ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಜುಲೈ 11ರಂದು ಸ್ಮಾರ್ಟ್ ಫೋನ್ ಮಾರುಕಟ್ಟೆಗೆ ಬರಲಿದೆ ನಥಿಂಗ್‌ ಫೋನ್‌!

Twitter
Facebook
LinkedIn
WhatsApp
ms 170623 balliya 2

ಒನ್‍ ಪ್ಲಸ್‍ (OnePlus) ಕಂಪನಿಯ ಸಹಸ್ಥಾಪಕ ಕಾರ್ಲ್‍ ಪೇ ಒಡೆತನದ ನಥಿಂಗ್‍ ಕಂಪನಿ ಕಳೆದ ವರ್ಷ ತನ್ನ ಮೊಟ್ಟ ಮೊದಲ ಸ್ಮಾರ್ಟ್​​ಫೋನ್‍ ನಥಿಂಗ್ ಫೋನ್ 1 ಅನ್ನು ಹೊರತಂದು ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿತ್ತು. ಇದೀಗ ಸ್ಮಾರ್ಟ್​ಫೋನ್ ಜಗತ್ತಿನಲ್ಲಿ ಇತಿಹಾಸ ಸೃಷ್ಟಿಸಲು ನಥಿಂಗ್ ಪುನಃ ಬಂದಿದೆ. ತನ್ನ ವಿಭಿನ್ನ ಶೈಲಿಯ ಡಿಸೈನ್​ಗಳಿಗೆ ಹೆಸರಾಗಿರುವ ನಥಿಂಗ್ ಇದೀಗ ಹೊಸ ನಥಿಂಗ್‌ ಫೋನ್ (2) (Nothing Phone (2)) ಬಿಡುಗಡೆ ಮಾಡಲು ಎಲ್ಲ ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಇದೇ ಜುಲೈ 11 ರಂದು ಬಿಡುಗಡೆ ಆಗೋದು ಖಚಿತವಾಗಿದೆ.

ನಥಿಂಗ್‌ ಫೋನ್‌ (2) ಅಧಿಕೃತವಾಗಿ ಭಾರತವೂ ಸೇರಿದಂತೆ ಜಾಗತಿಕ ಮಾರುಕಟ್ಟೆಗೆ ಮುಂದಿನ ತಿಂಗಳು ಎಂಟ್ರಿ ನೀಡಲಿದೆ. ಈ ಸ್ಮಾರ್ಟ್‌ಫೋನ್‌ ಲಾಂಚ್‌ ಈವೆಂಟ್ ಜುಲೈ ಎರಡನೇ ವಾರದಲ್ಲಿ ನಡೆಯಲಿದೆ ಎಂದು ವರದಿಯಾಗಿದೆ. ಒಟ್ಟು ಮೂರು ರೂಪಾಂತರಗಳ ಆಯ್ಕೆಯಲ್ಲಿ ಬರಲಿದೆ. ಇದು ವೈಟ್‌ ಮತ್ತು ಬ್ಲಾಕ್‌ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದ್ದು, ಫ್ಲಿಪ್​ಕಾರ್ಟ್​ನಲ್ಲಿ ಸೇಲ್ ಕಾಣಲಿದೆ.

ಕಳೆದ ವರ್ಷ ರಿಲೀಸ್ ಆದ ನಥಿಂಗ್ ಫೋನ್ 1 ಗೆ ಎಲ್ಲರೂ ಫಿದಾ ಆಗಿದ್ದರು. ಅದರಂತೆ ಇದರ ಮುಂದುವರಿದ ಸರಣಿಯಾಗಿ ನಥಿಂಗ್ ಫೋನ್ (2) ಅನ್ನು ಲಾಂಚ್ ಮಡಲಾಗುತ್ತಿದ್ದು, ಈಗಾಗಲೇ ಇದು ಮಾರುಕಟ್ಟೆಯಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಇದು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ನಿಂದ ಪ್ರಮಾಣೀಕರಣವನ್ನು ಪಡೆದಿದೆ.

ಕಂಪನಿ ಈ ಫೋನಿನ ಫೀಚರ್ಸ್ ಅಥವಾ ಬೆಲೆಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಹಾಕಿಲ್ಲ. ಆದರೆ, ಮೂಲಗಳ ಪ್ರಕಾರ ನಥಿಂಗ್ ಫೋನ್ (2) ಬೆಲೆ 40,000 ರೂ. ಆಸುಪಾಸಿನಲ್ಲಿ ಕಾಣಿಸಿಕೊಳ್ಳಬಹುದು ಎನ್ನಲಾಗಿದೆ. ನಥಿಂಗ್ ಫೋನ್ (1) ಫೋನ್‌ಗೆ 30,499 ರೂ. ಗಳನ್ನು ನಿಗದಿ ಮಾಡಲಾಗಿತ್ತು.

ಲೀಕ್ ಆಗಿರುವ ಮಾಹಿತಿಯ ಪ್ರಕಾರ ನಥಿಂಗ್ ಫೋನ್ (2) ಸ್ಮಾರ್ಟ್‌ಫೋನ್ 6.67 ಇಂಚಿನ OLED ಡಿಸ್‌ಪ್ಲೇ ಹೊಂದಿರಲಿದ್ದು, ಇದು 120Hz ರಿಫ್ರೆಶ್ ರೇಟ್‌ ನೀಡಲಿದೆ ಎಂದು ತಿಳಿದುಬಂದಿದೆ. ಆದರೆ, ಬ್ರೈಟ್‌ನೆಸ್‌ ವಿವರ ಹಾಗೂ ಫಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯ ಸೇರಿದಂತೆ ಇನ್ನಿತರೆ ವಿವರ ತಿಳಿದುಬಂದಿಲ್ಲ. ಬಲಿಷ್ಠವಾದ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ ಜನ್ 1 ಪ್ರೊಸೆಸರ್‌ ಮೂಲಕ ಕಾರ್ಯನಿರ್ವಹಿಸುವ ಸಾಧ್ಯತೆ ಇದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಫೋನ್ ಟ್ರಿಪಲ್‌ ಕ್ಯಾಮೆರಾ ರಚನೆ ಹೊಂದಿರಲಿದೆ ಎಂದು ಹೇಳಲಾಗುತ್ತಿದೆ. ಈ ಫೋನಿನ ಹಿಂಭಾಗದಲ್ಲರುವ ಎಲ್ಲ ಮೂರು ಕ್ಯಾಮೆರಾಗಳು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇರಲಿದೆಯಂತೆ. ಅದರಂತೆ ಮುಂಭಾಗ ಸೆಲ್ಪಿ ಮತ್ತು ವಿಡಿಯೋ ಕರೆಗಳಿಗಾಗಿ 32 ಮೆಗಾ ಪಿಕ್ಸೆಲ್ ಕ್ಯಾಮೆರಾ ಆಯ್ಕೆ ಪಡೆದುಕೊಳ್ಳಲಿದೆ ಎನ್ನುವ ವದಂತಿಗಳಿವೆ.

ನಥಿಂಗ್ ಫೋನ್ (2) 4700mAh ಸಾಮರ್ಥ್ಯದ ಬ್ಯಾಟರಿಯಿಂದ ಪ್ಯಾಕ್‌ ಆಗಿರಲಿದ್ದು, ಫಾಸ್ಟ್‌ ಚಾರ್ಜಿಂಗ್‌ ಬೆಂಬಲ ಪಡೆದಿರಲಿದೆ ಎಂದು ತಿಳಿದುಬಂದಿದೆ. ಆದರೆ, ಇದು ಎಷ್ಟು ವೋಲ್ಟ್​ನದ್ದು ಎಂಬುದು ಬಹಿರಂಗವಾಗಿಲ್ಲ. ಈ ಫೋನ್ ಒನ್​ಪ್ಲಸ್ 11R ಮತ್ತು ಪಿಕ್ಸೆಲ್ 7a ಗೆ ಕಠಿಣ ಪೈಪೋಟಿ ನೀಡಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist