ಶನಿವಾರ, ಫೆಬ್ರವರಿ 22, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Kalaburagi: ಶಾಲೆಯಲ್ಲಿ ಬಾಲಕಿಯ ಅತ್ಯಾಚಾರಕ್ಕೆ ಯತ್ನ; ಶಿಕ್ಷಕನ ಬಂಧನ

Twitter
Facebook
LinkedIn
WhatsApp
Kalaburagi: Attempted rape of girl in school; Arrest of teacher

Kalaburagi: ಶಾಲಾ ತರಗತಿಯಲ್ಲಿ 11 ವರ್ಷದ ಶಾಲಾ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಶಿಕ್ಷಕನನ್ನು ಬಂಧಿಸಿರುವ ಘಟನೆ ಕಲಬುರಗಿಯಲ್ಲಿ (Kalaburagi) ನಡದಿದೆ. ಜಿಲ್ಲೆಯ ಆಳಂದ ತಾಲೂಕಿನ ನಿಂಬರಗಾ ಪೊಲೀಸ್ ಠಾಣಾ ವ್ಯಾಪ್ತಿಯ ಸರಕಾರಿ ಶಾಲೆಯಲ್ಲಿ ಘಟನೆ ವರದಿಯಾಗಿದೆ.

ಸಂತ್ರಸ್ತ ಬಾಲಕಿ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿದ್ದಳು. ಮಂಗಳವಾರ ಮಧ್ಯಾಹ್ನ ಊಟ ಮುಗಿಸಿ ಬಾಲಕಿ ತರಗತಿಗೆ ತೆರಳಿದ್ದ ವೇಳೆ ಆರೋಪಿ ಶಿಕ್ಷಕ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆದ ಸಂದರ್ಭದಲ್ಲಿ ಬಾಲಕಿ ತರಗತಿಯಲ್ಲಿ ಒಬ್ಬಳೇ ಇದ್ದಳು. ಗಲಾಟೆ ಮಾಡದಂತೆ ಬೆದರಿಸಿ ಅತ್ಯಾಚಾರಕ್ಕೆ ಶಿಕ್ಷಕ ಯತ್ನಿಸಿದ್ದಾನೆ. ಆದರೆ, ಬಾಲಕಿ ಪ್ರತಿರೋಧ ವ್ಯಕ್ತಪಡಿಸಿ ಸಹಾಯಕ್ಕಾಗಿ ಕಿರುಚಲು ಆರಂಭಿಸಿದಾಗ ಆರೋಪಿ ಶಿಕ್ಷಕ ಶಾಲಾ ಆವರಣದಿಂದ ಪರಾರಿಯಾಗಿದ್ದಾನೆ. ಸಂತ್ರಸ್ತೆ ತನ್ನ ಮನೆಗೆ ತೆರಳಿ ಘಟನೆಯ ಬಗ್ಗೆ ಪೋಷಕರಿಗೆ ತಿಳಿಸಿದ್ದಾಳೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಪೋಷಕರು ಮೊದಲು ಮುಖ್ಯೋಪಾಧ್ಯಾಯರನ್ನು ವಿಚಾರಿಸಿ ನಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ಶಿಕ್ಷಕನಿಗಾಗಿ ನಿಂಬರಗಾ ಪೊಲೀಸರು ಹುಡುಕಾಟ ನಡೆಸಿ ನಂತರ ಆತನನ್ನು ಬಂಧಿಸಿದ್ದಾರೆ. ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ತಡೆ ಕಾಯ್ದೆ (ಪೋಕ್ಸೊ) ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಅಡಿಯಲ್ಲಿ ಇತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೋಕ್ಸೋ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಸಿದೆ.

ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ:

ಶಿವಮೊಗ್ಗ: ಒಂದೇ ಕುಟುಂಬದ (Family) ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ (Shivamogga) ಕ್ಲಾರ್ಕ್ ಪೇಟೆಯಲ್ಲಿ ನಡೆದಿದೆ. 

ಮೃತರನ್ನು ಭುವನೇಶ್ವರಿ (52), ಭುವನೇಶ್ವರಿ ಸಹೋದರ ಮಾರುತಿ (28) ಭುವನೇಶ್ವರಿ ಮಗ ದರ್ಶನ್ (22) ಎಂದು ಗುರುತಿಸಲಾಗಿದೆ. ಭುವನೇಶ್ವರಿ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆಕೆಯ ಸಹೋದರ ಮಾರುತಿ ಗುಜರಿ ಅಂಗಡಿಯಲ್ಲಿ ಕೆಲಸ ಮಾಡ್ತಿದ್ದ.

ಭಾನುವಾರ ಎಂದಿನಂತೆ ಎಲ್ಲರೂ ಕೆಲಸ ಮಾಡಿಕೊಂಡು ಮನೆಗೆ ಬಂದಿದ್ದರು. ರಾತ್ರಿಯೇ ಮೂರು ಮಂದಿ ವಿಷ (Poison) ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಸಂಬಂಧಿಕರು ಕರೆ ಮಾಡಿದಾಗ ಯಾರೊಬ್ಬರು ಸ್ವೀಕರಿಸಿರಲಿಲ್ಲ. ಕೆಲಸಕ್ಕೂ ಹೋಗಿರಲಿಲ್ಲ. ಹಾಗಾಗಿ ಇಂದು ಮನೆ ಬಳಿ ಆಕೆಯ ಮತ್ತೊಬ್ಬ ಸಹೋದರ ಬಂದು ಬಾಗಿಲು ತೆರೆದು ನೋಡಿದಾಗ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.

ವಿಷಯ ತಿಳಿದು ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಶವ ಪರೀಕ್ಷೆಗೆ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿದರು. ಇನ್ನು ಮೂವರ ಆತ್ಮಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಮನೆಯ ಬಳಿ ದೊಡ್ಡ ಸಂಖ್ಯೆಯ ಜನ ನೆರೆದಿದ್ದರು. ಪೊಲೀಸರ ತನಿಖೆಯಿಂದಷ್ಟೇ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಬೇಕಿದೆ.

ಶಿಲ್ಪಿ ಅರುಣ್ ಯೋಗಿರಾಜ್ ಗೆ ವೀಸಾ ನಿರಾಕರಿಸಿದ ಅಮೇರಿಕ!

ಬೆಂಗಳೂರು: ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj) ಗೆ ಅಮೇರಿಕಾ ವೀಸಾ ನಿರಾಕರಿಸಿದೆ. AKKA ಸಮ್ಮೇಳನದಲ್ಲಿ ಭಾಗವಹಿಸಲು 20 ದಿನಗಳ ಪ್ರವಾಸಕ್ಕೆ ಅರುಣ್ ಯೋಗಿರಾಜ್ ಅಮೇರಿಕಾಗೆ ತೆರಳುವವರಿದ್ದರು. ಈ ಹಿನ್ನೆಲೆಯಲ್ಲಿ ಅರುಣ್ ಯೋಗಿರಾಜ್ ವೀಸಾಗೆ ಅರ್ಜಿ ಸಲ್ಲಿಸಿದ್ದರು.

ನಿಬಂಧನೆಗಳನ್ನು ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ಅರುಣ್ ಯೋಗಿರಾಜ್ ಗೆ ವೀಸಾ ನಿರಾಕರಣೆ ಮಾಡಲಾಗಿದೆ.

ಅಯೋಧ್ಯೆ ಮಂದಿರದ ಬಾಲ ರಾಮ ಪ್ರತಿಮೆ, ಇಂಡಿಯಾ ಗೇಟ್ ಬಳಿ ಇರುವ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಸೇರಿ ಹಲವು ಪ್ರತಿಮೆಗಳನ್ನು ಕೆತ್ತನೆ ಮಾಡಿರುವ ಶಿಲ್ಪಿ ಅರುಣ್ ಯೋಗಿರಾಜ್ ಅವರ ಪ್ರತಿಭೆ ಮತ್ತು ಕೊಡುಗೆಯನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಲಾಗಿದೆ.

ಅಮೆರಿಕದ ಕನ್ನಡ ಕೂಟಗಳ ಸಂಘ, ವಿಶ್ವ ಕನ್ನಡ ಸಮ್ಮೇಳನ-2024 ಕಾರ್ಯಕ್ರಮ ವರ್ಜೀನಿಯಾದ ರಿಚ್ಮಂಡ್ನಲ್ಲಿ ಆಯೋಜಿಸಲಾಗಿದೆ. ಈ ಕಾರ್ಮಕ್ರಮಕ್ಕೆ ಯೋಗಿರಾಜ್ ಮತ್ತು ಅವರ ಕುಟುಂಬಸ್ಥರನ್ನು ಆಹ್ವಾನಿಸಲಾಗಿತ್ತು. ವೀಸಾ ಅರ್ಜಿಯನ್ನು ತಿರಸ್ಕರಿಸಿರುವ ಅಮೆರಿಕ ರಾಯಭಾರ ಕಚೇರಿ ಇದುವರೆಗೆ ಯಾವುದೇ ಕಾರಣವನ್ನು ನೀಡಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist