ಶುಕ್ರವಾರ, ಮೇ 10, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೆ.ಪಿ.ನಡ್ಡಾ..!

Twitter
Facebook
LinkedIn
WhatsApp
ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೆ.ಪಿ.ನಡ್ಡಾ..!

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (JP Nadda) ಅವರು ಮೇಲ್ಮನೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ತಿಂಗಳಷ್ಟೇ ಗುಜರಾತ್‌ (Gujarat) ವಿಧಾನಸಭೆಯಿಂದ ರಾಜ್ಯಸಭೆಗೆ (Rajya Sabha) ಅವಿರೋಧವಾಗಿ ಆಯ್ಕೆಯಾಗಿದ್ದ ಅವರು ರಾಜೀನಾಮೆ ನೀಡಿರುವುದು ಚರ್ಚೆಗೆ ಕಾರಣವಾಗಿದೆ. ಮೊದಲಿನಿಂದಲೂ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಜೆ.ಪಿ. ನಡ್ಡಾ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದ್ದವು. ಆದರೆ, ಅವರು ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಇದರ ಬೆನ್ನಲ್ಲೇ ರಾಜೀನಾಮೆ ನೀಡಿದ್ದಾರೆ.

“ಹಿಮಾಚಲ ಪ್ರದೇಶದ ವಿಧಾನಸಭೆಯಿಂದ ಆಯ್ಕೆಯಾಗಿದ್ದ ಜಗತ್‌ ಪ್ರಕಾಶ್‌ ನಡ್ಡಾ ಅವರು ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇವರ ರಾಜೀನಾಮೆಯನ್ನು ರಾಜ್ಯಸಭೆ ಸಭಾಪತಿಯು ಅಂಗೀಕರಿಸಿದ್ದಾರೆ” ಎಂದು ರಾಜ್ಯಸಭೆ ಸಂಸದೀಯ ಪ್ರಕಟಣೆ ತಿಳಿಸಿದೆ. ಹಿಮಾಚಲ ಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಜೆ.ಪಿ. ನಡ್ಡಾ ಅವರ ಅವಧಿಯು ಏಪ್ರಿಲ್‌ನಲ್ಲಿ ಕೊನೆಗೊಳ್ಳಲಿದೆ. ಈಗಾಗಲೇ ಅವರು ಗುಜರಾತ್‌ ವಿಧಾನಸಭೆಯಿಂದ ಕಳೆದ ತಿಂಗಳು ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

ಬಿಜೆಪಿಯು ಈಗಾಗಲೇ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನರೇಂದ್ರ ಮೋದಿ, ಅಮಿತ್‌ ಶಾ ಸೇರಿ ಹಲವು ಗಣ್ಯರಿಗೆ, ಯುವಕರು, ಮಹಿಳೆಯರಿಗೆ ಆದ್ಯತೆ ಕೊಟ್ಟು ಟಿಕೆಟ್‌ ನೀಡಲಾಗಿದೆ. ಟಿಕೆಟ್‌ ಘೋಷಿಸುವ ಮೊದಲೇ ಜೆ.ಪಿ. ನಡ್ಡಾ ಅವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಅವರು ರಾಜ್ಯಸಭೆಗೆ ಆಯ್ಕೆಯಾದ ಕಾರಣ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬುದು ಖಾತ್ರಿಯಾಗಿತ್ತು.

ಜೆ.ಪಿ. ನಡ್ಡಾ ಅವರು ತಮ್ಮ ರಾಜ್ಯಸಭೆ ಸದಸ್ಯತ್ವದ ಅವಧಿ ಮುಗಿಯುವ ಮೊದಲೇ ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವುದೇ ಈಗ ಚರ್ಚೆಗೆ ಕಾರಣವಾಗಿದೆ. ಜೆ.ಪಿ. ನಡ್ಡಾ ಅವರಿಗೆ ಬಿಜೆಪಿಯ ಎರಡನೇ ಪಟ್ಟಿಯಲ್ಲಿ ಟಿಕೆಟ್‌ ನೀಡಲಾಗುತ್ತದೆ. ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಹಾಗಾಗಿಯೇ, ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಾದರೆ, ನಡ್ಡಾ ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ಇದುವರೆಗೆ ದೃಢವಾಗಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ