ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಡುಪಿ, ಮಂಗಳೂರು, ಪುತ್ತೂರು ಹಾಗೂ ಕರಾವಳಿಯ ಹಲವು ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಐಟಿ ದಾಳಿ!

Twitter
Facebook
LinkedIn
WhatsApp
ಉಡುಪಿ, ಮಂಗಳೂರು, ಪುತ್ತೂರು ಹಾಗೂ ಕರಾವಳಿಯ ಹಲವು ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಐಟಿ ದಾಳಿ!

ಮಂಗಳೂರು/ಉಡುಪಿ, (ಅಕ್ಟೋಬರ್ 31): ನಿನ್ನೆ ಅಷ್ಟೇ ಕರ್ನಾಟಕದ 75 ಕಡೆಗಳಲ್ಲಿ ಲೋಕಾಯುಕ್ತ ದಾಳಿಯಾಗಿತ್ತು.

ಇದರ ಬೆನ್ನಲ್ಲೇ ಇದಂಉ (ಅಕ್ಟೋಬರ್ 21) ಬೆಳ್ಳಂಬೆಳಗ್ಗೆ ಕರಾವಳಿ ಭಾಗದಲ್ಲಿ ಐಟಿ ದಾಳಿಯಾಗಿದೆ(IT Raids). ಉಡುಪಿ, ಕಾರ್ಕಳ, ಕುಂದಾಪುರ, ಪಡುಬಿದ್ರಿ, ಬ್ರಹ್ಮಾವರ, ಪುತ್ತೂರು ಸೇರಿದಂತೆ ಹಲವೆಡೆ ಚಿನ್ನದ ಅಂಗಡಿಗಳ (jewellery shops) ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಕರಾವಳಿಯ ಅನೇಕ ಭಾಗಗಳಲ್ಲಿ ತನ್ನ ಶೋರೂಮ್ ಹೊಂದಿರುವ ಪ್ರಸಿದ್ಧ ಚಿನ್ನದ ಮಳಿಗಳ ಮೇಲೆ ಏಕಕಾಲದಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪರಿಶೀಲನೆ ನಡೆಸಿದ್ದಾರೆ.

HD Revanna: ಹೆಚ್​ಡಿ.ರೇವಣ್ಣಗೆ ಮತ್ತೆ ಸಮನ್ಸ್‌ ಜಾರಿ ಮಾಡಲು ಹೈಕೋರ್ಟ್‌ ಆದೇಶ

ಬೆಂಗಳೂರು, (ಅಕ್ಟೋಬರ್ 30): ಮಾಜಿ ಸಚಿವ ಹೆಚ್‌.ಡಿ.ರೇವಣ್ಣ (HD Revanna) ಅವರಿಗೆ ಸಮನ್ಸ್‌ ಜಾರಿ ಮಾಡುವಂತೆ ಕರ್ನಾಟಕ ಹೈಕೋರ್ಟ್‌ (Karnataka High Court) ಆದೇಶಿಸಿದೆ . ಶಾಸಕ ಹೆಚ್​ಡಿ ರೇವಣ್ಣ ಆಯ್ಕೆ ಅಸಿಂಧು ಕೋರಿ ವಕೀಲ ಜಿ.ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಇಂದು (ಅಕ್ಟೋಬರ್ 30) ವಿಚಾರಣೆ ನಡೆಸಿದ ಹೈಕೋರ್ಟ್, ಮತ್ತೆ ಸಮನ್ಸ್​ ಜಾರಿಗೆ ಆದೇಶಿಸಿದೆ. ಚುನಾವಣಾ ತಕರಾರು ಅರ್ಜಿಯ ನಿಯಮದಂತೆ  ಸಮನ್ಸ್ ಜಾರಿ ಮಾಡಬೇಕು. ಅದರಂತೆ ಹೈಕೋರ್ಟ್ ನ್ಯಾ.ಜ್ಯೋತಿ ಮೂಲಿಮನಿ ಅವರು ಪ್ರಕ್ರಿಯೆಯಂತೆ ರೇವಣ್ಣ ಸೇರಿದಂತೆ ಇತರೆ ಅಭ್ಯರ್ಥಿಗಳಿಗೂ ಸಮನ್ಸ್​ ಜಾರಿಗೆ ಆದೇಶಿಸಿ ಮುಂದಿನ ವಿಚಾರಣೆಯನ್ನು ನವೆಂಬರ್ 29ಕ್ಕೆ ನಿಗದಿಪಡಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಚ್‌.ಡಿ.ರೇವಣ್ಣ ಅಕ್ರಮ ನಡೆಸಿ ಆಯ್ಕೆಯಾಗಿದ್ದಾರೆ. ಅವರ ಬೆಂಬಲಿಗರು ಮತದಾರರಿಗೆ ತಲಾ 2 ಕೋಳಿ ಮತ್ತು 2 ಸಾವಿರ ರೂ. ನಗದು ಹಂಚಿ ಮತ ಹಾಕಿಸಿಕೊಂಡಿದ್ದಾರೆ ಎಂದು ಆರೋಪ ಮಾಡಲಾಗಿದೆ. ಇಂತಹ ಅಕ್ರಮ ನಡೆಸಿ ಗೆದ್ದಿರುವ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಜಿ.ದೇವರಾಜೇಗೌಡ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.

ಇದೇ ಅರ್ಜಿಗೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಸಮನ್ಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿತ್ತು. ಆದ್ರೆ, ರೇವಣ್ಣ ಅವರಿಗೆ ಸಮನ್ಸ್ ಜಾರಿಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿದಾರರ ಪರ ಹಿರಿಯ ವಕೀಲೆ ಪ್ರಮಿಳಾ ನೇಸರ್ಗಿ ಅವರು ಪತ್ರಿಕಾ ಪ್ರಕಟಣೆ ಮೂಲಕ ಸಮನ್ಸ್ ಜಾರಿಗೆ ಮನವಿ ಮಾಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ