ಮಂಗಳವಾರ, ಡಿಸೆಂಬರ್ 3, 2024
ಕೊಲೆಯಲ್ಲಿ ಪವಿತ್ರಾ ಪಾತ್ರವಿಲ್ಲ, ಓದುತ್ತಿರುವ ಮಗಳಿದ್ದಾಳೆ, ಹೀಗಾಗಿ ಜಾಮೀನು ನೀಡಬೇಕು: ವಕೀಲರ ವಾದ-ಕಾರು - ಬಸ್‌ ಡಿಕ್ಕಿ: ಐವರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ-ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಫೆಂಗಲ್ ಆರ್ಭಟ : ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ-ಸಮುದಾಯ ಉಳಿಯಬೇಕಾದ್ರೆ ಕನಿಷ್ಠ ಮೂರು ಮಕ್ಕಳು ಅವಶ್ಯಕ : ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್-ಭೀಕರ ಅಪಘಾತ : ಬಸ್ ಪಲ್ಟಿಯಾಗಿ ಮೂವರು ಮಹಿಳೆಯರ ಸಾವು!-ಆತ್ಮಹತ್ಯೆಗೆ ಶರಣಾದ ಸೀರಿಯಲ್ ನಟಿ ಶೋಭಿತಾ ಶಿವಣ್ಣ-ಡ್ರಗ್ಸ್ ಪ್ರಕರಣದಲ್ಲಿ ನಟ ಅಜಾಜ್ ಖಾನ್ ಪತ್ನಿ ಬಂಧನ!-ಮರಕ್ಕೆ ಡಿಕ್ಕಿ ಹೊಡೆದ ಕಾರು: ಇಬ್ಬರು ವೈದ್ಯರು, ಓರ್ವ ವಕೀಲ ಸ್ಥಳದಲ್ಲೇ ಸಾವು-ತುಳು ಸಿನಿಮಾ ನಿರ್ಮಾಪಕ ಅರುಣ್ ರೈ ವಿರುದ್ಧ ಎಫ್‌ಐಆರ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Jivitputrika: ಪವಿತ್ರ ಸ್ನಾನದ ವೇಳೆ 37 ಮಕ್ಕಳು ಸೇರಿ 46 ಮಂದಿ ನದಿಯಲ್ಲಿ ಮುಳುಗಿ ದುರ್ಮರಣ

Twitter
Facebook
LinkedIn
WhatsApp
Jivitputrika

ಬುಧವಾರ ನಡೆದ ಉತ್ಸವದಲ್ಲಿ ರಾಜ್ಯದ 15 ಜಿಲ್ಲೆಗಳಲ್ಲಿ ಈ ಘಟನೆಗಳು ಸಂಭವಿಸಿವೆ. ‘ಜೀವಿತ್ಪುತ್ರಿಕಾ’ (Jivitputrika) ಹಬ್ಬದ ಸಮಯದಲ್ಲಿ, ಮಹಿಳೆಯರು ತಮ್ಮ ಮಕ್ಕಳ ಯೋಗಕ್ಷೇಮಕ್ಕಾಗಿ ಉಪವಾಸ ಮಾಡುತ್ತಾರೆ ಮತ್ತು ಇಬ್ಬರೂ ಪವಿತ್ರ ಸ್ನಾನ ಮಾಡುತ್ತಾರೆ.

ಪಾಟ್ನಾ: ಬಿಹಾರದ (Bihar) ಹಲವೆಡೆ `ಜಿತಿಯಾ’ ಅಥವಾ ‘ಜೀವಿತ್ಪುತ್ರಿಕಾ’ ಹಬ್ಬದ ಆಚರಣೆ ವೇಳೆ ನದಿಗಳಿಗೆ ಪವಿತ್ರ ಸ್ನಾನಕ್ಕೆ ತೆರಳಿದ್ದ 37 ಮಕ್ಕಳು, 7 ಮಹಿಳೆಯರು ಸೇರಿದಂತೆ 46 ಜನರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಬುಧವಾರ ನಡೆದ ಉತ್ಸವದಲ್ಲಿ ರಾಜ್ಯದ 15 ಜಿಲ್ಲೆಗಳಲ್ಲಿ ಈ ಘಟನೆಗಳು ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜಿತಿಯಾ ಪರ್ವ್ ಮೂರು ದಿನಗಳ ಹಿಂದೂ ಹಬ್ಬವಾಗಿದ್ದು ಈ ‘ಜೀವಿತ್ ಪುತ್ರಿಕಾ’ (Jivitputrika) ಹಬ್ಬದ ಸಂದರ್ಭದಲ್ಲಿ ಮಹಿಳೆಯರು ತಮ್ಮ ಮಕ್ಕಳ ಯೋಗಕ್ಷೇಮಕ್ಕಾಗಿ ಉಪವಾಸ ಮಾಡುತ್ತಾರೆ.

ಬಳಿಕ ನದಿ, ಕೊಳ, ಅಥವಾ ಇತರೆ ಜಲಮೂಲಗಳಲ್ಲಿ ಸಾಮೂಹಿಕ ಪವಿತ್ರ ಸ್ನಾನ ಮಾಡುತ್ತಾರೆ. ಈ ಪವಿತ್ರ ಸ್ನಾನದ ವೇಳೆ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೂಲಗಳ ಪ್ರಕಾರ ಬಿಹಾರದ ಪೂರ್ವ ಚಂಪಾರಣ್, ಪಶ್ಚಿಮ ಚಂಪಾರಣ್, ನಳಂದಾ, ಔರಂಗಾಬಾದ್, ಕೈಮೂರ್, ಬಕ್ಸರ್, ಸಿವಾನ್, ರೋಹ್ತಾಸ್, ಸರನ್, ರಾಜಧಾನಿ ಪಾಟ್ನಾ, ವೈಶಾಲಿ, ಮುಜಾಫರ್‌ಪುರ, ಸಮಸ್ತಿಪುರ್, ಗೋಪಾಲ್‌ಗಂಜ್ ಮತ್ತು ಅರ್ವಾಲ್ ಜಿಲ್ಲೆಗಳಲ್ಲಿ ಸಾವುಗಳು ವರದಿಯಾಗಿವೆ.

ಇನ್ನು ಈ ಪವಿತ್ರ ಸ್ನಾನ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಬಿಹಾರ ಸರ್ಕಾರ ತಲಾ 4 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ.

ಇನ್ನು ಕಳೆದ ಅಕ್ಟೋಬರ್‌ನಲ್ಲಿ ಇದೇ ಹಬ್ಬದ ಸಂದರ್ಭದಲ್ಲಿ ಬಿಹಾರದಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಕೇವಲ 24 ಗಂಟೆಗಳ ಅಂತರದಲ್ಲಿ 15 ಮಕ್ಕಳು ಸೇರಿದಂತೆ 22 ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.

ಗುಜರಾತ್ ಸರ್ಕಾರವನ್ನು ಜಾಡಿಸಿದ ಸುಪ್ರೀಂ ಕೋರ್ಟ್:

ನವದೆಹಲಿ (ಸೆ.26): ಬಿಲ್ಕಿಸ್ ಬಾನು ಪ್ರಕರಣದಲ್ಲಿ ಅಪರಾಧಿಗಳ ಬಿಡುಗಡೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರಕ್ಕೆ ಜಾಡಿಸಿದೆ. ಸರ್ಕಾರದ ವಿರುದ್ಧ ಮಾಡಿದ್ದ ಟೀಕೆಗಳನ್ನು ತೆಗೆದು ಹಾಕುವಂತೆ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ.

2002 ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು ಮತ್ತು ಅವರ ಕುಟುಂಬದ ಸದಸ್ಯರನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣದ 11 ಅಪರಾಧಿಗಳನ್ನು ಅವಧಿಗೂ ಮುನ್ನ ಬಿಡುಗಡೆ ಮಾಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು.

ಅಪರಾಧಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಈ ಪ್ರಕರಣದಲ್ಲಿ ಗುಜರಾತ್ ಸರ್ಕಾರ ಮತ್ತು ಅಪರಾಧಿಗಳ ಮಧ್ಯೆ ಹೊಂದಾಣಿಕೆ ಇದೆ ಎಂದು ಕೋರ್ಟ್ ಆರೋಪಿಸಿತ್ತು.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಉಜ್ಜ್ವಲ್ ಭೂಯನ್ ಅವರ ಪೀಠವು ಈ ಪ್ರಕರಣದ ವಿಚಾರಣೆಯನ್ನು 11 ದಿನಗಳ ಕಾಲ ನಡೆಸಿ ಅಕ್ಟೋಬರ್‌ನಲ್ಲಿ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಸುಪ್ರೀಂ ಕೋರ್ಟ್ ಜನವರಿ 8 ರಂದು ಬಿಡುಗಡೆ ಆದೇಶವನ್ನು ರದ್ದುಗೊಳಿಸಿತು.

ಬಿಲ್ಕಿಸ್ ಬಾನು ಪ್ರಕರಣದಲ್ಲಿ ಅಪರಾಧಿಗಳನ್ನು ಬಿಡುಗಡೆ ಮಾಡುವಲ್ಲಿ ಗುಜರಾತ್ ಸರ್ಕಾರ ಅಧಿಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ವಾಸ್ತವವಾಗಿ, ಗುಜರಾತ್ ಸರ್ಕಾರವು ಬಿಲ್ಕಿಸ್ ಬಾನು ಪ್ರಕರಣದ 11 ಅಪರಾಧಿಗಳನ್ನು 1992 ರ ಹಳೆಯ ರಿಯಾಯಿತಿ ನೀತಿಯ ಆಧಾರದ ಮೇಲೆ ಬಿಡುಗಡೆ ಮಾಡಿತ್ತು. ಆದಾಗ್ಯೂ, ಈ ನೀತಿಯನ್ನು 2014 ರಲ್ಲಿ ಹೊಸ ಕಾನೂನಿನ ಮೂಲಕ ಬದಲಾಯಿಸಲಾಯಿತು, ಇದು ಮರಣದಂಡನೆ ಪ್ರಕರಣಗಳಲ್ಲಿ ಅಪರಾಧಿಗಳ ಬಿಡುಗಡೆಯನ್ನು ನಿಷೇಧಿಸುತ್ತದೆ.

ಜೈಲಿನಿಂದ ಬಿಡುಗಡೆಯಾದ ನಂತರ ಅಪರಾಧಿಗಳಿಗೆ ಮಾಲೆ ಹಾಕಿ, ಸಿಹಿ ತಿನ್ನಿಸಿ ನಾಯಕರಂತೆ ಸ್ವಾಗತಿಸಲಾಯಿತು. ಈ ಸ್ವಾಗತದಲ್ಲಿ ಬಿಜೆಪಿ ಸಂಸದರು ಮತ್ತು ಶಾಸಕರು ಭಾಗವಹಿಸಿದ್ದರು. ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಈ ರೀತಿ ಮಹಿಮೆ ಪಡಿಸಿದ್ದಕ್ಕೆ ದೇಶಾದ್ಯಂತ ಟೀಕೆ ವ್ಯಕ್ತವಾಗಿತ್ತು.

2002 ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನು 21 ವರ್ಷ ವಯಸ್ಸಿನವರಾಗಿದ್ದರು. ಸಾಬರಮತಿ ಎಕ್ಸ್‌ಪ್ರೆಸ್‌ಗೆ ಬೆಂಕಿ ಹಚ್ಚಿದ ನಂತರ ಬೆಂಕಿಯ ಗಲಭೆಯ ಸಮಯದಲ್ಲಿ ತಪ್ಪಿಸಿಕೊಳ್ಳಲು ಓಡುತ್ತಿದ್ದಾಗ ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು. ಈ ಬೆಂಕಿಯಲ್ಲಿ 59 ಕರವೇ ಸೇವಕರು ಸಾವನ್ನಪ್ಪಿದ್ದರು. ಗಲಭೆಯಲ್ಲಿ ಹತ್ಯೆಯಾದ ಏಳು ಕುಟುಂಬ ಸದಸ್ಯರಲ್ಲಿ ಅವರ ಮೂರು ವರ್ಷದ ಮಗಳು ಕೂಡ ಸೇರಿದ್ದಳು.

ಸಂಜಯ್​ ರಾವತ್​ಗೆ 15 ದಿನಗಳ ಜೈಲು ಶಿಕ್ಷೆ:

ಮಾನನಷ್ಟ ಪ್ರಕರಣವೊಂದರಲ್ಲಿ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಅವರಿಗೆ ನ್ಯಾಯಾಲಯ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ. ಬಿಜೆಪಿಯ ಮಾಜಿ ಸಂಸದ ಕಿರೀಟ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಮುಂಬೈ ನ್ಯಾಯಾಲಯವು ಸಂಜಯ್ ರಾವತ್ ಅವರಿಗೆ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ. 

ಮಾನನಷ್ಟಕ್ಕಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 500 ರ ಅಡಿಯಲ್ಲಿ ರಾವತ್ ಅವರನ್ನು ದೋಷಿ ಎಂದು ಘೋಷಿಸಲಾಯಿತು ಮತ್ತು 15 ದಿನಗಳ ಕಾಲ ಸರಳ ಜೈಲು ಶಿಕ್ಷೆ ವಿಧಿಸಲಾಯಿತು. 25,000 ದಂಡವನ್ನೂ ವಿಧಿಸಲಾಗಿದೆ.

ಬಿಜೆಪಿ ನಾಯಕನ ಪತ್ನಿ ಮೇಧಾ ಸೋಮಯ್ಯ ರಾವುತ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಮೀರಾ ಭಯಂದರ್‌ನಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣದಲ್ಲಿ 100 ಕೋಟಿ ರೂಪಾಯಿ ಹಗರಣದಲ್ಲಿ ಭಾಗಿಯಾಗಿರುವ ಬಗ್ಗೆ ರಾವತ್ ತನ್ನ ಮತ್ತು ತನ್ನ ಪತಿ ವಿರುದ್ಧ ಆಧಾರರಹಿತ ಮತ್ತು ಮಾನಹಾನಿಕರ ಆರೋಪಗಳನ್ನು ಮಾಡಿದ್ದಾರೆ ಎಂದು ಅವರು ಹೇಳಿದರು.

ಜನಸಾಮಾನ್ಯರ ಮುಂದೆ ನನ್ನ ವರ್ಚಸ್ಸು ಹಾಳು ಮಾಡಲು ಆರೋಪ ಮಾಡಲಾಗಿತ್ತು. ಸಂಜಯ್ ರಾವುತ್ ಅವರ ಈ ಹೇಳಿಕೆ ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಸಂಜಯ್ ವಿರುದ್ಧ ಸೇಡು ತೀರಿಸಿಕೊಂಡ ಮೇಧಾ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ವೇಳೆ ಮೇಧಾ ಅವರು ಸಂಜಯ್ ಸಿಂಗ್ ಅವರ ಆರೋಪ ಸುಳ್ಳು ಎಂದು ಹೇಳಿದ್ದರು. ಸಂಜಯ್ ರಾವತ್ ಮತ್ತು ಮೇಧಾ ಸೋಮಯ್ಯ ಅವರ ಈ ಪ್ರಕರಣ ಮುಂಬೈನ ಕೆಳ ನ್ಯಾಯಾಲಯದಲ್ಲಿ ನಡೆಯುತ್ತಿತ್ತು. ವಿಚಾರಣೆ ವೇಳೆ ಸಂಜಯ್ ರಾವುತ್ ತಪ್ಪಿತಸ್ಥ ಎಂದು ಕೋರ್ಟ್ ತೀರ್ಪು ನೀಡಿದೆ.

ಇರಾಕ್ ನ ಯುವತಿ ಅಸ್ವಸ್ಥ; ಚೀನಾದತ್ತ ಹೊರಟಿದ್ದ ವಿಮಾನ ತುರ್ತು ಲ್ಯಾಂಡಿಂಗ್:

ಕೋಲ್ಕತಾ: ಬಾಗ್ದಾದ್‌ನಿಂದ ಚೀನಾದ ಗುವಾಂಗ್‌ಝೌಗೆ ತೆರಳುತ್ತಿದ್ದ ಇರಾಕಿ ಏರ್‌ವೇಸ್ ವಿಮಾನವೊಂದರಲ್ಲಿ ಪ್ರಯಾಣಿಕರೊಬ್ಬರು ಹಠಾತ್ತನೆ ಅಸ್ವಸ್ಥಗೊಂಡ ನಂತರ ಕೋಲ್ಕತಾ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ.

ಬಳಿಕ 16 ವರ್ಷದ ಇರಾಕಿನ ಯುವತಿಯನ್ನು ನಗರದ ಆಸ್ಪತ್ರೆಯೊಂದಕ್ಕೆ ಕರೆದೊಯ್ದಿದಾಗ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

100 ಪ್ರಯಾಣಿಕರು ಮತ್ತು 15 ಸಿಬ್ಬಂದಿಯನ್ನೊಳಗೊಂಡ IA-473 ವಿಮಾನ ಮಾರ್ಗ ಬದಲಿಸಿ ಬುಧವಾರ ರಾತ್ರಿ 10:18 ಕ್ಕೆ ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗಿತ್ತು.

ವಿಮಾನ ನಿಲ್ದಾಣದಲ್ಲಿದ್ದ ವೈದ್ಯಕೀಯ ತಂಡ ತಕ್ಷಣವೇ ಯುವತಿ ಡೆರಾನ್ ಸಮೀರ್ ಅಹ್ಮದ್ ಅವರನ್ನು ಪರಿಶೀಲಿಸಿತು. ನಾಡಿಮಿಡಿತ ಕಂಡುಬಂದಿಲ್ಲ. ಯಾವುದೇ ಹೃದಯ ಬಡಿತ ಕಂಡುಬಂದಿಲ್ಲವೂ ನಂತರ ಹೆಚ್ಚಿನ ಪರೀಕ್ಷೆಗಾಗಿ ಹತ್ತಿರದ ಆಸ್ಪತ್ರೆಗೆ ಕಳುಹಿಸಿದರು ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವಕ್ತಾರರು ತಿಳಿಸಿದ್ದಾರೆ. ಗುರುವಾರ ಮುಂಜಾನೆ 1.18 ರ ಸುಮಾರಿಗೆ ಇಬ್ಬರು ಸಹ ಪ್ರಯಾಣಿಕರೊಂದಿಗೆ ಹದಿಹರೆಯದ ಯುವತಿಯನ್ನು ಎಎಐ ಆಂಬ್ಯುಲೆನ್ಸ್ ಮೂಲಕ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಮೃತಪಟ್ಟಿರುವುದಾಗಿ ಆಸ್ಪತ್ರೆ ತಿಳಿಸಿದೆ ಎಂದು ಎಎಐ ಅಧಿಕಾರಿ ತಿಳಿಸಿದ್ದಾರೆ.

21 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ:  ಹಾಸ್ಟೆಲ್ ವಾರ್ಡನ್‌ಗೆ ಗಲ್ಲು ಶಿಕ್ಷೆ

ಗುವಾಹಟಿ: ಇಲ್ಲಿನ ಸರ್ಕಾರಿ ವಸತಿ ಶಾಲೆಯೊಂದರಲ್ಲಿ (Arunachal school hostel) 2014ರಿಂದ 2022ರ ವರೆಗೆ 21 ಮಕ್ಕಳ ಮೇಲೆ ಲೈಂಗಿಕ ದೌರ್ನಜ್ಯ ಎಸಗಿದ್ದ ಹಾಸ್ಟೆಲ್‌ ವಾರ್ಡನ್‌ (Hostel Warden) ಯುಮ್ಕೆನ್‌ ಬಾಗ್ರಾಗೆ ಅರುಣಾಚಲ ಪ್ರದೇಶದ ವಿಶೇಷ ನ್ಯಾಯಾಲಯ ಗುರುವಾರ ಗಲ್ಲು ಶಿಕ್ಷೆ ವಿಧಿಸಿದೆ.

ಅಲ್ಲದೇ ಮಕ್ಕಳು ದೂರು ನೀಡಿದರೂ ಅಪರಾಧವನ್ನು ವರದಿ ಮಾಡುವಲ್ಲಿ ವಿಫಲರಾದ ಮಾಜಿ ಮುಖ್ಯಶಿಕ್ಷಕ ಸಿಂಗ್ತುಂಗ್ ಯೋರ್ಪೆನ್ ಮತ್ತು ಹಿಂದಿ ಶಿಕ್ಷಕಿ ಮಾರ್ಬೊಮ್ ನ್ಗೊಮ್ದಿರ್ ಅವರಿಗೆ ಪೋಕ್ಸೊ ಕಾಯ್ದೆ ಅಡಿ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ವಿಶೇಷ ನ್ಯಾಯಾಧೀಶರಾದ ಜಾವೆಪ್ಲು ಚೈ ತೀರ್ಪು ಪ್ರಕಟಿಸಿದ್ದಾರೆ. ಭಾರತೀಯ ದಂಡ ಸಂಹಿತೆ (IPC) ಮತ್ತು POCSO ಕಾಯ್ದೆ ಅಡಿಯಲ್ಲಿ ಮೂವರನ್ನು ದೋಷಿಗಳೆಂದು ಘೋಷಿಸಿದ್ದಾರೆ. ವಿದ್ಯಾರ್ಥಿಗಳು ದೂರು ನೀಡಿದರೂ ಸಹ ಶಾಲೆಯ ಖ್ಯಾತಿಗೆ ಧಕ್ಕೆಯಾಗುತ್ತದೆ ಎಂಬ ಕಾರಣಕ್ಕೆ ಮೌನವಾಗಿರುವಂತೆ ಕೇಳಿಕೊಂಡಿದ್ದರು ಎಂಬ ಕಾರಣಕ್ಕೆ ಶಿಕ್ಷೆ ವಿಧಿಸಲಾಗಿದೆ ಎಂದು ನ್ಯಾಯಾಧೀಶರು ಉಲ್ಲೇಖಿಸಿದ್ದಾರೆ.

ಈ ಕುರಿತು ಮಾತನಾಡಿರುವ 21 ಮಕ್ಕಳ ಪರ ವಕೀಲ ಓಯಾಮ್‌ ಬಿಂಗೆಪ್‌, ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿರುವುದು ಸಂತೋಷವಾಗಿದೆ. ಇದು ದೇಶದಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ನೀಡಲಾದ ಮೊದಲ ಮರಣದಂಡನೆ ಪ್ರಕರಣವಾಗಿದೆ. ಇದರಲ್ಲಿ ಸಂತ್ರಸ್ತರು ಸತ್ತಿಲ್ಲ, ದೌರ್ಜನ್ಯ ಎಸಗಿದವರು ಸಾಯುತ್ತಾರೆ ಎಂದು ಸಹ ಉಲ್ಲೇಖಿಸಿದ್ದಾರೆ.

ಇನ್ನಿಬ್ಬರು ಆರೋಪಿಗಳಾದ ಅದೇ ಶಾಲೆಯ ಇನ್ನೋರ್ವ ಶಿಕ್ಷಕ ತಾಜಂಗ್ ಯೋರ್ಪೆನ್ ಮತ್ತು ಹಾಸ್ಟೆಲ್ ವಾರ್ಡನ್ ಪರಿಚಯಸ್ತ ಡೇನಿಯಲ್ ಪರ್ಟಿನ್ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ.

2022ರ ನವೆಂಬರ್‌ನಲ್ಲಿ ಪ್ರಕರಣ ಬೆಳಕಿಗೆ ಬಂದಿತ್ತು. ವಸತಿ ಶಾಲೆಯಲ್ಲಿ 12 ವರ್ಷದ ಅವಳಿ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ ಮತ್ತು ಅತ್ಯಾಚಾರಕ್ಕೆ ಯತ್ನಿಸಿದ್ದಕ್ಕಾಗಿ ಆರೋಪಿ ಬಾಗ್ರಾ ವಿರುದ್ಧ ವ್ಯಕ್ತಿಯೊಬ್ಬರು ದೂರು ದಾಖಲಿಸಿದ್ದರು. ಬಳಿಕ ವಿಶೇಷ ತನಿಖಾ ತಂಡ ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿತು. ಬಳಿಕ ಬ್ರಾಗ್ರಾ ಹಾಸ್ಟೆಲ್‌ ವಾರ್ಡನ್‌ ಆಗಿದ್ದ 2014-2022ರ ಅವಧಿಯಲ್ಲಿ 6 ರಿಂದ 14 ವರ್ಷ ವಯಸ್ಸಿನ 6 ಹುಡುಗರು ಸೇರಿದಂತೆ, 21 ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬುದನ್ನು ಪತ್ತೆ ಮಾಡಿತು.

ಕಳೆದ ಜುಲೈನಲ್ಲಿ ಈ ಸಂಬಂಧ ಚಾರ್ಜ್‌ಶೀಟ್‌ ಸಹ ಸಲ್ಲಿಸಲಾಗಿತ್ತು. ಈ ಮಾಹಿತಿ ಅನುಸಾರ, ವಾರ್ಡನ್‌ ಮಾದಕ ದ್ರವ್ಯ ಸೇವಿಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದ. ಹಲ್ಲೆ ನಡೆಸಿರುವ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಕೂಡ ಹಾಕಿದ್ದ. ಇದರಿಂದ 6 ಮಕ್ಕಳು ಆತ್ಮಹತ್ಯೆಗೆ ಯತ್ನಿಸಿದ್ದರು ಎಂಬುದನ್ನು ಎಸ್‌ಐಟಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ.

ನಂತರ ಆರೋಪಿ ಬಾಗ್ರಾ ವಿರುದ್ಧ ಐಪಿಸಿಯ ಸೆಕ್ಷನ್ 328, 292 ಮತ್ತು 506 ಮತ್ತು ಪೋಕ್ಸೋ ಕಾಯ್ದೆಯ ಸೆಕ್ಷನ್ 6, 10 ಮತ್ತು 12ರ ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಿತ್ತು. ಅಲ್ಲದೇ ಘಟನೆಯನ್ನು ವರದಿ ಮಾಡುವಲ್ಲಿ ವಿಫಲರಾದ ಮಹಿಳಾ ಶಿಕ್ಷಕಿ ನ್ಗೊಮ್ದಿರ್‌ಗೆ ಐಪಿಸಿ ಸೆಕ್ಷನ್ 506, ಪೋಕ್ಸೊ ಕಾಯ್ದೆಯ ಸೆಕ್ಷನ್ 17 ಮತ್ತು 21 (1)ರ ಅಡಿ ಶಿಕ್ಷೆ ವಿಧಿಸಲಾಗಿದೆ. ಇನ್ನೂ ಹಲ್ಲೆ ನಡೆಸಿದ ಸಂದರ್ಭದಲ್ಲಿ ಶಾಲೆಯ ಮುಖ್ಯಶಿಕ್ಷಕನಾಗಿದ್ದ ಯೋರ್ಪೆನ್‌ಗೆ ಐಪಿಸಿ ಸೆಕ್ಷನ್ 17, 21 (2), ಶಿಕ್ಷೆ ವಿಧಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist