ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಜ್ಯುವೆಲರಿ ಶಾಪ್‌ನಲ್ಲಿ ಕೈಚಳಕ – ಆಭರಣ ಖರೀದಿ ನೆಪದಲ್ಲಿ ನೆಕ್ಲೇಸ್ ಎಗರಿಸಿದ ಮಹಿಳೆ

Twitter
Facebook
LinkedIn
WhatsApp
santu 1723 kaupligt 2

ಬೆಂಗಳೂರು: ಜ್ಯುವೆಲರಿ ಶಾಪ್‌ನಲ್ಲಿ ಮಹಿಳೆಯೊಬ್ಬರು ಆಭರಣ ಖರೀದಿ ನೆಪದಲ್ಲಿ ನೆಕ್ಲೇಸ್ ಎಗರಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಜಯನಗರ ೪ನೇ ಬ್ಲಾಕ್ ಶಾಪಿಂಗ್ ಕಾಂಪ್ಲೆಕ್ಸ್ನಲ್ಲಿ ಘಟನೆದಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಜ್ಯುವೆಲರಿ ಶಾಪ್‌ನಲ್ಲಿ ಆಭರಣಗಳನ್ನ ನೋಡುತ್ತಿರುವಂತೆ ಮಹಿಳೆ ನಾಟಕವಾಡಿದ್ದಾಳೆ. ಸಿಬ್ಬಂದಿ ಕಣ್ತಪ್ಪಿಸಿ ನೆಕ್ಲೇಸನ್ನು ಬ್ಯಾಗ್‌ನಲ್ಲಿ ಹಾಕಿಕೊಂಡಿದ್ದಾಳೆ. ಮಹಿಳೆಯ ಮಹಿಳೆಯ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಬಗ್ಗೆ ಜಯನಗರ ಪೊಲೀಸರಿಗೆ ಜ್ಯುವೆಲರಿ ಶಾಪ್ ಸಿಬ್ಬಂದಿ ದೂರು ನೀಡಿದ್ದಾರೆ. ಸಿಸಿಟಿವಿ ಪರಿಶೀಲನೆ ನಡೆಸಿ ಮಹಿಳೆಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

 

ಸಿನಿಮಾ ಸ್ಟೈಲಲ್ಲಿ ಪಿಸ್ತೂಲ್ ತೋರಿಸಿ ಉದ್ಯಮಿಗೆ ಬೆದರಿಕೆ – 50 ಲಕ್ಷ ರೂ. ದರೋಡೆ

ಚಿತ್ರದುರ್ಗ: ಹೋಟೆಲ್ ಉದ್ಯಮಿಯೊಬ್ಬರ (Businessman) ಮಗ ಹಾಗೂ ಅಳಿಯನನ್ನು ಒತ್ತೆಯಾಳಾಗಿಟ್ಟುಕೊಂಡು ಹಾಡ ಹಗಲಲ್ಲೇ ಪಿಸ್ತೂಲ್ ಮತ್ತು ಮಾರಕಾಸ್ತ್ರ ತೋರಿಸಿ 50 ಲಕ್ಷ ರೂ. ದೋಚಿರುವ ಘಟನೆ ಚಿತ್ರದುರ್ಗದಲ್ಲಿ (Chitradurga) ನಡೆದಿದೆ.

ಚಿತ್ರದುರ್ಗದ ಬ್ಯಾಂಕ್ ಕಾಲೋನಿಯ ಉದ್ಯಮಿ ನಜೀರ್ ಅಹಮ್ಮದ್ ಎಂಬುವವರ ಮನೆಗೆ ಶನಿವಾರ ಬೆಳಿಗ್ಗೆ 9.20 ಕ್ಕೆ ಮೂವರು ದರೋಡೆಕೋರರು ನುಗ್ಗಿದ್ದಾರೆ. ನಜೀರ್ ಅವರ ಮಗ ಸಮೀರ್ ಹಾಗೂ ಅಳಿಯ ಶಹನಾಜ್ ಅವರಿಗೆ ಪಿಸ್ತೂಲ್ ತೋರಿಸಿ ಒತ್ತೆಯಾಳಾಗಿಟ್ಟುಕೊಂಡಿದ್ದಾರೆ. ಬಳಿಕ 50 ಲಕ್ಷ ರೂ. ನಗದು, 120 ಗ್ರಾಂ ಚಿನ್ನ ಮತ್ತು ಮೊಬೈಲ್‍ಗಳನ್ನು ದೋಚಿ ಪರಾರಿಯಾಗಿದ್ದಾರೆ. 

ದರೋಡೆ ವೇಳೆ ಮನೆಯ ಸದಸ್ಯರನ್ನೆಲ್ಲ ತಂತಿಯಿಂದ ಕಟ್ಟಲಾಗಿತ್ತು. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೇ ಅವರಿಂದಲೇ ಚಹಾ ಮಾಡಿಸಿಕೊಂಡು ಕುಡಿದು ಹೋಗಿದ್ದಾರೆ. ನಜೀರ್ ಅವರನ್ನು ಉಸಿರುಗಟ್ಟಿಸಿ ಕೊಲ್ಲಲು ಯತ್ನಿಸಿದ್ದಾರೆ. ಈ ವೇಳೆ ಏನಾದರೂ ಉಪಾಯ ಮಾಡಿದರೆ ಜೀವ ತೆಗೆಯುವ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿದೆ.

ಈ ಸಂಬಂಧ ಚಿತ್ರದುರ್ಗ ಬಡಾವಣೆ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೂರ್ವ ವಲಯ ಐಜಿ ತ್ಯಾಗರಾಜ್ ಹಾಗೂ ಚಿತ್ರದುರ್ಗ ಎಸ್ಪಿ ಪರಶುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಬಡಾವಣೆ ಠಾಣೆ ಸಿಪಿಐ ನಯೂಮ್ ಹಾಗೂ ನಗರ ಠಾಣೆ ಸಿಪಿಐ ತಿಪ್ಪೇಸ್ವಾಮಿ ನೇತೃತ್ವದ ತಂಡ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಜೀರ್ ಅವರ ಮನೆಯ ಸುತ್ತಲೂ ಪೊಲೀಸ್ ಅಧಿಕಾರಿಗಳ ಕುಟುಂಬಗಳು ವಾಸವಾಗಿವೆ. ಆದರೆ ಯಾರಿಗೂ ಸ್ವಲ್ಪವೂ ಅನುಮಾನ ಬಾರದಂತೆ ಕಿರಾತಕರು ದರೋಡೆ ನಡೆಸಿದ್ದಾರೆ. ಈ ಘಟನೆಯಿಂದ ಕೋಟೆನಾಡಿನ ಜನರಲ್ಲಿ ಆತಂಕ ಮನೆ ಮಾಡಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist