ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Jasprit Bumrah: ಶ್ರೀನಾಥ್ ದಾಖಲೆಯನ್ನು ಸರಿಗಟ್ಟುವ ಸನೀಹದಲ್ಲಿ ಭಾರತದ ವೇಗಿ ಜಸ್ಪ್ರೀತ್ ಬುಮ್ರಾ..!

Twitter
Facebook
LinkedIn
WhatsApp
Jasprit Bumrah: ಶ್ರೀನಾಥ್ ದಾಖಲೆಯನ್ನು ಸರಿಗಟ್ಟುವ ಸನೀಹದಲ್ಲಿ ಭಾರತದ ವೇಗಿ ಜಸ್ಪ್ರೀತ್ ಬುಮ್ರಾ..!

ಭಾರತ ಮತ್ತು ಇಂಗ್ಲೆಂಡ್ ನಡುವಣ 3ನೇ ಟೆಸ್ಟ್ ಪಂದ್ಯವು ಗುರುವಾರದಿಂದ ಶುರುವಾಗಲಿದೆ. ರಾಜ್ಕೋಟ್ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್ ಜಸ್ಪ್ರೀತ್ ಬುಮ್ರಾ (Jasprit Bumrah). ಏಕೆಂದರೆ ಬಾಝ್ಬಾಲ್ ರಣತಂತ್ರಕ್ಕೆ ಇದೀಗ ಬೂಮ್ಬಾಲ್ ಪ್ರತಿತಂತ್ರ ಸಿದ್ಧವಾಗಿದೆ.

ಈ ಪ್ರತಿತಂತ್ರದ ಫಲವೇ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಮುಗ್ಗರಿಸಿರುವುದು. ಈ ಪಂದ್ಯದ ಗೆಲುವಿನ ರೂವಾರಿ ಜಸ್ಪ್ರೀತ್ ಬುಮ್ರಾ(Jasprit Bumrah). ಮೊದಲ ಇನಿಂಗ್ಸ್ನಲ್ಲಿ 6 ವಿಕೆಟ್ ಕಬಳಿಸಿದ್ದ ಬುಮ್ರಾ 2ನೇ ಇನಿಂಗ್ಸ್ನಲ್ಲಿ 3 ವಿಕೆಟ್ ಉರುಳಿಸಿದ್ದರು. ಈ ಮೂಲಕ ಹಲವು ದಾಖಲೆಗಳನ್ನು ಬರೆದಿದ್ದರು.

ಬೆಳಿಗ್ಗೆ ಸ್ಥಳೀಯ ಯುವಕರು ಶಟಲ್ ಆಡುತ್ತಿದ್ದಾಗ ಕಿಟಕಿ ತೆರೆದು ಯೋಗೇಶ್ ನೋಡಿದ್ದರು. ಯುವಕರು ತೆರಳಿದ ಬಳಿಕ ಯೋಗೇಶ್ ಡೆತ್ ನೋಟ್ ಬರೆದು ಕೃತ್ಯ ಎಸಗಿದ್ದಾರೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ

ಇದೀಗ ಜಸ್​ಪ್ರೀತ್ ಬುಮ್ರಾ ಮತ್ತೊಂದು ದಾಖಲೆಯ ಹೊಸ್ತಿಲಲ್ಲಿದ್ದಾರೆ. ಅದು ಕೂಡ ಮೈಸೂರ್ ಎಕ್ಸ್​ಪ್ರೆಸ್ ಖ್ಯಾತಿಯ ಜಾವಗಲ್ ಶ್ರೀನಾಥ್ ಅವರ ದಾಖಲೆಯನ್ನು ಮುರಿಯುವ ಸನಿಹದಲ್ಲಿ ಎಂಬುದು ವಿಶೇಷ.

ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ 5 ವಿಕೆಟ್ ಕಬಳಿಸಿದ ವೇಗದ ಬೌಲರ್​ಗಳ ಪಟ್ಟಿಯಲ್ಲಿ ಜಾವಗಲ್ ಶ್ರೀನಾಥ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಒಟ್ಟು 13 ಬಾರಿ ಐದು ವಿಕೆಟ್ ಕಬಳಿಸಿ ಕನ್ನಡಿಗ ಈ ವಿಶೇಷ ದಾಖಲೆ ಬರೆದಿಟ್ಟಿದ್ದಾರೆ.

ಇತ್ತ ಜಸ್​ಪ್ರೀತ್ ಬುಮ್ರಾ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 12 ಬಾರಿ ಐದು ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಇನಿಂಗ್ಸ್​ನಲ್ಲಿ ಬುಮ್ರಾ 5 ವಿಕೆಟ್ ಪಡೆದರೆ ಜಾವಗಲ್ ಶ್ರೀನಾಥ್ ಅವರ ದಾಖಲೆಯನ್ನು ಸರಿಗಟ್ಟಬಹುದು.

ಒಂದು ವೇಳೆ ಎರಡೂ ಇನಿಂಗ್ಸ್ಗಳಲ್ಲಿ ಐದೈದು ವಿಕೆಟ್ ಕಬಳಿಸಿದ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಬಾರಿ 5 ವಿಕೆಟ್ ಕಬಳಿಸಿದ ಟೀಮ್ ಇಂಡಿಯಾದ 2ನೇ ವೇಗಿ ಎಂಬ ದಾಖಲೆ ಜಸ್ಪ್ರೀತ್ ಬುಮ್ರಾ(Jasprit Bumrah) ಪಾಲಾಗಲಿದೆ. ಹೀಗಾಗಿ ಮೂರನೇ ಟೆಸ್ಟ್ ಪಂದ್ಯದಲ್ಲಿ ಬೂಮ್ ಬೂಮ್ ಕಡೆಯಿಂದ ಭರ್ಜರಿ ದಾಖಲೆಯನ್ನು ನಿರೀಕ್ಷಿಸಬಹುದು.

ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ 5 ವಿಕೆಟ್ ಕಬಳಿಸಿದ ಟೀಮ್ ಇಂಡಿಯಾದ ವೇಗದ ಬೌಲರ್​ ಕಪಿಲ್ ದೇವ್. ಭಾರತ ತಂಡದ ಮಾಜಿ ನಾಯಕ ಒಟ್ಟು 24 ಬಾರಿ 5 ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ