ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಣ್ಣೂರು: ಖಾಸಗಿ ಬಸ್ ಗೆ ರಿಕ್ಷಾ ಡಿಕ್ಕಿ ಹೊಡೆದು ಸಿಎನ್ ಜಿ ಸಿಲಿಂಡರ್ ಸ್ಫೋಟ; ಇಬ್ಬರು ಸಜೀವ ದಹನ!

Twitter
Facebook
LinkedIn
WhatsApp
ಕಣ್ಣೂರು: ಖಾಸಗಿ ಬಸ್ ಗೆ ರಿಕ್ಷಾ ಡಿಕ್ಕಿ ಹೊಡೆದು ಸಿಎನ್ ಜಿ ಸಿಲಿಂಡರ್ ಸ್ಫೋಟ; ಇಬ್ಬರು ಸಜೀವ ದಹನ!

ಕಣ್ಣೂರು ಅಕ್ಟೋಬರ್ 14: ಸಿಎನ್ ಜಿ ಚಾಲಿತ ಆಟೋ ರಿಕ್ಷಾವೊಂದು ಅಪಘಾತಕ್ಕೀಡಾದ ಬಳಿಕ ಬೆಂಕಿ ಹೊತ್ತಿಕೊಂಡು ಆಟೋದಲ್ಲಿದ್ದ ಇಬ್ಬರು ಸಜೀವವಾಗಿ ದಹನವಾದ ಘಟನೆ ಕಣ್ಣೂರಿನ ಕತಿರೂರಿನಲ್ಲಿ ನಡೆದಿದೆ.

ಅಪಘಾತದಲ್ಲಿ ಚಾಲಕ ಅಭಿಲಾಷ್ (37) ಮತ್ತು ಆತನ ಸ್ನೇಹಿತ ಸಜೀಶ್ (36) ಸುಟ್ಟು ಕರಕಲಾಗಿದ್ದಾರೆ. ಆಟೋರಿಕ್ಷಾ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅಟೋ ಪಲ್ಟಿಯಾಗಿದ್ದು, ಈ ವೇಳೆ ಸಿಎನ್ ಜಿ ಸಿಲಿಂಡರ್‌ನಿಂದ ಬೆಂಕಿ ಹೊತ್ತಿಕೊಂಡಿದೆ.

ಬೆಂಕಿಯ ಕೆನ್ನಾಲಗೆಗೆ ಸ್ಥಳೀಯರಿಗೂ ಆಟೋ ರಿಕ್ಷಾದ ಹತ್ತಿರಕ್ಕೂ ಹೋಗಲು ಆಗಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಬಳಿಕ ಅಗ್ನಿಶಾಮಕ ದಳ ಬೆಂಕಿ ನಂದಿಸಿದ್ದು, ಪೊಲೀಸರು ಮೃತದೇಹಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತರಿಬ್ಬರ ಶವಗಳು ಗುರುತು ಹಿಡಿಯಲಾಗದಷ್ಟು ಸುಟ್ಟು ಕರಕಲಾಗಿದ್ದರಿಂದ ಅವರನ್ನು ಗುರುತಿಸಲು ಸಾಕಷ್ಟು ಸಮಯ ಹಿಡಿಯಿತು. ಪೊಲೀಸರು ಆಟೋದಲ್ಲಿದ್ದ ಲೈಸೆನ್ಸ್ ಪ್ಲೇಟ್ ಬಳಸಿ ಅದು ಅಭಿಲಾಷ್ ಅವರದ್ದೇ ಎಂದು ನಿರ್ಧರಿಸಿದ್ದಾರೆ. ಮತ್ತೊಂದೆಡೆ, ಸಜೀಶ್ ತನ್ನ ಸಹೋದರಿಯ ಮನೆಗೆ ಭೇಟಿ ನೀಡಲು ಆಗಾಗ್ಗೆ ಅಭಿಲಾಷ್ ಆಟೋದಲ್ಲಿ ಬಂದಿದ್ದ ಎಂದು ತಿಳಿದು ಬಂದಿದೆ.
ದುರಂತವೆಂದರೆ, ಸಹೋದರಿಯ ಮನೆಯಿಂದ ಕೇವಲ ನೂರು ಮೀಟರ್ ದೂರದಲ್ಲಿ ಅಪಘಾತ ಸಂಭವಿಸಿದೆ. ಅಭಿಲಾಷ್ ಆರು ತಿಂಗಳ ಹಿಂದೆಯಷ್ಟೇ ಆಟೋ ಖರೀದಿಸಿದ್ದರು.

ಎಕ್ಸ್‌ಪ್ರೆಸ್ ವೇಯಲ್ಲಿ ಸರಣಿ ಅಪಘಾತ – ಹಲವರಿಗೆ ಗಾಯ

ಮಂಡ್ಯ: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ (Expressway) ಮೂರು ಕಾರುಗಳ ನಡುವೆ ಸರಣಿ ಅಪಘಾತ (Accident) ಸಂಭವಿಸಿದ ಪರಿಣಾಮ ಹಲವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಶ್ರೀರಂಗಪಟ್ಟಣ (Srirangapatna) ಬಳಿಯ ಗೌರಿಪುರದ (Gouripura) ಬಳಿ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಪಘಾತ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ (Traffic Jam) ಉಂಟಾಗಿದ್ದು, ಸುಮಾರು ಒಂದು ಕಿಲೋಮೀಟರ್ ಉದ್ದಕ್ಕೂ ವಾಹನಗಳು ನಿಂತಿದ್ದವು. ಸರಣಿ ಅಪಘಾತದಿಂದ ರಸ್ತೆ ಸಂಪೂರ್ಣ ಬಂದ್ ಆಗಿದ್ದು, ಹಲವು ನಿಮಿಷಗಳ ಬಳಿಕ ಮತ್ತೆ ರಸ್ತೆ ಸಂಚಾರ ಪ್ರಾರಂಭವಾಗಿದೆ.

ಸರಣಿ ಅಪಘಾತದ ವೇಳೆ ಒಂದು ಕಾರು ಹೊತ್ತಿ ಉರಿದಿದೆ. ಈ ವೇಳೆ ಕಾರಿನಲ್ಲಿ ಇದ್ದವರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಕಿಟಕಿ ಗಾಜು ಹೊಡೆದು ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಲಾಗಿದೆ. ಅಪಘಾತದ ವೇಳೆ ಮಂಡ್ಯ ಎಸ್‌ಪಿ ವಾಹನಕ್ಕೂ ಕಾರು ಡಿಕ್ಕಿಯಾಗಿದೆ. ಎಸ್‌ಪಿ ಯತೀಶ್ ಶ್ರೀರಂಗಪಟ್ಟಣ ಕಡೆಗೆ ಹೋಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಈ ಕುರಿತು ಮಂಡ್ಯ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ