ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜ್ಯ ಸರ್ಕಾರಕ್ಕೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ ; ಇಲ್ಲಿದೆ ಮಾಹಿತಿ

Twitter
Facebook
LinkedIn
WhatsApp
ರಾಜ್ಯ ಸರ್ಕಾರಕ್ಕೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ ; ಇಲ್ಲಿದೆ ಮಾಹಿತಿ

 ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹೆಚ್ಚು ಸುದ್ದು ಮಾಡಿದ ವಿಷಯಗಳಲ್ಲಿ ಈ ಜಾತಿ ಗಣತಿ ವರದಿ  ಸಲ್ಲಿಕೆ ವಿಚಾರವೂ ಒಂದಾಗಿದೆ. ಇದೀಗ ತೀವ್ರ ವಿರೋಧದ ನಡುವೆಯೂ ಜಾತಿ ಗಣತಿ ವರದಿ ಸಲ್ಲಿಕೆಯಾಗಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆಯವರು ಇಂದು(ಫೆಬ್ರವರಿ 29) ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ  ಸಲ್ಲಿಸಿದರು. ಇನ್ನು ಈ ವರದಿಯಲ್ಲಿ ಒಟ್ಟು 13 ಪ್ರತಿಗಳಿವೆ

ಇನ್ನು ಕಾಂತರಾಜ್ ವರದಿ ಸ್ವೀಕಾರ ಮಾಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಜಾತಿ ಗಣತಿ ವರದಿ ಸ್ವೀಕರಿಸಿದ್ದೇನೆ. ಜಾತಿ ಗಣತಿ ವರದಿಯಲ್ಲಿ ಏನಿದೆ ಎಂದು ನಾನು ನೋಡಿಲ್ಲ. ಕ್ಯಾಬಿನೆಟ್​​ನಲ್ಲಿ ಜಾತಿಗಣತಿ ವರದಿ ಚರ್ಚೆ ಮಾಡುತ್ತೇವೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳತ್ತೇವೆ ಎಂದು ಸ್ಪಷ್ಟಪಡಿಸಿದರು.

ಇನ್ನು ಜಾತಿಗಣತಿ ವರದಿ ಹಸ್ತಾಂತರಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್​ ಹೆಗ್ಡೆ, ಕಾಂತರಾಜು ಸಮಿತಿ 2014-15ರಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ದತ್ತಾಂಶ  ಸಂಗ್ರಹ ಮಾಡಿತ್ತು. ಕಾಂತರಾಜು ಸಮಿತಿ ದತ್ತಾಂಶ ಪ್ರಕಾರ ನಾವು ವರದಿ ಸಿದ್ಧಪಡಿಸಿದ್ದೇವೆ​. ಜಾತಿಗಣತಿ ವರದಿಗೆ ಕಾರ್ಯದರ್ಶಿ, ಎಲ್ಲಾ ಸದಸ್ಯರು ಸಹಿಯೂ ಇದೆ. ವರದಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಆಗಲಿದೆ ಎಂದರು.

 

ಜಾತಿ ಗಣತಿ ವರದಿಯಲ್ಲಿ ಏನೇನಿದೆ?

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರಿಂದ ಸಲ್ಲಿಕೆಯಾದ ಜಾತಿ ಗಣತಿ ವರದಿಯಲ್ಲಿ ಒಟ್ಟು 13 ಪ್ರತಿಗಳನ್ನು ಸಿದ್ಧಪಡಿಸಲಾಗಿದೆ. ಎಲ್ಲ ಪ್ರತಿಗಳು ಕೂಡ ದೊಡ್ಡ ಸಂಪುಟಗಳಾಗಿವೆ. ಕೆಲವು ಸಂಪುಟಗಳನ್ನು ಎರಡು-ಮೂರು ಭಾಗಗಳಾಗಿ ಮಾಡಲಾಗಿದೆ. ಇನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಎಲ್ಲ ವರ್ಗಗಳ ಶೈಕ್ಷಣಿಕ ಮತ್ತು ಸಾಮಾಜಿಕ ಸ್ಥಾನಮಾನಗಳ ಸಮೀಕ್ಷೆಯನ್ನು ವರದಿಯು ಒಳಗೊಂಡಿದೆ.

ಜಾತಿಗಣ ವರದಿಯಲ್ಲಿರುವ ಅಂಶಗಳು

  • ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ಸಮಗ್ರ ರಾಜ್ಯ ವರದಿ
  •  ಜಾತಿವಾರು ಜನಸಂಖ್ಯೆ ವಿವರ – 1 ಸಂಪುಟ
  •  ಜಾತಿ / ವರ್ಗಗಳ ಲಕ್ಷಣಗಳು( ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನ ಹೊರತು ಪಡಿಸಿ)
  •  ಜಾತಿ / ವರ್ಗಗಳ ಪ್ರಮುಖ ಲಕ್ಷಣಗಳು ( ಪರಿಶಿಷ್ಟ ಜಾತಿಗಳು)
  •  ಜಾತಿ ವರ್ಗಗಳ ಪ್ರಮುಖ ಲಕ್ಷಣಗಳು ( ಪರಿಶಿಷ್ಟ ಪಂಗಡಗಳು)
  •  ವಿಧಾನಸಭಾ ಕ್ಷೇತ್ರಗಳ ಜಾತಿವಾರು ಅಂಕಿ ಅಂಶಗಳು (ಎರಡು ಸಿಡಿಗಳು)
  •  ಸಾಮಾಜಿಕ ಮತ್ತು ಶೈಕ್ಷಣಿಕ ಸಂಸ್ಥೆ 2015 ರ ದತ್ತಾಂಶಗಳ ಅಧ್ಯಯನ ವರದಿ 2024

2013 ರಿಂದ 2018ರವರೆಗಿನ ಸಿದ್ದರಾಮಯ್ಯ ಮೊದಲ ಬಾರಿ ಸಿಎಂ ಆಗಿದ್ದ ಅವಧಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯನ್ನು ಮಾಡಿಸಲಾಗಿತ್ತು. ಆದ್ರೆ ಕಾರಣಂತರಗಳಿಂದ ಸರ್ಕಾರ ವರದಿ ಸ್ವೀಕರಿಸಿರಲಿಲ್ಲ. ಈ ಮಧ್ಯೆ ವರದಿ ಸೋರಿಕೆಯಾಗಿದ್ದು ಭಾರಿ ಸದ್ದು ಮಾಡಿತ್ತು. ಇದೀಗ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಿದ್ದಾರೆ. ಅಧಿಕಾರಕ್ಕೆ ಬಂದ್ಮೇಲೆ ಜಾತಿ ಗಣತಿ ವರದಿಯನ್ನ ಸ್ವೀಕಾರ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.

154 ಕೋಟಿ ರೂ. ವೆಚ್ಚದಲ್ಲಿ ವರದಿ ತಯಾರಿಕೆ: ಬರೋಬ್ಬರಿ 154 ಕೋಟಿ ರೂ. ವೆಚ್ಚದಲ್ಲಿ ಈ ಜಾತಿ ಗಣತಿ ವರದಿಯನ್ನು ಸಿದ್ಧಪಡಿಸಲಾಗಿದೆ. ಕಾಂಗ್ರೆಸ್‌ ಸ್ವಪಕ್ಷೀಯ ನಾಯಕರು ಹಾಗೂ ಬಿಜೆಪಿ ನಾಯಕರ ವಿರೋಧದ ನಡುವೆಯೂ ಸಿಎಂ ಸಿದ್ದರಾಮಯ್ಯ ವರದಿ ಸ್ವೀಕಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಅದರಲ್ಲೂ ಕಾಂಗ್ರೆಸ್ ಪಕ್ಷದಲ್ಲೇ ಒಳ ಬೇಗುದಿ ಸೃಷ್ಟಿಸಿರುವ ಜಾತಿ ಗಣತಿ ಜ್ವಾಲೆ ಸ್ಫೋಟವಾಗುತ್ತಾ ಎನ್ನುವುದನ್ನು ಕಾದುನೋಡಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist