ಕಡಬ : ಕಾಲೇಜಿನ ಆವರಣದಲ್ಲಿ ಮೂವರು ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ..!
Twitter
Facebook
LinkedIn
WhatsApp

ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ (Acid Attack) ನಡೆದಿದೆ. ಕಿರಾತಕನೋರ್ವ ಮೂವರು ಹೆಣ್ಣು ಮಕ್ಕಳ ಮೇಲೆ ಆ್ಯಸಿಡ್ ಹಾಕಿ ಪರಾರಿಯಾಗಿದ್ದಾನೆ. ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಡಬ ಸರಕಾರಿ ಕಾಲೇಜಿನ ಆವರಣದಲ್ಲಿ ಪರೀಕ್ಷಾ ತಯಾರಿ ನಡೆಸುತ್ತಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಕಿಡಿಗೇಡಿಯೊಬ್ಬ ಆ್ಯಸಿಡ್ ದಾಳಿ ನಡೆಸಿದ್ದಾನೆ. ಆರೋಪಿ ಕೇರಳ ಮೂಲದವ ಎಂಬುದಾಗಿ ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ. ಆರೋಪಿ ಮಾಸ್ಕ್, ಹ್ಯಾಟ್ ಹಾಕಿಕೊಂಡು ಬಂದು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಮಾಡಿದ್ದಾನೆ. ಸದ್ಯ ಗಾಯಗೊಂಡ ವಿದ್ಯಾರ್ಥಿನಿಯರಿಗೆ ಕಡಬ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗುತ್ತಿದೆ.