫ್ಯಾಷನ್ರನ್​ವೇನಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಕಬ್ಬಿಣದ ಪಿಲ್ಲರ್ ಬಿದ್ದು 24 ವರ್ಷದ ಮಾಡೆಲ್ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಹಿಳೆಯನ್ನು ವಂಶಿಕಾ ಚೋಪ್ರಾ ಎಂದು ಗುರುತಿಸಲಾಗಿದೆ. ನೋಯ್ಡಾದ ಸೆಕ್ಟರ್ 16 ಎ ನಲ್ಲಿರುವ ಫಿಲ್ಮ್ ಸಿಟಿಯ ಲಕ್ಷ್ಮಿ ಸುಡಿಯೋದಲ್ಲಿ ಅಪಘಾತ ಸಂಭವಿಸಿದೆ. ಬೆಳಕಿನ ಉದ್ದೇಶಕ್ಕಾಗಿ ಕಬ್ಬಿಣದ ಕಂಬವನ್ನು ನಿರ್ಮಿಸಲಾಗಿದೆ ಆದರೆ ಅದು ವೇದಿಕೆಯ ಮೇಲೆ ಬಿದ್ದು ಮಾಡೆಲ್ ತಕ್ಷಣವೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಬಾಬಿ ರಾಜ್ ಎಂಬ ವ್ಯಕ್ತಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಫ್ಯಾಷನ್ ಶೋ ಆಯೋಜಕರು ಮತ್ತು ಇತರ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಂಶಿಕಾ ಅವರ ಸಾವಿನ ಬಗ್ಗೆ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಸಂಬಂಧ ಪೊಲೀಸರು ಫ್ಯಾಷನ್ ಶೋ ಆಯೋಜಕ ಮತ್ತು ಲೈಟಿಂಗ್ ಕೆಲಸದಲ್ಲಿ ತೊಡಗಿದ್ದ 4 ಜನರನ್ನು ಬಂಧಿಸಿದ್ದಾರೆ ಎಂದು ನೋಯ್ಡಾದ ಹೆಚ್ಚುವರಿ ಡಿಸಿಪಿ ಮೋಹನ್ ಅವಸ್ತಿ ತಿಳಿಸಿದ್ದಾರೆ. ಫ್ಯಾಷನ್ ಶೋಗೆ ಅನುಮತಿ ನೀಡಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಎಲೆಕ್ಟ್ರಿಷಿಯನ್​ ಕೈಗೆ ಸರಪಳಿ ಹಾಕಿ, ತಳ್ಳುವ ಗಾಡಿಗೆ ಕಟ್ಟಿದ ಅಂಗಡಿ ಮಾಲೀಕ:

ಅಂಗಡಿ ಮಾಲೀಕನೊಬ್ಬ ಎಲೆಕ್ಟ್ರಿಷಿಯನ್​ ಒಬ್ಬರ ಕೈಗೆ ಸರಪಳಿ ಹಾಕಿ ಹಾಕಿ ತಳ್ಳುವ ಗಾಡಿಗೆ ಕಟ್ಟಿರುವ ಘಟನೆ ಜಾರ್ಖಂಡ್​ನ ಧನ್​ಬಾದ್​ನಲ್ಲಿ ನಡೆದಿದೆ.ಎಲೆಕ್ಟ್ರಿಷಿಯನ್ ಯಾವುದೋ ಕೆಲಸ ಮಾಡಿಕೊಡುತ್ತೇನೆ ಎಂದು ಹೇಳಿ ಮುಂಗಡ 15 ಸಾವಿರ ರೂ. ಪಡೆದಿದ್ದರು, ಕೆಲವು ದಿನಗಳಿಂದ ಕಾಲ್​ ಕೂಡ ರಿಸೀವ್ ಮಾಡುತ್ತಿರಲಿಲ್ಲ, ಹೀಗಾಗಿ ಅಂಗಡಿಯವ ಏನಾದರೂ ಮಾಡಲೇಬೇಕು, ಈತನಿಗೆ ಬುದ್ಧಿ ಕಲಿಸಬೇಕು ಎಂದು ಆಲೋಚಿಸಿದ್ದ.

ಒಂದೆಡೆ ಹಣವೂ ಹೋಯ್ತು ಇನ್ನೊಂದೆಡೆ ಕೆಲಸವೂ ಆಗಿಲ್ಲ ಎನ್ನುವ ಬೇಸರದಿಂದ ಆತ ಎಲೆಕ್ಟ್ರಿಷಿಯನ್​ನ ಕೈಗೆ ಕೋಳ ಹಾಕಿ ಗಾಡಿಗೆ ಕಟ್ಟಿದ್ದಾರೆ.

ಬಳಿಕ ಪೊಲೀಸರು ಆಗಮಿಸಿದಾಗ ಇದ್ದ ವಿಚಾರವನ್ನು ಅಂಗಡಿ ಮಾಲೀಕ ವಿವರಿಸಿದ್ದಾರೆ, ಇದಾದ ಬಳಿಕ ಎಲೆಕ್ಟ್ರಿಷಿಯನ್​ ಬಳಿ ಕೇಳಿದಾಗ ಹೌದು ನನಗೆ ಅವರು ಹಣ ನೀಡಿದ್ದರು, ನಾನು ಕೆಲಸವನ್ನೂ ಮಾಡಿಲ್ಲ ಹಣವನ್ನೂ ಹಿಂದಿರುಗಿಸಿಲ್ಲ ಎಂದು ಒಪ್ಪಿಕೊಂಡಿದ್ದಾನೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist