Kanguva : 38 ಭಾಷೆಗಳಲ್ಲಿ ರಿಲೀಸ್ ಆಗಲಿದೆ ಸೂರ್ಯ ನಟನೆಯ ‘ಕಂಗುವ’ ಸಿನಿಮಾ!!
ತಮಿಳಿನ ಹೆಸರಾಂತ ನಟ ಸೂರ್ಯ, ಇದೀಗ ಬಾಲಿವುಡ್ ನತ್ತ ಮುಖ ಮಾಡಿದ್ದಾರೆ. ಹೌದು, ಅವರು ಹಿಂದಿ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಚಿತ್ರದಲ್ಲಿ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ (Janhvi Kapoor)ನಾಯಕಿಯಾಗಿ ನಟಿಸಲಿದ್ದಾರಂತೆ. ಚಿತ್ರದ ಕುರಿತಂತೆ ಸಾಕಷ್ಟು ವಿವರಗಳು ಸಿಗದೇ ಇದ್ದರೂ, ಸೂರ್ಯ ಮತ್ತು ಜಾಹ್ನವಿ ಕಾಂಬಿನೇಷನ್ ಬಗ್ಗೆ ಸಖತ್ ಸುದ್ದಿಗಳು ಹರಿದಾಡುತ್ತಿವೆ.
ಒಂದು ಕಡೆ ಸೂರ್ಯ ಬಾಲಿವುಡ್ ಪ್ರವೇಶ ಮಾಡುತ್ತಿದ್ದರೆ ಮತ್ತೊಂದು ಕಡೆ ಸೂರ್ಯ (Surya) ನಟನೆಯ ‘ಕಂಗುವ’ (Kanguva) ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಆಗಿದೆ. ಈ ಪೋಸ್ಟರ್ ನಲ್ಲಿ ಸೂರ್ಯ ಸಖತ್ ಮಿಂಚಿದ್ದಾರೆ. ಪೋಸ್ಟರ್ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ. ಜೊತೆಗೆ ಈ ಸಿನಿಮಾವನ್ನು ಬರೋಬ್ಬರಿ 38 ಭಾಷೆಗಳಲ್ಲಿ ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಜೊತೆಗೆ 3 ಡಿ ತಂತ್ರಜ್ಞಾನದಲ್ಲೂ ಈ ಸಿನಿಮಾವನ್ನು ನೋಡಬಹುದಾಗಿದೆ. ಈ ಸಿನಿಮಾದ ಶೂಟಿಂಗ್ ಇನ್ನೂ ಕಂಪ್ಲೀಟ್ ಆಗಿಲ್ಲ. ಆಗಲೇ ಭರ್ಜರಿ ವ್ಯಾಪಾರ ಕೂಡ ಆರಂಭಿಸಿದೆ. ಭಾರೀ ಮೊತ್ತಕ್ಕೆ ಓಟಿಟಿಗೆ ಸೇಲ್ ಆಗುವ ಮೂಲಕ ಸಂಭ್ರಮವನ್ನು ಇಮ್ಮಡಿಗೊಳಿಸಿದೆ.
ಮೂಲಗಳ ಪ್ರಕಾರ ಅಮೆಜಾನ್ ಪ್ರೈಮ್ ಸಂಸ್ಥೆಯು ಕಂಗುವ ಸಿನಿಮಾದ ಓಟಿಟಿ (OTT) ಹಕ್ಕನ್ನು ಬರೋಬ್ಬರಿ 80 ಕೋಟಿಗೆ ಖರೀದಿ ಮಾಡಿದೆಯಂತೆ. ಇದು ಎಲ್ಲ ಭಾಷೆಯ ಹಕ್ಕುಗಳನ್ನೂ ಒಳಗೊಂಡಿದೆ ಎನ್ನಲಾಗುತ್ತಿದೆ. ಈ ಮಾಹಿತಿಯನ್ನು ಚಿತ್ರತಂಡವೇ ಬಹಿರಂಗ ಪಡಿಸಿದೆ ಎಂದು ಕೆಲ ಮಾಧ್ಯಮಗಳ ವರದಿ ಮಾಡಿವೆ.
ಸ್ಟುಡಿಯೋ ಗ್ರೀನ್ನಡಿ ಕೆ.ಇ. ಜ್ನಾನ ವೇಲ್ ರಾಜ ನಿರ್ಮಿಸಿ, ಶಿವ (Shiva) ನಿರ್ದೇಶಿಸುತ್ತಿರುವ ಈ ಚಿತ್ರವು ಪ್ರಾರಂಭವಾದಾಗಿನಿಂದ ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ. ಬಹುಕೋಟಿ ವೆಚ್ಚದ ಈ ಚಿತ್ರದಲ್ಲಿ ಸೂರ್ಯಗೆ ನಾಯಕಿಯಾಗಿ ಬಾಲಿವುಡ್ ಬೆಡಗಿ ದಿಶಾ ಪಠಾಣಿ (Disha Pathani) ಅಭಿನಯಿಸುತ್ತಿದ್ದು, ಯೋಗಿ ಬಾಬು ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಕಂಗುವ’ ಚಿತ್ರವು ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿರುವುದರಿಂದ ಎಲ್ಲ ಭಾಷೆಗಳಿಗೂ ಕನೆಕ್ಟ್ ಆಗುವಂತಹ ಶೀರ್ಷಿಕೆಯೊಂದರ ಹುಡುಕಾಟದಲ್ಲಿ ಚಿತ್ರತಂಡ ಇತ್ತು. ಆ ಶೀರ್ಷಿಕೆ ಕೊನೆಗೂ ಸಿಕ್ಕಿದ್ದು, ‘ಕಂಗುವ’ ಎಂದರೆ, ಬೆಂಕಿಯ ಶಕ್ತಿಯುಳ್ಳವನು ಎಂದರ್ಥ. ಇಲ್ಲಿ ನಾಯಕ ಒಬ್ಬ ಸೂಪರ್ ಹೀರೋ ಆಗಿದ್ದು, ಹಲವು ಅವತಾರಗಳಲ್ಲಿ ಕಾಣಿಸಿಕೊಳ್ಳುತ್ತಾನೆ.
ಬರೋಬ್ಬರಿ 20 ಕೆಜಿ ತೂಕ ಇಳಿಸಿಕೊಂಡ ಬಾಲಿವುಡ್ ಸುಂದರಿ
ಬಾಲಿವುಡ್ (Bollywood)ನ ಹೆಸರಾಂತ ನಟಿ ಸೋನಂ ಕಪೂರ್ ಅಚ್ಚರಿಯ ಸಂಗತಿಯೊಂದನ್ನು ಬಹಿರಂಗಗೊಳಿಸಿದ್ದಾರೆ. ತಾಯಿಯಾದ ನಂತರ ಅವರ ತೂಕ ಹೆಚ್ಚಾಗಿತ್ತು. ಈಗ 20 ಕೆಜಿ ತೂಕವನ್ನು ಇಳಿಸಿಕೊಂಡಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಈ ಮೂಲಕ ಮತ್ತೆ ಸಿನಿಮಾ ರಂಗದಲ್ಲಿ ಸಕ್ರಿಯರಾಗಿರುವ ಕುರಿತು ಸುಳಿವು ನೀಡಿದ್ದಾರೆ.
ಮೊನ್ನೆಯಷ್ಟೇ ಸೋನಂ ಕಪೂರ್ (Sonam Kapoor) ದಾಂಪತ್ಯ ಜೀವನಕ್ಕೆ ಕಾಲಿಟ್ಟು 5 ವರ್ಷಗಳಾಗಿವೆ. ಈ ಖುಷಿಯ ಸಂದರ್ಭದ ವೇಳೆ ಮೊದಲ ಬಾರಿಗೆ ಮಗ ವಾಯು (Vayu) ಮುಖವನ್ನ ನಟಿ ರಿವೀಲ್ ಮಾಡುವ ಮೂಲಕ ಅಭಿಮಾನಿಗಳ ಖುಷಿ ಇಮ್ಮಡಿಗೊಳಿಸಿದ್ದರು.
ಇಷ್ಟು ದಿನ ಮಗ ವಾಯು ಮುಖ ಎಲ್ಲೂ ಕಾಣದಂತೆ ಕ್ಯಾಮೆರಾ ಕಣ್ಣಿಂದ ದೂರ ಇಟ್ಟಿದ್ದರು ಸೋನಂ. ಆಲಿಯಾ ಭಟ್ ಅವರಂತೆಯೇ ಮಗನ ಫೋಟೋ ಎಲ್ಲೂ ರಿವೀಲ್ ಮಾಡಿರಲಿಲ್ಲ. ತಮ್ಮ ಮದುವೆ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮಗ ವಾಯು ಫೋಟೋ ರಿವೀಲ್ ಮಾಡಿದ್ದರು. ಅಭಿಮಾನಿಗಳಿಗೆ ಸೋನಂ ಮಗುವಿಗೆ ಶುಭ ಹಾರೈಸಿದ್ದರು.
‘ಸಾವರಿಯಾ’ ಸಿನಿಮಾ ಮೂಲಕ ಬಾಲಿವುಡ್‌ಗೆ ಎಂಟ್ರಿ ಕೊಟ್ಟ ನಟಿ ಸೋನಂ ಕಪೂರ್ ಅವರು ‘ಐ ಹೇಟ್ ಲವ್ ಸ್ಟೋರಿ’ ಸಿನಿಮಾ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡರು. 2018ರಲ್ಲಿ ಉದ್ಯಮಿ ಆನಂದ್ ಅಹುಜಾ (Anand Ahuja) ಜೊತೆ ಸೋನಂ ಮದುವೆಯಾದರು. ಇದೀಗ ಮಗ ವಾಯು ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ.