K.S.R.T.C: ಕೆಎಸ್ಆರ್ಟಿಸಿಯ 100 ಹೊಸ ಅಶ್ವಮೇಧ ಬಸ್‌ಗಳು ಲೋಕಾರ್ಪಣೆ; ಹೇಗಿದೆ ಸೌಲಭ್ಯ...!
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 100 ಹೊಸ ವಿನ್ಯಾಸ ಕರ್ನಾಟಕ ಸಾರಿಗೆ ಬಸ್ಸುಗಳ(ಅಶ್ವಮೇಧ ಕ್ಲಾಸಿಕ್ ಪ್ರಯಾಣದ ಮರುಕಲ್ಪನೆ ಪಾಯಿಂಟ್ ಟು ಪಾಯಿಂಟ್ ಎಕ್ಸ್ಪ್ರೆಸ್) ಬಸ್ಸುಗಳನ್ನು ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು.
ವಿಧಾನಸೌಧದ ಮುಂಭಾಗ ಸೋಮವಾರ ನಡೆದ ಕೆಎಸ್ಆರ್ಟಿಸಿ ಅಶ್ವಮೇಧ ಕ್ಲಾಸಿಕ್ ಎಕ್ಸ್ ಪ್ರೆಸ್ ಬಸ್ಸುಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಾರಿಗೆ ನಿಗಮದ ನೂತನ ಅಧ್ಯಕ್ಷ ಗುಬ್ಬಿ ವಾಸು ಮತ್ತಿತರರು ಭಾಗವಹಿಸಿದ್ದರು.
ಕಳೆದ ಎರಡು ಮೂರು ದಿನಗಳಿಂದ ದೇಶದಲ್ಲಿ ಬೇರೆ ರಾಜ್ಯಗಳ ಜನಪರ ಕಾರ್ಯಕ್ರಮಗಳ ಸಾಧನೆಯ ಮಾಹಿತಿ ತರಿಸಿಕೊಂಡಿದ್ದೇನೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2 ಸಾವಿರ ಬಸ್ ಗಳನ್ನು ಖರೀದಿಸಲು ಮುಂದಾಗಿದ್ದು, ಹಂತ ಹಂತವಾಗಿ ಇದನ್ನು ಮಾಡುತ್ತಿದ್ದೇವೆ. ಆಮೂಲಕ ಜನ ಸೇವೆಯಲ್ಲಿ ನಮ್ಮ ಸರ್ಕಾರ ಇತಿಹಾಸ ಬರೆದಿದೆ ಎಂದು ಡಿ ಕೆ ಶಿವಕುಮಾರ್ ಹೇಳಿದರು
ಸಾರಿಗೆ ಇಲಾಖೆಯಲ್ಲಿ 10 ಸಾವಿರ ಸಿಬ್ಬಂದಿ ನೇಮಕಕ್ಕೆ ನಮ್ಮ ಸರ್ಕಾರ ಮುಂದಾಗಿದೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ 52 ಸಾವಿರ ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ಆರಂಭಿಸಲಾಗಿದೆ. ಆಮೂಲಕ ನಾವು ನಮ್ಮ ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದೇವೆ ಎಂದು ಡಿಸಿಎಂ ಹೇಳಿದರು
ಬಸ್ ಉದ್ಘಾಟನೆ ಬಳಿಕ ಸಿದ್ದರಾಮಯ್ಯ ಮಾತನಾಡಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಈ ವರ್ಷ ಒಂದು ಸಾವಿರ ಬಸ್ಸುಗಳನ್ನು ಸೇರ್ಪಡೆ ಮಾಡುತ್ತಿದ್ದು ಇಂದು ನೂರು ಬಸ್ಸುಗಳ ಬಿಡುಗಡೆಯಾಗಿದೆ. ರಾಜ್ಯದ ಜನರಿಗೆ 4 ಕಾರ್ಪೋರೇಷನ್‍ಗಳು ಬಸ್ಸುಗಳ ಸೇವೆಯನ್ನು ಒದಗಿಸುತ್ತಿದೆ. ನಾಲ್ಕು ವರ್ಷಗಳಿಂದ ಹೊಸ ಬಸ್ಸುಗಳನ್ನು ಸೇರ್ಪಡೆ ಮಾಡಿರಲಿಲ್ಲ ಎಂದರು.
ಗ್ಯಾರಂಟಿಗಳನ್ನು ಜಾರಿಗೊಳಿಸಲು ಸಾಧ್ಯವಿಲ್ಲ. ಪ್ರದಾನಿ ಮೋದಿಯವರೂ ರಾಜ್ಯ ದಿವಾಳಿಯಾಗುತ್ತದೆ ಎಂದರು. ತಾವು 10 ವರ್ಷದಿಂದ ಅಧಿಕಾರದಲ್ಲಿದ್ದರೂ ಇಂತಹ ಗ್ಯಾರಂಟಿಗಳನ್ನು ಜನಗರಿಗೆ ನೀಡಲಿಲ್ಲ. ವಿದೇಶದಲ್ಲಿರುವ ಕಪ್ಪು ಹಣವನ್ನು ದೇಶಕ್ಕೆ ತಂದರೆ ಭಾರತದ ಪ್ರತಿ ಕುಟುಂಬಕ್ಕೂ 15 ಲಕ್ಷ ನೀಡುವ ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವ, ರೈತರ ಆದಾಯ ದ್ವಿಗುಣಗೊಳಿಸುವ ಭರವಸೆ ನೀಡಿದ್ದರು ಎಂದು ಸಿಎಂ ಹೇಳಿದರು.
ಕೆಎಸ್ಆರ್ಟಿಸಿಯ ಹೊಸ ಅಶ್ವಮೇಧ ಬಸ್‌ಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸೇರಿದಂತೆ ಹಲವು ನಾಯಕರು ಪ್ರಯಾಣ ಬೆಳೆಸಿದರು