ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಜಾಗ್ವಾರ್ ಕಾರು ಗುದ್ದಿದ ರಭಸಕ್ಕೆ 15 ಅಡಿ ದೂರ ಹಾರಿ ಬಿದ್ದ ವಿದ್ಯಾರ್ಥಿನಿ! ವಿಡಿಯೋ ವೈರಲ್

Twitter
Facebook
LinkedIn
WhatsApp
Jaguar car accident

ರಾಯಚೂರು, (ಜುಲೈ 27): ಬೈಕ್‍ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯಾರ್ಥಿನಿಯರಿಗೆ (Students) ಜಾಗ್ವಾರ್ ಕಾರು (Jaguar car)  ಗುದ್ದಿದ ಘಟನೆ ರಾಯಚೂರು (Raichur) ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ನಡೆದಿದೆ. ಘಟನೆಯ ದೃಶ್ಯಾವಳಿಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಮೈ ಜುಮ್ಮೆನಿಸುವಂತಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ (Social Media) ಫುಲ್​ ವೈರಲ್ ಆಗಿದೆ. ರಾಯಚೂರು ನಗರದ ಅಂಬೇಡ್ಕರ್​ ವೃತ್ತದರಿಂದ ರೈಲ್ವೆ ನಿಲ್ದಾಣದ ಕಡೆಗೆ ಹೋಗುವ ರಸ್ತೆಯಲ್ಲಿ ದ್ವಿಚಕ್ರವಾಹನ ಕ್ರಾಸ್​ ಮಾಡುವಾಗ ವೇಗವಾಗಿ ಬಂದ ಜಾಗ್ವಾರ್ ಕಾರು (Jaguar car) ಬೈಕ್​ಗೆ ಡಿಕ್ಕಿ ಹೊಡೆದು ಬಳಿಕ ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಗುದ್ದಿದೆ. ಪರಿಣಾಮ ಓರ್ವ ವಿದ್ಯಾರ್ಥಿನಿ ಅಲ್ಲದೇ ನೆಲಕ್ಕೆ ಬಿದ್ದಿದ್ದು, ಮತ್ತೋರ್ವ ಓರ್ವ ವಿದ್ಯಾರ್ಥಿನಿ 15 ಅಡಿ ದೂರದಲ್ಲಿ ಹಾರಿ ಬಿದ್ದಿದ್ದಾಳೆ. ಅದೃಷ್ಟವಶಾತ್​ ಇಬ್ಬರೂ ಬದುಕುಳಿದಿದ್ದಾಳೆ. ಇನ್ನು ಘಟನೆಯಲ್ಲಿ ಬೈಕ್​ ಸವಾರನ ಕಾಲು ಮುರಿದಿದೆ.

ರೈಲ್ವೆ ನಿಲ್ದಾಣ ರಸ್ತೆಯಲ್ಲಿ ರಾಮಮಂದಿರ ಮುಂಭಾಗದಿಂದ ಬಂದ ಬೈಕ್ ಸವಾರ, ದಿಢೀರ್​ ಯುಟರ್ನ್​ ಪಡೆದುಕೊಂಡಿದ್ದಾನೆ. ಆ ವೇಳೆ ಎದುರಿಗೆ ವೇಗ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣಕ್ಕೆ ಬಾರದೇ ಬೈಕ್​ ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆ ಬದಿಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ. ಕಾರು ಗುದ್ದಿದ ರಭಸಕ್ಕೆ ವಿದ್ಯಾರ್ಥಿನಿಯೋರ್ವಳು ಸುಮಾರು 15 ಅಡಿ ಹಾರಿ ಬಿದ್ದಿದ್ದಾಳೆ. ಬೈಕ್ ಸವಾರ ಶಿವರಾಜ್ ಪಾಟೀಲ್ ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿನಿಯರಾದ ದೇವದುರ್ಗ ತಾಲೂಕು ಬೂಮನಗುಂಡ ತಾಲೂಕಿನ ಶಿವಮಂಗಳ ಹಾಗೂ ಸಿರವಾರ ತಾಲೂಕು ಬೇವಿನೂರು ಗ್ರಾಮದ ಜ್ಯೋತಿ ಎಂದು ಗುರುತಿಸಲಾಗಿದೆ.

ಸಿಸಿಟಿವಿಯಲ್ಲಿ ಸೆರೆಯಾಗಿದ್ದ ವಿಡಿಯೋ ವೈರಲ್​ ಆಗಿರುವ ಬೆನ್ನಲ್ಲೇ ರಾಯಚೂರು ನಗರ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ಮೊಹಮ್ಮದ್ ಜಾಫರ್ ಎನ್ನುವರಿಗೆ ಸೇರಿದ ಜಗ್ವಾರ್ ಕಾರು ಎಂದು ತಿಳಿದುಬಂದಿದೆ. ಜಾಫರ್ ಈ ಜಾಗ್ವಾರ್ ಕಾರಿನ ಮೂರನೇ ಮಾಲೀಕನಾಗಿದ್ದು, ಪ್ರಕರಣ ಸಂಭವಿಸಿದ ಬಳಿಕ ತಲೆಮರೆಸಿಕೊಂಡಿದ್ದಾನೆ. ಸದ್ಯ ಪೊಲೀಸರು ಕಾರನ್ನು ವಶಕ್ಕೆ ಪಡೆದಿರುವ ತನಿಖೆ ಮುಂದುವರೆಸಿದ್ದಾರೆ.

ಇನ್ನು ಈ ವಿಡಿಯೋ ವೈರಲ್​ ಆಗಿರುವ ಬಗ್ಗೆ ಟ್ರಾಫಿಕ್ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಟ್ವಿಟ್ಟರ್​ನಲ್ಲಿ ಪ್ರತಿಕ್ರಿಯಿಸಿದ್ದು, ಘಟನೆ ಸಂಬಂಧ ಸೂಕ್ತ ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ. ಅಲ್ಲದೇ ಬೈಕ್ ಹಾಗೂ ಕಾರು ಚಾಲಕನ ಡಿಎಲ್​ ಸಸ್ಪೆಂಡ್ ಮಾಡುವಂತೆ ಟ್ವಿಟ್ಟರ್​ ಮೂಲಕ ಸೂಚನೆ ನೀಡಿದ್ದಾರೆ.

ರೈಲ್ವೇ ಹಳಿ ಮೇಲೆ ಕುಸಿದ ಮಣ್ಣು – ಗೋವಾ, ಕರ್ನಾಟಕ ರೈಲು ಸಂಚಾರದಲ್ಲಿ ಇನ್ನೆರಡು ದಿನ ವ್ಯತ್ಯಯ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದ ದೂಧ್ ಸಾಗರ್ ಫಾಲ್ಸ್  (Dudhsagar) ಬಳಿ ಬೃಹತ್ ಪ್ರಮಾಣದ ಭೂಕುಸಿತವಾಗಿದೆ. ಇದರಿಂದಾಗಿ ಗೋವಾ ಹಾಗೂ ಕರ್ನಾಟಕ ನಡುವಿನ ರೈಲು ಸಂಚಾರದಲ್ಲಿ ಎರಡು ದಿನಗಳ ಕಾಲ ವ್ಯತ್ಯಯ ಆಗಲಿದೆ. ನೈರುತ್ಯ ರೈಲ್ವೆ (Railway) ವಲಯದ 150 ಕ್ಕೂ ಅಧಿಕ ಸಿಬ್ಬಂದಿಯಿಂದ 10ಕ್ಕೂ ಹೆಚ್ಚು ಜೆಸಿಬಿ ಬಳಸಿ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ.

ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದ ನಿರಂತರ ಭೂಕುಸಿತವಾಗುತ್ತಿದೆ. ಇದರಿಂದಾಗಿ ಕಳೆದ ಎರಡು ದಿನಗಳಿಂದ ಗೋವಾ-ಕರ್ನಾಟಕ ಮಾರ್ಗ ಮಧ್ಯೆ ರೈಲ್ವೆ ಸಂಚಾರ ಸ್ಥಗಿತವಾಗಿತ್ತು. ಕಳೆದ 36 ಗಂಟೆಗಳಿಂದ ಕಾರ್ಯಾಚರಣೆ ನಡೆಸಿ ರೈಲ್ವೆ ಹಳಿ ಮೇಲೆ ಬಿದ್ದಿರುವ ಕಲ್ಲು ಹಾಗೂ ಮರಗಳನ್ನು ತೆರವುಗೊಳಿಸಲಾಗುತ್ತಿದೆ.

ಕಾರ್ಯಾಚರಣೆ ನಡೆಯುತ್ತಿರುವುದರಿಂದ ದೂಧ್ ಸಾಗರ್ ಬಳಿ ರೈಲ್ವೆ ಸಿಬ್ಬಂದಿ ಹೊರತುಪಡಿಸಿ ಅನ್ಯ ವ್ಯಕ್ತಿಗಳಿಗೆ ಪ್ರವೇಶಕ್ಕೆ ನಿಷೇಧಿಸಲಾಗಿದೆ. ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಠಿಕಾಣಿ ಹೂಡಿದ್ದಾರೆ. ಆದರೆ ಈ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದಾಗಿ ತೆರವು ಕಾರ್ಯಾಚರಣೆಗೆ ತೊಡಕಾಗಿದೆ. ಇದು ಅಧಿಕಾರಿಗಳಿಗೆ ತಲೆ ನೋವಾಗಿ ಪರಿಣಮಿಸಿದೆ.

ಕಾರ್ಯಾಚರಣೆ ಇನ್ನೂ ಒಂದು ದಿನ ನಡೆಯಲಿದ್ದು, ಎರಡು ದಿನಗಳು ರೈಲು ಸಂಚಾರದಲ್ಲಿ ವ್ಯತ್ಯಯ ಆಗಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ