ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜನಾರ್ದನ ರೆಡ್ಡಿ ನಾಳೆ ಬಿಜೆಪಿ ಸೇರ್ಪಡೆ ; ಸಭೆ ಬಳಿಕ ಅಧಿಕೃತ ಘೋಷಣೆ..!

Twitter
Facebook
LinkedIn
WhatsApp
ಜನಾರ್ದನ ರೆಡ್ಡಿ ನಾಳೆ ಬಿಜೆಪಿ ಸೇರ್ಪಡೆ ; ಸಭೆ ಬಳಿಕ ಅಧಿಕೃತ ಘೋಷಣೆ..!

ಕೆಆರ್​ಪಿಪಿ ಸಂಸ್ಥಾಪಕ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರು ಬಿಜೆಪಿ ಸೇರ್ಪಡೆಯಾಗುಉದು ಖಚಿತವಾಗಿದೆ. ಅಲ್ಲದೇ ಬಿಜೆಪಿ ಜೊತೆ ಕೆಆರ್‌ಪಿಪಿ ವಿಲೀನಕ್ಕೆ ಸರ್ವ ಸಮ್ಮತ ನಿರ್ಧಾರವಾಗಿದೆ. ಇಂದು (ಮಾರ್ಚ್ 24) ಬೆಂಗಳೂರಿನಲ್ಲಿ ನಡೆದ ಕೆಆರ್​ಪಿಪಿ ಪದಾಧಿಕಾರಿಗಳ ಸಭೆಯಲ್ಲಿ ತೀರ್ಮಾನವಾಗಿದೆ. ಇನ್ಜು ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಜನಾರ್ದನ ರೆಡ್ಡಿ, ನಾಯಕರ ಆಹ್ವಾನದ ಮೇರೆಗೆ ನಾಳೆ (ಮಾರ್ಚ್ 25) ಬಿಜೆಪಿ ಪಕ್ಷ ಸೇರ್ಪಡೆಯಾಗುತ್ತಿದ್ದೇನೆ ಎಂದು ಅಧಿಕೃತವಾಗಿ ಘೋಷಿಸಿದರು.

ಬೆಂಗಳೂರಿನನಲ್ಲಿರುವ ತಮ್ಮ ಪಾರಿಜಾತ ನಿವಾಸದಲ್ಲಿ ಪದಾಧಿಕಾರಿಗಳು, ಬೆಂಬಲಗರ ಸಭೆ ನಡೆಸಿದ ಜನಾರ್ದನ ರೆಡ್ಡಿ, ಬಿಜೆಪಿ ನಾಯಕರು ನೀಡಿದ ಆಹ್ವಾನದ ಬಗ್ಗೆ ಮುಕ್ತವಾಗಿ ಚರ್ಚಿಸಿದರು. ಅಲ್ಲದೇ ಸಭೆಯಲ್ಲಿ ಬಿಜೆಪಿ ಜತೆ ಕೆಆರ್‌ಪಿಪಿ ಪಕ್ಷದ ವಿಲೀನಕ್ಕೆ ಸರ್ವ ಸಮ್ಮತ ನಿರ್ಧಾರವಾಯ್ತು. ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯನಗರ ಜಿಲ್ಲೆಯ ಎಲ್ಲಾ‌ ಬೆಂಬಲಿಗರ ಜೊತೆ ಜನಾರ್ದನ ರೆಡ್ಡಿ ನಾಳೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೆಡ್ಡಿ, ಬಿಜೆಪಿ ನಾಯಕರ ಆಹ್ವಾನದ ಮೇರೆಗೆ ನಾಳೆ ಪಕ್ಷ ಸೇರ್ಪಡೆಯಾಗುತ್ತಿದ್ದೇನೆ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲಿ ನಾಳೆ (ಮಾರ್ಚ್ 25) ಬೆಳಗ್ಗೆ 10ಕ್ಕೆ ಬಿಜೆಪಿ ಸೇರ್ಪಡೆಯಾಗುತ್ತಿದ್ದು, ಬಿಜೆಪಿ ಸೇರ್ಪಡೆ ಬಗ್ಗೆ ಎಲ್ಲಾ ಬೆಂಬಲಿಗರ ಅಭಿಪ್ರಾಯ ಪಡೆದಿದ್ದೇನೆ. ಇದಕ್ಕೆ ಎಲ್ಲಾ ಬೆಂಬಲಿಗರು ಒಪ್ಪಿಗೆ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದರು.

 

ಮೋದಿ, ಅಮಿತ್ ಶಾ ನೇತೃತ್ವದಲ್ಲಿ ಕಳೆದ 10 ವರ್ಷದಿಂದ ಅಭಿವೃದ್ಧಿಯಾಗಿದೆ. ಮೋದಿಯನ್ನು ಮತ್ತೆ ಪ್ರಧಾನಿ ಮಾಡಲು ಈ ನಿರ್ಧಾರ ಮಾಡಿದ್ದೇನೆ. KRPP ಸ್ಥಾಪನೆ ವೇಳೆ ಬಿಎಸ್​​ವೈರನ್ನು ತಂದೆ ರೀತಿ ನೋಡುತ್ತೇನೆ ಎಂದಿದ್ದೆ. ಮಾಜಿ ಸಚಿವ ಶ್ರೀರಾಮುಲು ಜೊತೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಲ್ಲರೂ ಒಟ್ಟಾಗಿ ಮೋದಿರನ್ನು ಮತ್ತೆ ಪ್ರಧಾನಿ ಮಾಡಲು ಶ್ರಮಿಸುತ್ತೇವೆ ಎಂದು ಹೇಳಿದರು.

ಬಿಜೆಪಿಗೆ ಅತೀ‌ಚಿಕ್ಕ ವಯಸ್ಸಿನಿಂದಲೂ ಕೆಲಸ ಮಾಡಿದ್ದೇನೆ. ಮಧ್ಯೆದಲ್ಲಿ ಏನೆನ್ನೆಲ್ಲಾ ಆಯ್ತು. ಅದು ನಿಮಗೂ ಗೊತ್ತು. ನಾನು ಕೂಡ ಬಿಜೆಪಿ ಸೇರ್ಪಡೆಯಾಗೋದಕ್ಕೂ ಮುನ್ನ ಬೆಂಬಲಿಗರ ಜೊತೆ ಸಭೆ ಮಾಡಿದ್ದೇನೆ. ಪಕ್ಷದ ಬೆಂಬಲಿಗರು ಬಿಜೆಪಿ ಸೇರುವುದಕ್ಕೆ ಒಪ್ಪಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಗೆ ವಿಜಯೇಂದ್ರ, ರಾಧಾ ಮೋಹನ್ ದಾಸ್ ನೇತೃತ್ವದಲ್ಲಿ ‌ಸೇರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ