ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಜಗದೀಶ್ ಶೆಟ್ಟರ್ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಗೆ ಗೆಲುವು ಸುಲಭವೇ.? ಹೇಗಿದೆ ಕ್ಷೇತ್ರ.!

Twitter
Facebook
LinkedIn
WhatsApp
ಜಗದೀಶ್ ಶೆಟ್ಟರ್ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಗೆ ಗೆಲುವು ಸುಲಭವೇ.? ಹೇಗಿದೆ ಕ್ಷೇತ್ರ.!

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಣಕಣ ರಂಗೇರುತ್ತಿದೆ. ಪ್ರಭಾವಿ ನಾಯಕರು ಇರುವ ಗಡಿಜಿಲ್ಲೆ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು ಹೆಚ್ಚಾಗಿದೆ. ಬಿಜೆಪಿ ಟಿಕೆಟ್ ಪಡೆದ ಜಗದೀಶ್ ಶೆಟ್ಟರ್ ಅವರಿಗೆ ಸ್ಥಳೀಯ ಮಟ್ಟದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಿಂದ ಟಿಕೆಟ್ ಪಡೆದ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರಿಗೆ ಗೆಲುವಿನ ಹಾದಿ ಸುಗಮವಾಗಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬಂದಿವೆ.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಟಿಕೆಟ್ ಏನೋ ಸಿಕ್ಕಿದೆ. ಆದರೆ ಕ್ಷೇತ್ರದಲ್ಲಿನ ಬೆಂಬಲ, ಸ್ಥಳೀಯ ರಾಜಕೀಯ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಕಾಂಗ್ರೆಸ್‌ಗೆ ದಾರಿ ಇನ್ನಷ್ಟು ಸರಳವಾಗಿದೆ. ಇದಕ್ಕೆ ಕಾರಣ ಕಾಂಗ್ರೆಸ್ ಪ್ರತಿಸ್ಪರ್ಧಿಯಾಗಿ ಬಿಜೆಪಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಣಕ್ಕಿಳಿದಿರುವುದು.

ವಿಶ್ಲೇಷಕರ ಪ್ರಕಾರ, ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಸ್ಪರ್ಧೆಗೆ ಸ್ವಪಕ್ಷದಿಂದಲೇ ವಿರೋಧ ಕೇಳಿ ಬಂದಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಮಿಸ್ ಆಗಿದ್ದಕ್ಕೆ ಶೆಟ್ಟರ್ ಮನನೊಂದು ಕಾಂಗ್ರೆಸ್ ಸೇರಿಕೊಂಡರು. ಬಳಿಕ ಲೋಕಸಭಾ ಚುನಾವಣೆಯ ಹಿತದೃಷ್ಟಿಯಿಂದ ಕೆಲವೇ ತಿಂಗಳಲ್ಲಿ ಮತ್ತೆ ಬಿಜೆಪಿಗೆ ಮರಳಿದರು

ಪಕ್ಷಾಂತರದಿಂದ ಹೆಸರು ಹಾಳು: ಬಿಜೆಪಿಗೆ ಬಂದ ಬಳಿಕ ಧಾರವಾಡ ಕ್ಷೇತ್ರದ ಟಿಕೆಟ್ ಮೇಲೆ ಕಣ್ಣಿಟ್ಟಿದ್ದರು. ಇದರೊಂದಿಗೆ ಹಾವೇರಿ ಕ್ಷೇತ್ರ ಟಿಕೆಟ್ ಕೊಟ್ಟರು ಸ್ಪರ್ಧಿಸುವೆ ಎಂದು ಇಂಗಿತ ಹೊರ ಹಾಕಿದ್ದರು. ಹೀಗೆ ಅವರ ಪಕ್ಷಾಂತರದ ನಿರ್ಧಾರ, ನಿಲುವುಗಳಿಂದ ಹೆಸರು ಹಾಳು ಮಾಡಿಕೊಂಡರು ಎನ್ನಲಾಗಿದೆ.

ಪಕ್ಷ ಸಿದ್ಧಾಂತ ಮರೆತು ಪಕ್ಷಾಂತರ ಮಾಡಿದ್ದ ಜಗದೀಶ್ ಶೆಟ್ಟರ್ ಅವರು ಧಾರವಾಡ ಕ್ಷೇತ್ರದ ಟಿಕೆಟ್ ಕೇಳುವ ಮೂಲಕ ಒಂದಷ್ಟು ವರ್ಗದ ಜನರ ಕೆಂಗಣ್ಣಿಗೆ ಗುರಿಯಾದರು. ಅಲ್ಲದೇ ಅವರಿಗೆ ಲಿಂಗಾಯತ ನಾಯಕ ಎಂಬ ಹೆಸರು ಇದೆ ಹೊರತು ಈ ಭಾಗದಲ್ಲಿ ಅಷ್ಟಾಗಿ ವರ್ಚಸ್ಸು ಇಲ್ಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ಸ್ಥಳಿಯರ ವಿರೋಧ, ಗೋಬ್ಯಾಕ್ ಅಭಿಯಾನ ಮುಳ್ಳು: ಬೆಳಗಾವಿ ಭಾಗದ ನಾಯಕರ ಜೊತೆಗೆ ಅಷ್ಟಾಗಿ ಒಡನಾಟ ಇಟ್ಟುಕೊಳ್ಳದೇ ಹುಬ್ಬಳ್ಳಿಗೆ ಸಿಮೀತವಾಗಿದ್ದಾರೆ ಎಂಬ ಮಾತು ಇದೆ. ಅವರು ಬೆಳಗಾವಿಯಲ್ಲಿ ಸ್ಪರ್ಧಿಸುತ್ತಾರೆ ಎನ್ನುತ್ತಿದ್ದಂತೆ ಪ್ರಭಾಕರ್ ಕೋರೆ, ಈರಣ್ಣ ಕಡಾಡಿಯಂತೆ ಘಟಾನುಘಟಿ ನಾಯಕರು, ಕಾರ್ಯಕರ್ತರು ಸಭೆ ನಡೆಸಿದರು. ಗೋಬ್ಯಾಕ್ ಅಭಿಯಾನ ನಡೆಸಿದರು.

ಹಾಲಿ ಸಚಿವರ ಪ್ರಭಾವ: ಇತ್ತ ಬೆಳಗಾವಿ ಭಾಗದ ಪ್ರಭಾವಿಗಳಲ್ಲಿ ಒಬ್ಬರಾಗಿರುವ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರನ ಪರ ಅಪಾರ ಒಲವು ಇದೆ. ಹಾಲಿ ಸಚಿವರ ಪರ ಕಾಣದ ಕೈಗಳು ಕೆಲಸ ಮಾಡಬಹುದು ಎನ್ನಲಾಗಿದೆ. ಜಗದೀಶ್ ಶೆಟ್ಟರ್ ಅವರನ್ನು ವಿರೋಧಿಸಿ ಬಿಜೆಪಿ ನಾಯಕರು ಬಹಿರಂಗವಾಗಿಯೇ ಕಾಂಗ್ರೆಸ್ ಪರ ಕೆಲಸ ಮಾಡಬಹುದು. ಇದು ಶೆಟ್ಟರ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕಬಹುದು.

ಏಕೆಂದರೆ ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಪಕ್ಷೇತರ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದನ್ನು ನೋಡಿದ್ದೇವೆ. ಅದೇ ರೀತಿ ಬೆಳಗಾವಿಯಲ್ಲಿ ಅದೇ ರೀತಿ ನಡೆಯಲೂಬಹುದು. ಹಾಗಾದಲ್ಲಿ ಇದು ಕಾಂಗ್ರೆಸ್‌ಗೆ ವರದಾನವಾಲಿದೆ.

ಗ್ಯಾರೆಂಟಿಗಳು ಸಚಿವೆ ‘ಕೈ’ ಹಿಡಿಯುವ ನಿರೀಕ್ಷೆ: ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸೋಲಿಸಬೇಕು ಎನ್ನುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರು ತಮ್ಮ ಪಕ್ಷದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪರ ನಿಂತರೂ ಅದು ಅಷ್ಟಾಗಿ ಉಪಯೋಗಕ್ಕೆ ಬಾರದು ಎನ್ನಲಾಗುತ್ತಿದೆ. ಇತ್ತ ಮಹಿಳೆಯರಿಗೆ ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮಹಿಳಾ ಸಚಿವೆಯಾಗಿ ಕೆಲವು ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಸಕ್ರಿಯವಾಗಿದ್ದರು. ಇದು ಚುನಾವಣೆಯಲ್ಲಿ ಅವರನ್ನು ಕೈ ಹಿಡಿಯುವ ನಿರೀಕ್ಷೆಗಳು ಇವೆ.

ಹೀಗಿ ಹಲವು ಕಾರಣಗಳಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಗೆಲುವು ಸುಲಭವಲ್ಲ, ಕಷ್ಟ ಸಾಧ್ಯ ಎನ್ನುವಂತಾಗಿದೆ. ಲಿಂಗಾಯತ ನಾಯಕರಾದರೂ ಶೆಟ್ಟರ್ ವಿರುದ್ಧದ ನಿಲುವು, ವಿರೋಧಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್‌ಗೆ ಗೆಲುವಿನ ದಾರಿ ಸುಗಮವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist