ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಐಆರ್ ಎಸ್ ಅಧಿಕಾರಿ ಸಚಿನ್ ಸಾವಂತ್ ಅಕ್ರಮ ಹಣ ವರ್ಗಾವಣೆ ಪ್ರಕರಣ ; ನಟಿ ನವ್ಯಾ ನಾಯರ್ ವಿರುದ್ಧ ದೂರು ದಾಖಲು!

Twitter
Facebook
LinkedIn
WhatsApp
ಐಆರ್ ಎಸ್ ಅಧಿಕಾರಿ ಸಚಿನ್ ಸಾವಂತ್ ಅಕ್ರಮ ಹಣ ವರ್ಗಾವಣೆ ಪ್ರಕರಣ ; ನಟಿ ನವ್ಯಾ ನಾಯರ್ ವಿರುದ್ಧ ದೂರು ದಾಖಲು!

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ನವ್ಯಾ ನಾಯರ್ (Navya Nair) ವಿರುದ್ಧ ಇಡಿ (ಜಾರಿ ನಿರ್ದೇಶನಾಲಯ) ದೂರು ದಾಖಲಿಸಿದೆ. ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿಯಿಂದ ಬಂಧನಕ್ಕೆ ಒಳಗಾಗಿರುವ ಅಧಿಕಾರಿಯೊಬ್ಬರೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದ ನಟಿ ನವ್ಯಾ ನಾಯರ್, ಆ ಅಧಿಕಾರಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಉಡುಗೊರೆಗಳನ್ನು, ಹಣವನ್ನು ಪಡೆದಿದ್ದಾರೆ ಎನ್ನಲಾಗಿದೆ.

ಐಆರ್​ಎಸ್ ಅಧಿಕಾರಿ ಸಚಿನ್ ಸಾವಂತ್ ಅಕ್ರಮ ಹಣ ವರ್ಗಾವಣೆ, ಭ್ರಷ್ಟಾಚಾರ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿದ್ದಾರೆ. ಈ ಅಧಿಕಾರಿಯಿಂದ ನಟಿ ನವ್ಯಾ ನಾಯರ್ ಚಿನ್ನದ ಆಭರಣಗಳು ಸೇರಿದಂತೆ ಹಲವು ದುಬಾರಿ ಉಡುಗೊರೆಗಳು, ನಗದು ಹಣವನ್ನು ಪಡೆದಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದ್ದು, ಇದೇ ಕಾರಣಕ್ಕೆ ನಟಿ ನವ್ಯಾ ವಿರುದ್ಧವೂ ದೂರು ದಾಖಲಿಸಲಾಗಿದೆ.

ಐಆರ್​ಎಸ್ ಅಧಿಕಾರಿ ಸಚಿನ್ ಸಾವಂತ್ ಅಕ್ರಮ ಹಣ ವರ್ಗಾವಣೆ, ಭ್ರಷ್ಟಾಚಾರ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿದ್ದಾರೆ. ಈ ಅಧಿಕಾರಿಯಿಂದ ನಟಿ ನವ್ಯಾ ನಾಯರ್ ಚಿನ್ನದ ಆಭರಣಗಳು ಸೇರಿದಂತೆ ಹಲವು ದುಬಾರಿ ಉಡುಗೊರೆಗಳು, ನಗದು ಹಣವನ್ನು ಪಡೆದಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದ್ದು, ಇದೇ ಕಾರಣಕ್ಕೆ ನಟಿ ನವ್ಯಾ ವಿರುದ್ಧವೂ ದೂರು ದಾಖಲಿಸಲಾಗಿದೆ.

navyanair 1689677114

ಸಚಿನ್ ವಿಚಾರಣೆ ವೇಳೆ ಅವರ ವಾಟ್ಸ್​ಆಪ್ ಚಾಟ್ ನಿಂದಾಗಿ ನಟಿ ನವ್ಯಾ ನಾಯರ್ ಜೊತೆ ಆತ್ಮೀಯರಾಗಿದ್ದ ವಿಷಯ ಬೆಳಕಿಗೆ ಬಂದಿದೆ. ಕೊಚ್ಚಿಯಲ್ಲಿ ನವ್ಯಾ ಹಾಗೂ ಸಚಿನ್ ಒಂದೇ ಅಪಾರ್ಟ್​ಮೆಂಟ್​ನ ನಿವಾಸಿಗಳಾಗಿದ್ದು ನೆರೆ ಹೊರೆಯವರಾಗಿದ್ದರು. ನವ್ಯಾ, ಕೆಲವು ಬಾರಿ ಸಚಿನ್​ರನ್ನು ಗುರುವಾಯೂರು ದೇವಾಲಯಕ್ಕೂ ಕರೆದೊಯ್ದಿದ್ದರು. ಇಡಿ ಆರೋಪದಂತೆ, ಸಚಿನ್, ಚಿನ್ನಾಭರಣೆ ಸೇರಿದಂತೆ ಕೆಲವು ದುಬಾರಿ ವಸ್ತುಗಳನ್ನು ನವ್ಯಾಗೆ ಉಡುಗೊರೆಯಾಗಿ ನೀಡಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ನವ್ಯಾ ನಾಯರ್, ”ಇಬ್ಬರೂ ನೆರೆ-ಹೊರೆಯವರಾಗಿದ್ದರಿಂದ ಗೆಳೆತನವಿತ್ತು, ಅದೇ ಕಾರಣಕ್ಕೆ ಕೆಲವು ಬಾರಿ ಅವರನ್ನು ದೇವಾಲಯಕ್ಕೆ ಕರೆದೊಯ್ದಿದ್ದೆ. ನನ್ನ ಮಗನ ಹುಟ್ಟುಹಬ್ಬಕ್ಕೆ ಅವರು ಆಭರಣ ಉಡುಗೊರೆ ನೀಡಿದ್ದರು. ಗೆಳೆತನಕ್ಕೆ ಮೀರಿದ ಸಂಬಂಧ ನಮ್ಮದಲ್ಲ. ಅವರ ಹಣಕಾಸಿನ ವ್ಯವಹಾರಗಳಿಗೂ ನನಗೂ ಸಂಬಂಧವಿಲ್ಲ” ಎಂದಿದ್ದಾರೆ.

ನವ್ಯಾ ನಾಯರ್, ಕನ್ನಡದ ‘ಗಜ’, ‘ದೃಶ್ಯ’, ‘ದೃಶ್ಯ 2’, ‘ನಮ್ಮ ಯಜಮಾನ್ರು’ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಲ್ಲದೆ ಹಲವಾರು ಮಲಯಾಳಂ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಕೆಲವು ತಮಿಳು ಹಾಗೂ ತೆಲುಗು ಸಿನಿಮಾಗಳಲ್ಲಿಯೂ ಸಹ ನಾಯಕಿಯಾಗಿ ನಟಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist