ಕಡಬದ ಯುವಕ ವಿದೇಶದಲ್ಲಿ ನೇಣಿಗೆ ಶರಣು
Twitter
Facebook
LinkedIn
WhatsApp

ಕಡಬ, ಮೇ 30 : ವಿದೇಶದಲ್ಲಿ ಉದ್ಯೋಗದಲ್ಲಿರುವ ಕಡಬ ತಾಲೂಕಿನ ಕೊಯಿಲ ಗ್ರಾಮದ ಯುವಕನೋರ್ವ ವಿದೇಶದಲ್ಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಯಿಲ ಗ್ರಾಮದ ಸುಣ್ಣಾಡಿ ನಿವಾಸಿ ದಿ.ಮೋನಪ್ಪ ಪೂಜಾರಿಯವರ ಪುತ್ರ ಅವಿವಾಹಿತ ಸಂದೇಶ್ (32 ವರ್ಷ) ಎಂದು ಗುರುತಿಸಲಾಗಿದೆ.
ಇವರು ಕೊಲ್ಲಿ ರಾಷ್ಟ್ರದ ಓಮನ್ ದೇಶದ ಮಸ್ಕತ್‌ನಲ್ಲಿ ನೀರಿನ ಕಂಪನಿಯೊಂದರಲ್ಲಿ ಲೈನ್ ಸೇಲ್ ಉದ್ಯೋಗ ಮಾಡುತ್ತಿದ್ದು, ಎಂಟು ತಿಂಗಳ ಹಿಂದೆಯಷ್ಟೆ ಕೆಲಸಕ್ಕೆ ಸೇರಿದ್ದರು. ಇವರ ಸಹೋದರ ಸಂತೋಷ್ ಕೂಡಾ ಮಸ್ಕತ್‌ನಲ್ಲೇ ಉದ್ಯೋಗದಲ್ಲಿದ್ದು ಒಂದೇ ಕೊಠಡಿಯಲ್ಲಿ ವಾಸವಾಗಿದ್ದರು.
ಆತ್ಮಹತ್ಯೆ ಮಾಡಿಕೊಂಡ ಸಂದೇಶ್ ಸಂಬಂಧಿಯಾದ ಕೊಯಿಲ ಗ್ರಾಮದ ಅಂಬಾ ನಿವಾಸಿ ಚರಣ್ ಎಂಬ ಯುವಕ ಕೂಡಾ ಮಸ್ಕತ್‌ನಲ್ಲಿ ಉದ್ಯೋಗದಲ್ಲಿದ್ದು ಇವರು ಇನ್ನೊಂದು ಕೊಠಡಿಯಲ್ಲಿ ವಾಸವಾಗಿದ್ದಾರೆ. ಬೇಗ ಕರ್ತವ್ಯ ಮುಗಿಸಿ ಬಂದ ಸಂದೇಶ್ ಮನೆಯ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.